Wednesday, June 16, 2021
No menu items!
Home Bharata ಆಸ್ಕರ್ ಪ್ರಶಸ್ತಿ ಪಡೆದಿದ್ದ ಭಾರತೀಯ ಮಹಿಳೆ ನಿಧನ

ಆಸ್ಕರ್ ಪ್ರಶಸ್ತಿ ಪಡೆದಿದ್ದ ಭಾರತೀಯ ಮಹಿಳೆ ನಿಧನ

91 ವರ್ಷದ ಭಾನು ಅಥೈಯ್ಯಾ ಇಂದು ಮುಂಬೈನಲ್ಲಿ ನಿಧನರಾಗಿದ್ದಾರೆ. ಮಲಗಿದ್ದಲ್ಲೇ ಪ್ರಾಣ ಬಿಟ್ಟಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ.ಭಾನು ಆಸ್ಕರ್ ಹಲವು ಪ್ರಮುಖ ಪ್ರಶಸ್ತಿಗಳನ್ನ ತೆಗೆದುಕೊಂಡಿದ್ದಾರೆ. 1983ರಲ್ಲಿ ರಿಚರ್ಡ್ ಆಟನ್ಬರೋ ನಟನೆಯ ‘ಗಾಂಧಿ’ಸಿನಿಮಾದಲ್ಲಿ ಅವರ ವಸ್ತ್ರ ವಿನ್ಯಾಸಕ್ಕೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು.

ಎಂಟು ವರ್ಷಗಳಿಂದ ಭಾನು ಅಥೈಯ್ಯಾ ಅವರಿಗೆ ಬ್ರೈನ್ ಟ್ಯೂಮರ್ ಇತ್ತಂತೆ. ಕಳೆದ ಮೂರು ವರ್ಷಗಳಿಂದ ಅವರ ದೇಹದ ಒಂದು ಬದಿ ಪಾರ್ಶ್ವವಾಯುಗೊಂಡು ಹಾಸಿಗೆ ಹಿಡಿದಿದ್ದ ಎನ್ನಲಾಗಿದೆ. ಇದಕ್ಕೆ ಚಿಕಿತ್ಸೆ ಕೂಡ ಪಡೆಯುತ್ತಿದ್ದರಂತೆ. ಆದ್ರೆ ಇಂದು ಮಲಗಿದ್ದಲ್ಲೇ ಕೊನೆಯುಸಿರೆಳೆದಿದ್ದಾರೆ. ಮುಂಬೈನ ಚಂದನವಾಡಿ ಚಿತಾಗಾರದಲ್ಲಿ ಅಂತ್ಯಸಂಸ್ಕಾರ ಕೂಡ ಇಂದೇ ನಡೆದಿದೆ.

ಭಾನು ಅಥೈಯ್ಯಾ 1929, ಏಪ್ರಿಲ್ 28 ರಂದು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿ ಜನಿಸಿದ್ದರು. 1956ರಲ್ಲಿ ಸಿಐಡಿ ಎಂಬ ಹಿಂದಿ ಸಿನಿಮಾಗೆ ಕಾಸ್ಟೂಮ್ ಡಿಸೈನ್ ಮಾಡುವ ಮೂಲಕ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿದ್ದರು. ಅಲ್ಲಿಂದ ಅವರ ಸಿನಿ ಪ್ರಯಾಣದಲ್ಲಿ ನೂರಕ್ಕೂ ಹೆಚ್ಚು ಸಿನಿಮಾಗಳಲ್ಲಿ ಕೆಲಸ ಮಾಡಿದ್ದಾರೆ. 1983ರಲ್ಲಿ ಗಾಂಧಿ ಸಿನಿಮಾದ ಅವರ ಕಾಸ್ಟೂಮ್ ವಿನ್ಯಾಸಕ್ಕೆ ಆಸ್ಕರ್ ಪ್ರಶಸ್ತಿ ಲಭಿಸಿತ್ತು. ಅದೇ ವರ್ಷ ಅವರು ಬಾಫ್ತಾ ಪ್ರಶಸ್ತಿಗೆ ನಾಮನಿರ್ದೇಶನಗೊಂಡಿದ್ದರು. ಲಗಾನ್ ಸಿನಿಮಾಕ್ಕೂ ಅವರು ವಸ್ತ್ರ ವಿನ್ಯಾಸ ಮಾಡಿದ್ದರು. ಆ ಚಿತ್ರದ ಕೆಲಸಕ್ಕೂ ಅವರಿಗೆ ರಾಷ್ಟ್ರೀಯ ಪ್ರಶಸ್ತಿ ಸಿಕ್ಕಿತ್ತು. 2009ರಲ್ಲಿ ಫಿಲಂ ಫೇರ್ ಲೈಫ್ಟೈಮ್ ಅಚೀವ್ಮೆಂಟ್ ಅವಾರ್ಡ್ ಲಭಿಸಿದೆ. 2004ರಲ್ಲಿ ಶಾರುಕ್ ಖಾನ್ ಅಭಿನಯದ ಸ್ವದೇಸ್ ಚಿತ್ರ ಅವರ ಕೊನೆಯ ಕೆಲಸವಾಗಿತ್ತು.

ಇಂದು ಅವರು ನಿಧನರಾಗಿದ್ದು, ಮಗಳು ರಾಧಿಕಾ ಅವರನ್ನು ಬಿಟ್ಟು ಅಗಲಿದ್ದಾರೆ. ಆಸ್ಕರ್ ಪ್ರಶಸ್ತಿ ಪಡೆದ ಭಾರತದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಭಾನು ಪಾತ್ರರಾಗಿದ್ದರು. ಇವರ ನಿಧನಕ್ಕೆ ಗಣ್ಯರು ಕಂಬನಿ ಮಿಡಿದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments