ದೆಹಲಿ : ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನ ಶಾಂತಿಗಾಗಿ ಬಿಡುತ್ತಿದ್ದೇವೆ ಎಂದು ಹೇಳಿತ್ತು. ಆದ್ರೆ ಇದೀಗ ಅದರ ನಿಜ ಸ್ವರೂಪ ಬಯಲಾಗಿದೆ. ಕಳೆದ ಫೆಬ್ರವರಿಯಲ್ಲಿ ಪಾಕಿಸ್ತಾನ ವಿಂಗ್ ಕಮಾಂಡರ್ ಅಭಿನಂದನ್ ಅವರನ್ನು ತನ್ನ ವಶಕ್ಕೆ ಪಡೆದಿತ್ತು. ಆ ವಿಚಾರಕ್ಕೆ ದೇಶದೆಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಆ ನಂತರ ಪಾಕಿಸ್ತಾನ ಅವರನ್ನು ಭಾರತಕ್ಕೆ ಹಸ್ತಾಂತರಿಸಿತ್ತು.
ಆ ಘಟನೆಯನ್ನು ಪಾಕಿಸ್ತಾನದ ಸಂಸದ ನೆನಪಿಸಿಕೊಂಡಿದ್ದಾರೆ. ವಶಕ್ಕೆ ಪಡೆದ ವೇಳೆ ಭಾರತ ದಾಳಿ ನಡೆಸಬಹುದು ಎಂದು ಪಾಕಿಸ್ತಾನದ ಮಿಲಿಟರಿ ಮುಖ್ಯಸ್ಥ ಖಾಮರ್ ಜಾವೇದ್ ಬಾಜ್ವಾ ಅವರ ಕಾಲುಗಳು ನಡುಗುತ್ತಿದ್ದವು ಎಂದು ಹೇಳಿದ್ದಾರೆ. ಅಭಿನಂದನ್ ವರ್ಧಮಾನ್ ಅವರನ್ನು ಪಾಕಿಸ್ತಾನ ವಶಕ್ಕೆ ಪಡೆದ ಬಳಿಕ ಸಂಸದೀಯ ನಾಯಕರೊಂದಿಗೆ ಸಭೆ ನಡೆಸಲಾಯಿತು. ಆ ಸಭೆಯಲ್ಲಿ ಪಾಕ್ ವಿದೇಶಾಂಗ ಸಚಿವ ಷಾ ಮೊಹಮದ್ ಖುರೇಷಿ, ‘ನಾವು ಅಭಿನಂದನ್ ಅವರನ್ನು ವಶಕ್ಕೆ ಪಡೆದಿರುವುದರಿಂದ ಭಾರತ ನಮ್ಮ ದೇಶದ ಮೇಲೆ ದಾಳಿ ನಡೆಸುವ ಸಾಧ್ಯತೆಯಿದೆ’ ಎಂದು ಹೇಳಿದ್ದರು.
ಅಷ್ಟರಲ್ಲಾಗಲೇ ಮಿಲಿಟರಿ ಮುಖ್ಯಸ್ಥ ಬಾಜ್ವಾ ಅವರ ಕಾಲುಗಳು ನಡುಗುತ್ತಿದ್ದವು. ಅದಾದ ಬಳಿಕ ಸಭೆಯಲ್ಲಿ ಚರ್ಚೆ ಮಾಡಿ ಭಾರತೀಯ ವಾಯುಪಡೆಯ ವಿಂಗ್ ಕಮಾಂಡರ್ ಅಭಿನಂದನ್ ವರ್ಧಮಾನ್ ಅವರನ್ನು ಬಿಡುಗಡೆಗೊಳಿಸಲಾಯಿತು ಎಂದು ಪಾಕ್ ಸಂಸದ ಅಯಾಸ್ ಹಳೆಯ ಘಟನೆಯನ್ನು ನೆನಪಿಸಿಕೊಂಡಿದ್ದಾರೆ.
Gen Bajwa’s legs were shaking and @SMQureshiPTI said “release Abhinandan or India will attack at 9 pm”.
— Major Gaurav Arya (Retd) (@majorgauravarya) October 28, 2020
This is the real story of Abhinandan as told in Pakistani Parliament. Aur Pakistani bewakoof hum se pooch rahe thhey “how’s the tea”?
Bajwa se poocho “how are the trousers”? https://t.co/DOFbasojMK
ಪಾಕಿಸ್ತಾನದ ಸಂಸದ ಅಯಾಸ್ ಸಾಧಿಕ್ ಮಾತನಾಡಿರುವ ಈ ವಿಡಿಯೋವನ್ನು ನಿವೃತ್ತ ಮೇಜರ್ ಗೌರವ್ ಆರ್ಯ ಟ್ವಿಟ್ಟರ್ನಲ್ಲಿ ಶೇರ್ ಮಾಡಿಕೊಂಡಿದ್ದಾರೆ. ನಾವು ಒಂದು ವೇಳೆ ಅಭಿನಂದನ್ ಅವರನ್ನು ಬಿಡುಗಡೆ ಮಾಡದಿದ್ದರೆ ಭಾರತ ನಮ್ಮ ದೇಶದ ಮೇಲೆ ಇಂದು ರಾತ್ರಿ 9 ಗಂಟೆಗೆ ದಾಳಿ ನಡೆಸುವ ಸಾಧ್ಯತೆಯಿದೆ ಎಂದು ಪಾಕ್ ವಿದೇಶಾಂಗ ಸಚಿವ ಖುರೇಷಿ ಹೇಳಿದ್ದರು ಎಂದು ಕೂಡ ವಿಡಿಯೋದಲ್ಲಿ ತಿಳಿಸಲಾಗಿದೆ.