Friday, May 14, 2021
No menu items!
Home Bharata ಉತ್ತರಪ್ರದೇಶದ ಗ್ರಾಮಪಂಚಾಯತಿಯಲ್ಲಿ ಪಾಕಿಸ್ತಾನದ ಮಹಿಳೆ ಅಧ್ಯಕ್ಷೆ

ಉತ್ತರಪ್ರದೇಶದ ಗ್ರಾಮಪಂಚಾಯತಿಯಲ್ಲಿ ಪಾಕಿಸ್ತಾನದ ಮಹಿಳೆ ಅಧ್ಯಕ್ಷೆ

ಉತ್ತರ ಪ್ರದೇಶ: ಪಾಕಿಸ್ತಾನದ ಪ್ರಜೆ ಗ್ರಾಮಪಂಚಾಯತಿಯ ಅಧ್ಯಕ್ಷೆ ಸ್ಥಾನದಲ್ಲಿದ್ದರು. ಈ ಘಟನೆ ಸುಮಾರು ವರ್ಷಗಳ ಬಳಿಕ ಬೆಳಕಿಗೆ ಬಂದಿದ್ದು, ಅವರನ್ನು ಹುದ್ದೆಯಿಂದ ವಜಾಗೊಳಿಸಿದ್ದಾರೆ.

ಬಾನೋ ಬೇಗಂ ಎಂಬಾಕೆ 2015ರಲ್ಲಿ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಸ್ಪರ್ಧಿಸಿ ಗೆಲುವು ಸಾಧಿಸಿದ್ದರು. ಆದ್ರೆ ಆಕೆ ಪಾಕಿಸ್ತಾನ ಮಹಿಳೆ ಎಂದು ತಿಳಿದ ಬಳಿಕ ಅವರನ್ನು ಗ್ರಾಮ ಪ್ರಧಾನ್ ಹುದ್ದೆಯಿಂದ ತೆಗೆದುಹಾಕಲಾಗಿದ್ದು, ಈ ಬಗ್ಗೆ ತನಿಖೆ ನಡೆಸಲು ಆದೇಶಿಸಲಾಗಿದೆ. ಬಾನೊ ಬೇಗಂ ವಿರುದ್ಧ ಎಫ್ಐಆರ್ ದಾಖಲಿಸುವಂತೆ ಪೊಲೀಸರನ್ನು ಕೋರಲಾಗಿದೆ ಎಂದು ಇಟಾ ಜಿಲ್ಲಾ ಪಂಚಾಯತಿ ರಾಜ್ ಅಧಿಕಾರಿ ತಿಳಿಸಿದ್ದಾರೆ.

ಪಾಕಿಸ್ತಾನದ ಪ್ರಜೆಯಾಗಿರುವ 65 ವರ್ಷದ ಬಾನೋ ಬೇಗಂ, ದೀರ್ಘವಾದಿ ವೀಸಾ ಪಡೆದು ಕರಾಚಿಯಿಂದ ಭಾರತದ ಸಂಬಂಧಿಕರ ಮನೆಗೆ ಆಗಮಿಸಿದ್ದರು. ಉತ್ತರ ಪ್ರದೇಶದ ಸ್ಥಳೀಯ ನಿವಾಸಿ ಅಖ್ತರ್ ಅಲಿ ಎಂಬಾತನನ್ನು ಮದುವೆಯಾಗಿದ್ದರು. ಸುಮಾರು 40 ವರ್ಷಗಳಿಂದ ಭಾರತದಲ್ಲೇ ವಾಸ ಮಾಡುತ್ತಿದ್ದರು.

ಬಾನೋ ಬೇಗಂ ಬಳಿ ಇದ್ದ ಆಧಾರ್ ಕಾರ್ಡ್ ಸೇರಿದಂತೆ ಹಲವು ದಾಖಲೆಗಳು ಪತ್ತೆಯಾಗಿದೆ. ಬಾನೋ ಬೇಗಂ ವಿರುದ್ಧ ದೂರು ದಾಖಲಿಸಿಕೊಂಡಿರುವ ಅಧಿಕಾರಿಗಳು ಅವರಿಗೆ ಸಹಕಾರ ನೀಡಿದ್ದ ಎಲ್ಲರ ವಿರುದ್ಧ ತನಿಖೆ ಕೈಗೊಂಡು ಕ್ರಮಕೈಗೊಳ್ಳಲಾಗುವುದು ಎಂದು ಡಿಪಿಆರ್ಒ ಅಲೋಕ್ ಪ್ರಿಯದರ್ಶಿ ತಿಳಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments