Saturday, May 15, 2021
No menu items!
Home Latest ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾರ್ಥೀವ್ ಪಟೇಲ್ ಭಾವನಾತ್ಮಕ ವಿದಾಯ

ಅಂತರರಾಷ್ಟ್ರೀಯ ಕ್ರಿಕೆಟ್ ಗೆ ಪಾರ್ಥೀವ್ ಪಟೇಲ್ ಭಾವನಾತ್ಮಕ ವಿದಾಯ

ನವದೆಹಲಿ: 18 ವರ್ಷಗಳ ಸುದೀರ್ಘ ಕ್ರಿಕೆಟ್ ಜೀವನಕ್ಕೆ ಟೀಂ ಇಂಡಿಯಾದ ವಿಕೆಟ್ ಕೀಪರ್ ಕಮ್ ಎಡಗೈ ಬ್ಯಾಟ್ಸ್‌ಮನ್‌ ಪಾರ್ಥೀವ್ ಪಟೇಲ್ ಪುಲ್ ಸ್ಟಾಪ್ ಇಟ್ಟಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಭಾವನಾತ್ಮಕ ಸಂದೇಶದ ಮೂಲಕ ಎಲ್ಲಾ ಮಾದರಿಯ ಕ್ರಿಕೆಟ್‌ ಗೆ ನಿವೃತ್ತಿ ಘೋಷಣೆ ಮಾಡಿದ್ದಾರೆ.

ಇಂದು ನಾನು ಎಲ್ಲಾ ರೀತಿಯ ಕ್ರಿಕೆಟ್‌ನಿಂದ ನಿವೃತ್ತಿ ಘೋಷಿಸುತ್ತಿದ್ದೇನೆ. ಈ 18 ವರ್ಷದ ನನ್ನ ಕ್ರಿಕೆಟ್​ ಜರ್ನಿಯನ್ನು ಕೊನೆಗೊಳಿಸುತ್ತಿದ್ದೇನೆ. ಜೊತೆಗೆ ಈ ಸಂದರ್ಭದಲ್ಲಿ ನಾನು ಹಲವರಿಗೆ ಕೃತಜ್ಞನಾಗಿದ್ದೇನೆ. ಭಾರತಕ್ಕಾಗಿ ಆಡಲು ಬಿಸಿಸಿಐ 17 ವರ್ಷದ ಬಾಲಕನ ಮೇಲೆ ಉದಾರವಾದ ವಿಶ್ವಾಸ ಮತ್ತು ನಂಬಿಕೆಯನ್ನು ತೋರಿಸಿದೆ. ನನ್ನ ವೃತ್ತಿ ಜೀವನದಲ್ಲಿ ನನ್ನ ಕೈಹಿಡಿದು ನಡೆಸಿದ ಎಲ್ಲರಿಗೂ ನಾನು ತುಂಬು ಹೃದಯದ ಕೃತಜ್ಞತೆಗಳನ್ನು ಸಲ್ಲಿಸುತ್ತೇನೆಂದು ಪಟೇಲ್ ಭಾವನಾತ್ಮಕ ಸಂದೇಶ ಬರೆದುಕೊಂಡಿದ್ದಾರೆ.

ಪಾರ್ಥಿವ್ ಪಟೇಲ್ ತಮ್ಮ 17ನೇ ವಯಸ್ಸಿನಲ್ಲಿಯೇ ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ತಮ್ಮ ಅಂತರರಾಷ್ಟ್ರೀಯ ಚೊಚ್ಚಲ ಪಂದ್ಯದಲ್ಲಿ ಭಾರತವನ್ನು ಪ್ರತಿನಿಧಿಸಿದರು. ಅಲ್ಲಿಂದಾಚೆಗೆ ಅತಿ ಕಿರಿಯ ವಿಕೆಟ್​ ಕೀಪರ್​ ಎಂಬ ಕೀರ್ತಿಗೂ ಪಾರ್ಥಿವ್ ಪಟೇಲ್​ ಭಾಜನರಾದರು.

ಗುಜರಾತ್​ ಮೂಲದ ಆಟಗಾರರಾಗಿರುವ ಪಟೇಲ್​ 25 ಟೆಸ್ಟ್​, 38 ಏಕದಿನ ಮತ್ತು 2 ಟಿ20 ಪಂದ್ಯಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಮ್​ ಇಂಡಿಯಾವನ್ನು ಪ್ರತಿನಿಧಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments