ಜೈಪುರ: ಇಡೀ ಜಗತ್ತನ್ನೇ ಆವರಿಸಿರುವ ಮಾರಕ ಕೊರೊನಾ ವೈರಸ್ ಸೋಂಕಿನ ಆರ್ಭಟ ದಿನ ದಿನಕ್ಕೂ ಹೆಚ್ಚುತ್ತಲೇ ಇದೆ. ಈಗಾಗಲೇ ಯೂರೋಪ್, ಇಂಗ್ಲೆಂಡ್ ದೇಶಗಳಲ್ಲಿ ಎರಡನೇ ಸುತ್ತಿನ ಕೊರೊನಾರ್ಭಟ ಶುರುವಾಗಿದ್ದು, ಮತ್ತೆ ಲಾಕ್ ಡೌನ್ ಮಾಡಲಾಗಿದೆ. ಈ ಹಿನ್ನಲೆಯಲ್ಲಿ ರಾಜಸ್ಥಾನ ಸರ್ಕಾರ ಈ ಬಾರಿಯ ದೀಪಾವಳಿ ಹಬ್ಬಕ್ಕೆ ಪಟಾಕಿಗಳ ಮಾರಾಟವನ್ನು ನಿಷೇಧಿಸಿ ಆದೇಶ ಹೊರಡಿಸಿದೆ.
ಕೊರೊನಾ ಸೋಂಕಿನಿಂದ ಬಳಲುತ್ತಿರುವವರಲ್ಲಿ ಉಸಿರಾಟದ ತೊಂದರೆ ಸಾಮಾನ್ಯವಾಗಿದೆ. ಇದರಿಂದ ಆರೋಗ್ಯ ರಕ್ಷಣೆ ಮತ್ತು ಸಾರ್ವಜನಿಕರಿಗೆ ಅನಾರೋಗ್ಯ ತಂದಿಡಲಿರುವ, ಪರಿಸರ ಮಾಲಿನ್ಯ ಉಂಟಾಗುವ ಹಿನ್ನೆಲೆ ಸಿಡಿಮದ್ದು ಮಾರಾಟವನ್ನು ನಿಷೇಧಿಸಲಾಗಿದೆ. ರಾಜಸ್ಥಾನ್ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಈ ಬಗ್ಗೆ ಆದೇಶ ಹೊರಡಿಸಿದ್ದಾರೆ.
ಪಟಾಕಿ ನಿಷೇಧದ ಬಗ್ಗೆ ಟ್ವೀಟ್ ಮಾಡಿರುವ ಅಶೋಕ್ ಗೆಹ್ಲೋಟ್ ಅವರು, ಸಿಡಿಮದ್ದು ಸಿಡಿಸುವ ಮೂಲಕ ಕಲುಷಿತ ವಾತಾವರಣದಿಂದ ಕೊರೊನಾ ಸೋಂಕಿಗೆ ಒಳಗಾದ ರೋಗಿಗಳಿಗೆ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿರುವ ನಿಟ್ಟಿನಲ್ಲಿ ಸಿಡ್ಡಿ ಮದ್ದು ಮಾರಾಟಕ್ಕರ ನಿಷೇಧ ಹೇರಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿ ಪಟಾಕಿ ಮಾರಾಟ ಮಾಡಿದಲ್ಲಿ ಅಂತಹವರ ವಿರುದ್ಧ ಕಠೀಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟ್ವೀಟರ್ ನಲ್ಲಿ ತಿಳಿಸಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಅಶೋಕ್ ಗೆಹ್ಲೂಟ್ ಅವರು, ‘ಸಿಡಿಮದ್ದು ಸಿಡಿಸುವ ಮೂಲಕ ಕಲುಷಿತ ವಾತಾವರಣದಿಂದ ಕೋವಿಡ್ 19 ಸೋಂಕಿಗೆ ಒಳಗಾದ ರೋಗಿಗಳಿಗೆ ಮತ್ತು ಸಾರ್ವಜನಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರಲಿರುವ ನಿಟ್ಟಿನಲ್ಲಿ ಸಿಡಿಮದ್ದು ಮಾರಾಟಕ್ಕೆ ನಿರ್ಬಂಧ ಹೇರಲಾಗಿದೆ. ಒಂದು ವೇಳೆ ಆದೇಶ ಉಲ್ಲಂಘಿಸಿ ಪಟಾಕಿ ಮಾರಾಟ ಮಾಡಿದಲ್ಲಿ ಅಂತಹವರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಟ್ವೀಟ್ ನಲ್ಲಿ ತಿಳಿಸಿದ್ದಾರೆ.
ಇನ್ನು ಈಗಾಗಲೇ ದೆಹಲಿ ಸರ್ಕಾರ ಕೂಡ ದೀಪಾವಳಿ ಸಂದರ್ಭದಲ್ಲಿ ಪರಿಸರ ಸ್ನೇಹಿ ಹಸಿರು ಪಟಾಕಿ ಮಾತ್ರ ಉಪಯೋಗಿಸುವಂತೆ ಆದೇಶ ನೀಡಿದೆ. ಹಾಗೊಂದು ವೇಳೆ ಸಿಡಿಮದ್ದು ಮಾರಾಟ ಕಂಡುಬಂದಲ್ಲಿ ದುಬಾರಿ ದಂಡ ವಿಧಿಸಲಾಗುವುದು ಎಂದು ತಿಳಿಸಿದೆ.