Saturday, May 15, 2021
No menu items!
Home Bharata ನವೆಂಬರ್ 19ರಂದು ಪ್ರಧಾನಿ ಮೋದಿಯಿಂದ ಉದ್ಘಾಟನೆಯಾಗಲಿದೆ ಬೆಂಗಳೂರು ಟೆಕ್ ಶೃಂಗಸಭೆ

ನವೆಂಬರ್ 19ರಂದು ಪ್ರಧಾನಿ ಮೋದಿಯಿಂದ ಉದ್ಘಾಟನೆಯಾಗಲಿದೆ ಬೆಂಗಳೂರು ಟೆಕ್ ಶೃಂಗಸಭೆ

ಬೆಂಗಳೂರು: ಕರ್ನಾಟಕ ನಾವೀನ್ಯತೆ ಮತ್ತು ತಂತ್ರಜ್ಞಾನ ಸೊಸೈಟಿ (ಕಿಟ್ಸ್), ಕರ್ನಾಟಕ ಸರ್ಕಾರದ ಮಾಹಿತಿ ತಂತ್ರಜ್ಞಾನ, ಜೈವಿಕ ತಂತ್ರಜ್ಞಾನ ಮತ್ತು ನವೋದ್ಯಮದ ವಿಷನ್ ಗ್ರೂಪ್, ಭಾರತ ಸಾಫ್ಟ್ವೇರ್ ತಂತ್ರಜ್ಞಾನ ಪಾರ್ಕ್ (ಎಸ್ಟಿಪಿಐ) ಮತ್ತು ಎಂಎಂ ಆಕ್ಟಿವ್ ಸೈ-ಟೆಕ್ ಕಮ್ಯುನಿಕೇಷನ್ಸ್ ಸಹಯೋಗದಲ್ಲಿ ಕರ್ನಾಟಕ ಸರ್ಕಾರವು ನವೆಂಬರ್ 19 ರಂದು ಶೃಂಗಸಭೆಯನ್ನು ಆಯೋಜಿಸುತ್ತಿದೆ.

ಬೆಂಗಳೂರು ಟೆಕ್ ಶೃಂಗಸಭೆಯನ್ನು ಪ್ರಧಾನ ಮಂತ್ರಿ ನರೇಂದ್ರ ಮೋದಿ ವಿಡಿಯೋ ಕಾನ್ಫರೆನ್ಸ್ ಮೂಲಕ ಉದ್ಘಾಟಿಸಲಿದ್ದಾರೆ. ಆಸ್ಟ್ರೇಲಿಯಾ ಪ್ರಧಾನಿ ಸ್ಕಾಟ್ ಮಾರಿಸನ್, ಸ್ವಿಸ್ ಒಕ್ಕೂಟದ ಉಪಾಧ್ಯಕ್ಷ ಗೈ ಪಾರ್ಮೆಲಿನ್ ಸೇರಿದಂತೆ ಅನೇಕ ಅಂತರರಾಷ್ಟ್ರೀಯ ಗಣ್ಯರು ಭಾಗವಹಿಸಲಿದ್ದಾರೆ. ಉದ್ಯಮಿಗಳು, ತಂತ್ರಜ್ಞರು, ಸಂಶೋಧಕರು, ನಾವೀನ್ಯಕಾರರು, ಹೂಡಿಕೆದಾರರು, ನೀತಿ ನಿರೂಪಕರು ಮತ್ತು ಭಾರತ ಮತ್ತು ಜಗತ್ತಿನ ಶಿಕ್ಷಣ ತಜ್ಞರು ಸಹ ಶೃಂಗಸಭೆಯಲ್ಲಿ ಭಾಗವಹಿಸಲಿದ್ದಾರೆ.

“ಮುಂದಿನದು ಈಗಲೇ” ಎಂಬುದು ಈ ವರ್ಷದ ಶೃಂಗಸಭೆಯ ವಿಷಯವಾಗಿದೆ. ಸಭೆಯಲ್ಲಿ ಕೊರೋನಾ ನಂತರದ ಜಗತ್ತಿನ ಪ್ರಮುಖ ಸವಾಲುಗಳ ಕುರಿತು ಚರ್ಚೆ ನಡೆಸಲಾಗುತ್ತದೆ. ‘ಮಾಹಿತಿ ತಂತ್ರಜ್ಞಾನ ಮತ್ತು ಎಲೆಕ್ಟ್ರಾನಿಕ್ಸ್’ ಹಾಗೂ ‘ಜೈವಿಕ ತಂತ್ರಜ್ಞಾನ’ ಕ್ಷೇತ್ರಗಳಲ್ಲಿ ಪ್ರಮುಖ ತಂತ್ರಜ್ಞಾನಗಳು ಮತ್ತು ಆವಿಷ್ಕಾರಗಳ ಪರಿಣಾಮಗಳನ್ನು ಕುರಿತು ಕೂಡ ಸಮಾಲೋಚನೆ ನಡೆಸಲಾಗುತ್ತದೆ. ಈಗ ನಡೆಯುತ್ತಿರುವುದು ಬೆಂಗಳೂರು ಅಂತರರಾಷ್ಟ್ರೀಯ ತಾಂತ್ರಿಕ ಶೃಂಗಸಭೆಯ 23ನೇ ಆವೃತ್ತಿ. ಅಂತರರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಗುರುತಿಸಿಕೊಂಡಿರುವ ಬೆಂಗಳೂರು ತಾಂತ್ರಿಕ ಶೃಂಗಸಭೆಯಲ್ಲಿ ವಿಶ್ವದ ಅತ್ಯುತ್ತಮ ತಂತ್ರಜ್ಞರು, ಉದ್ಯಮಿಗಳು ತಮ್ಮ ಹೊಸ ಉತ್ಪನ್ನಗಳನ ಬಗ್ಗೆ ಹಾಗೂ ಭವಿಷ್ಯದ ಅತ್ಯಾಧುನಿಕ ವಿಚಾರಗಳನ್ನು ಪ್ರಸ್ತುತಪಡಿಸುತ್ತಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments