Saturday, May 15, 2021
No menu items!
Home Bharata 65 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ; ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ…

65 ನೇ ಕನ್ನಡ ರಾಜ್ಯೋತ್ಸವ ಸಂಭ್ರಮ ; ಕನ್ನಡದಲ್ಲೇ ಶುಭ ಕೋರಿದ ಪ್ರಧಾನಿ…

ನವದೆಹಲಿ: 65 ನೇ ಕನ್ನಡ ರಾಜ್ಯೋತ್ಸವವನ್ನ ನಾಡಿನೆಲ್ಲೆಡೆ ಸಂಭ್ರಮದಿಂದ ಆಚರಿಸುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಜ್ಯದ ಜನತೆಗೆ ಶುಭಾಶಯ ಕೋರಿದ್ದಾರೆ.

ಸಾಮಾಜಿಕ ಜಾಲತಾಣದ ಮೂಲಕ ಶುಭ ಕೋರಿರುವ ಪ್ರಧಾನಿ “ಕರ್ನಾಟಕದ ಸಹೋದರ ಸಹೋದರಿಯರಿಗೆ ಕರ್ನಾಟಕ ರಾಜ್ಯೋತ್ಸವದ ಶುಭಾಶಯಗಳು. ಕನ್ನಡಿಗರ ಜನ ಶಕ್ತಿ ಮತ್ತು ಕೌಶಲ್ಯದಿಂದ ಕರ್ನಾಟಕ ಪ್ರಗತಿಯ ಉತ್ತುಂಗಕ್ಕೇರಿದೆ. ಕರ್ನಾಟಕ ಜನತೆಯ ಸಂತಸ ಮತ್ತು ಉತ್ತಮ ಆರೋಗ್ಯಕ್ಕಾಗಿ ನಾನು ಪ್ರಾರ್ಥಿಸುತ್ತೇನೆ” ಎಂದು ಪ್ರಧಾನಿ ನರೇಂದ್ರ ಮೋದಿ ಕನ್ನಡದಲ್ಲೇ ಟ್ವೀಟ್ ಮಾಡಿದ್ದಾರೆ.

ಕರ್ನಾಟಕ ರಾಜ್ಯ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ನವರು ಕೂಡಾ ರಾಜ್ಯದ ಜನತೆಗೆ ಶುಭ ಹಾರೈಸಿದ್ದು ‘ನಾಡಿನ ಸಮಸ್ತ ಜನತೆಗೆ ೬೫ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳು. ಕನ್ನಡ ಭಾಷೆ ಸಂಸ್ಕೃತಿಗಳ ಜೊತೆಗೆ ಸಮೃದ್ಧ , ಆರೋಗ್ಯಪೂರ್ಣ , ಸಹಬಾಳ್ವೆಯ, ಅಭಿವೃದ್ಧಿಶೀಲ ಕರ್ನಾಟಕದ ನಿರ್ಮಾಣ ನಿಟ್ಟಿನಲ್ಲಿ ಸಮಸ್ತ ಕನ್ನಡಿಗರೂ ಒಂದಾಗಿ ಮುನ್ನಡೆಯೋಣ. ಹಸಿರಾಗಲಿ ಕರ್ನಾಟಕ , ಉಸಿರಾಗಲಿ ಕನ್ನಡ ! ಎಂದು ರಾಜ್ಯದ ಜನತೆಗೆ ಶುಭ ಕೋರಿದ್ದಾರೆ.

ಇನ್ನುಳಿದಂತೆ ಡಿಸಿಎಂ ಅಶ್ವಥ್ ನಾರಾಯಣ್ , ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ, ಸಮಾಜ ಕಲ್ಯಾಣ ಇಲಾಖೆ ಸಚಿವರಾದ ಶ್ರೀರಾಮುಲು, ಶಿಕ್ಷಣ ಸಚಿವ ಸುರೇಶ್ ಕುಮಾರ್ ಸೇರಿದಂತೆ ಹಲವು ಗಣ್ಯರು ನಾಡಿನ ಜನತೆಗೆ ಶುಭ ಕೋರಿದ್ದಾರೆ.

ನಮ್ಮ ಕಡೆಯಿಂದಲೂ ನಾಡಿನ ಸಮಸ್ತ ಜನತೆಗೆ 65ನೇ ಕನ್ನಡ ರಾಜ್ಯೋತ್ಸವದ ಹಾರ್ದಿಕ ಶುಭಾಶಯಗಳು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments