ಬೆಂಗಳೂರು: ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. 61ನೇ ವಸಂತಕ್ಕೆ ಕಾಲಿಟ್ಟ ಕುಮಾಸ್ವಾಮಿ ಅವರಿಗೆ ಸಾಲು ಸಾಲು ಬಿಜೆಪಿ ನಾಯಕರು ಶುಭಾಶಯ ತಿಳಿಸಿದ್ದಾರೆ.
ಕರ್ನಾಟಕದ ಮಾಜಿ ಮುಖ್ಯಮಂತ್ರಿ ಹೆಚ್ಡಿ ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ನನ್ನ ಶುಭಾಶಯಗಳು. ದೇವರು ಉತ್ತಮ ಆಯುಷ್ಯ, ಒಳ್ಳೆಯ ಆರೋಗ್ಯವನ್ನು ನೀಡಿ ನಿಮ್ಮನ್ನು ಕಾಪಾಡಲಿ ಎಂದು ಪ್ರಧಾನಿ ಮೋದಿ ಶುಭಾಶಯಗಳನ್ನು ಕೋರಿದ್ದಾರೆ.
Best wishes to former Karnataka Chief Minister Shri @hd_kumaraswamy Ji on his birthday. May Almighty bless him with a long life, filled with the best health.
— Narendra Modi (@narendramodi) December 16, 2020
ಅದಾದ ನಂತರದಲ್ಲಿ ಬಿಜೆಪಿ ನಾಯಕರಿಂದ ಸಾಲು ಸಾಲು ಶುಭಾಶಯಗಳು ಹರಿದು ಬಂದಿದೆ. ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ ಎಂದು ಸಿಎಂ ಬಿಎಸ್ ಯಡಿಯೂರಪ್ಪ ಶುಭಾಶಯ ಕೋರಿದ್ದರು.
ಮಾಜಿ ಮುಖ್ಯಮಂತ್ರಿಗಳು, ಆತ್ಮೀಯರೂ ಆಗಿರುವ ಶ್ರೀ ಹೆಚ್.ಡಿ.ಕುಮಾರಸ್ವಾಮಿ ಅವರಿಗೆ ಜನ್ಮದಿನದ ಹಾರ್ದಿಕ ಶುಭಾಶಯಗಳು. ದೇವರ ಆಶೀರ್ವಾದ ಸದಾ ಇರಲಿ ಎಂದು ಹಾರೈಸುತ್ತೇನೆ.@hd_kumaraswamy
— B.S. Yediyurappa (@BSYBJP) December 16, 2020
ಸಂಸದ ಬಿ ವೈ ರಾಘವೇಂದ್ರ ಕೂಡ ಈ ಟ್ವೀಟ್ ಅನ್ನು ಹಂಚಿಕೊಂಡಿದ್ದು, ಮಾಜಿ ಮುಖ್ಯಮಂತ್ರಿಗಳಾದ ಕುಮಾರಸ್ವಾಮಿಯವರಿಗೆ ಹುಟ್ಟುಹಬ್ಬದ ಶುಭಾಶಯಗಳು. ಭಗವಂತನ ಕೃಪೆಯಿಂದ ನಿಮಗೆ ಉತ್ತಮ ಆರೋಗ್ಯ, ದೀರ್ಘಾಯುಷ್ಯ ಲಭಿಸಲಿ ಎಂದು ಹಾರೈಸಿದ್ದಾರೆ.
ಸಾರಾ ಮಹೇಶ್, ಶೋಭಾ ಕರಂದ್ಲಾಜೆ, ಶಶಿಕಲಾ ಜೊಲ್ಲೆ, ಕೆ ಸುಧಾಕರ್ ಹೀಗೆ ಎಲ್ಲರು ಕುಮಾರಸ್ವಾಮಿ ಅವರ ಹುಟ್ಟುಹಬ್ಬಕ್ಕೆ ಶುಭಕೋರಿದ್ದಾರೆ. ಎಲ್ಲರ ಟ್ವೀಟ್ ಗೂ ಎಚ್ ಡಿ ಕುಮಾರಸ್ವಾಮಿ ಉತ್ತರಿಸಿದ್ದು, ಧನ್ಯವಾದ ತಿಳಿಸಿದ್ದಾರೆ.