Monday, September 27, 2021
No menu items!
Home Karnataka ಧಾರಾಕಾರ ಮಳೆ ಇಪೆಕ್ಟ್; ಗಗನಕ್ಕೇರಿದ ಈರುಳ್ಳಿ …!!

ಧಾರಾಕಾರ ಮಳೆ ಇಪೆಕ್ಟ್; ಗಗನಕ್ಕೇರಿದ ಈರುಳ್ಳಿ …!!

ಬೆಂಗಳೂರು : ರಾಜ್ಯದಲ್ಲಿ ಬೆಂಬಿಡದೆ ಧಾರಾಕಾರ ಮಳೆ ಸುರಿಯುತ್ತಿದ್ದು, ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿದೆ. ಆದ್ದರಿಂದ ಬೆಂಗಳೂರಿನಲ್ಲಿ ಈರುಳ್ಳಿ ದರ ಕೆ.ಜಿ ಗೆ 75ರೂ ವರೆಗೂ ತಲುಪಿದೆ.

ರಾಜ್ಯದಲ್ಲಿ ಈರುಳ್ಳಿ ಬೆಳೆದಿರುವ ರೈತರ ಬೆಳೆಗಳು ಅತಿಯಾದ ಮಳೆಯಿಂದಾಗಿ ಹೊಲದಲ್ಲಿಯೇ ಹಾಳಾಗುತ್ತಿವೆ. ಆದ್ದರಿಂದ ಈರುಳ್ಳಿ ಪೂರೈಕೆಯಲ್ಲಿ ವ್ಯತ್ಯಾಸ ಉಂಟಾಗಿ ದರ ಹೆಚ್ಚಾಗಿದೆ. ಮಳೆ ಇನ್ನು ಹೆಚ್ಚಾದರೆ ಈರುಳ್ಳಿ ದರ ಸಾಮಾನ್ಯರಿಗೆ ಗಗನಕುಸುಮವಾಗಿ ಪರಿಣಮಿಸುವ ದಿನಗಳು ಹತ್ತಿರವಾಗಲಿದೆ ಎಂದು ಅಂದಾಜಿಸಲಾಗಿದೆ .

ಪ್ರಸ್ತುತ ಬೆಂಗಳೂರಿನ ಹಾಪ್ ಕಾಮ್ಸ್ ನಲ್ಲಿ ಕೆಜಿ ಈರುಳ್ಳಿ ದರ 75ರೂ ತಲುಪಿದೆ.ಸಗಟು ಮಾರುಕಟ್ಟೆಯಲ್ಲಿ ಉತ್ತಮ ಈರುಳ್ಳಿ ದರ ಕೆಜಿ ಗೆ 50-55 ರೂ ಗೆ ಮಾರಾಟಾವಾಗುತ್ತಿದ್ದರೆ, ಮಧ್ಯಮ ಗುಣಮಟ್ಟದ ಈರುಳ್ಳಿ 30-45 ರೂ ವರೆಗೆ ಮಾರಾಟವಾಗುತ್ತಿದೆ.

ಇನ್ನೊಂದೆಡೆ ಈರುಳ್ಳಿ ಕೊರತೆ ನೀಗಿಸಲು ಈಜಿಪ್ಟ್ ಈರುಳ್ಳಿ ಆಮದು ಮಾಡಿಕೊಳ್ಳುವ ಯೋಚನೆಯೂ ನಡಿಯುತ್ತಿದೆ ಎನ್ನಲಾಗಿದೆ. ಆಂಧ್ರದಲ್ಲೂ ಭಾರೀ ಮಳೆಯಾಗುತ್ತಿರುವುದರಿಂದ ಅಲ್ಲಿಂದಲೂ ಈರುಳ್ಳಿ ಪೂರೈಕೆಯಾಗದೇ ಇರುವುದು ದರ ಹೆಚ್ಚಳಕ್ಕೆ ಮತ್ತೊಂದು ಕಾರಣವಾಗಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments