Saturday, May 15, 2021
No menu items!
Home Bharata ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲು..!

ಸಂಸದ ತೇಜಸ್ವಿ ಸೂರ್ಯ ವಿರುದ್ಧ FIR ದಾಖಲು..!

ಹೈದರಾಬಾದ್: ಮುನ್ಸಿಪಾಲಿಟಿ ಚುನಾವಣೆಯ ಪ್ರಯುಕ್ತ ಪಕ್ಷದ ಪ್ರಚಾರದಲ್ಲಿ ಭಾಗವಹಿಸಲು ಮಂಗಳವಾರ ಸಂಸದ ತೇಜಸ್ವಿ ಸೂರ್ಯ ಹೈದರಾಬಾದ್ಗೆ ತೆರಳಿದ್ದಾರೆ. ಈ ವೇಳೆ ಎನ್ಸಿಸಿ ಗೇಟ್ ಬಳಿ ಅಡೆತಡೆಗಳನ್ನು ಮುರಿದು ತಮ್ಮ ಬೆಂಬಲಿಗರೊಂದಿಗೆ ವಿಶ್ವವಿದ್ಯಾಲಯದ ಆವರಣಕ್ಕೆ ಪ್ರವೇಶಿಸಿದ್ದರು. ನಂತರ ಅವರು ಕಲಾ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಭಾಷಣ ಕೂಡ ಮಾಡಿದ್ದರು.

ಈ ಹಿನ್ನೆಲೆಅನುಮತಿ ಇಲ್ಲದೆ ಒಳಗೆ ಪ್ರವೇಶಿಸಿದ್ದು ಅಲ್ಲದೆ, ಕಲಾ ವಿಭಾಗದ ವಿದ್ಯಾರ್ಥಿಗಳಿಗೆ ಭಾಷಣ ಮಾಡಿದ್ದಾರೆ ಎಂದು ಆರೋಪಿಸಿ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ದೂರು ನೀಡಿದೆ. ದೂರಿನ ಮೇರೆಗೆ ತೇಜಸ್ವಿ ಸೂರ್ಯ ಅವರ ವಿರುದ್ಧ ಪೊಲೀಸರು ಕ್ರಿಮಿನಲ್ ಕೇಸ್ ದಾಖಲಿದ್ದಾರೆ.

ಈ ಕುರಿತು ಮಾಹಿತಿ ನೀಡಿರುವ ಪೊಲೀಸ್ ಅಧಿಕಾರಿಗಳು ಉಸ್ಮಾನಿಯಾ ವಿವಿ ಆಡಳಿತ ಮಂಡಳಿ ನೀಡಿದ ದೂರಿನ ಆಧಾರದ ಮೇಲೆ ಐಪಿಸಿ ಸೆಕ್ಷನ್ 447 ರ ಅಡಿಯಲ್ಲಿ ಸಂಸದ ತೇಜಸ್ವಿ ಸೂರ್ಯ ವಿರುದ್ಧ ಕ್ರಿಮಿನಲ್ ಅತಿಕ್ರಮಣ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ಧಾರೆ.

ವಿಶ್ವವಿದ್ಯಾಲಯ ಪ್ರವೇಶಿಸಿ ಭಾಷಣ ಮಾಡಲು ನಾವು ಸಂಸದ ತೇಜಸ್ವಿ ಸೂರ್ಯ ಅವರಿಗೆ ಯಾವುದೇ ಅನುಮತಿ ನೀಡಿರಲಿಲ್ಲ. ಇಂತಹ ರಾಜಕೀಯ ಘಟನೆಗಳನ್ನು ವಿಶ್ವವಿದ್ಯಾಲಯದಲ್ಲಿ ಅನುಮತಿಸಲಾಗುವುದಿಲ್ಲ. ಉಪಕುಲಪತಿಗಳ ನಿರ್ದೇಶನದ ಮೇರೆಗೆ ನಾವು ಪೊಲೀಸರಿಗೆ ದೂರು ನೀಡಿದ್ದೇವೆ ಎಂದು ಉಸ್ಮಾನಿಯಾ ವಿವಿಯ ರಿಜಿಸ್ಟ್ರಾರ್ ಡಾ.ಚ.ಗೋಪಾಲ್ ರೆಡ್ಡಿ ಮಾಹಿತಿ ನೀಡಿದ್ದಾರೆ.

2017 ರಲ್ಲಿ ವಿವಿ ಆಡಳಿತವು ಕ್ಯಾಂಪಸ್ನಲ್ಲಿ ರಾಜಕೀಯ ಚಟುವಟಿಕೆಗಳನ್ನು ನಿಷೇಧಿಸಿತ್ತು. ಶಿಕ್ಷಣತಜ್ಞರಿಗೆ ಸಂಬಂಧವಿಲ್ಲದ ಚಟುವಟಿಕೆಗಳನ್ನು ಕ್ಯಾಂಪಸ್ನಲ್ಲಿ ಅನುಮತಿಸಲಾಗುವುದಿಲ್ಲ ಎಂದು ಹೇಳಿದರು ಕ್ಯಾಂಪಸ್ನಲ್ಲಿ ಇಂತಹ ಘಟನೆಗಳು ನಡೆದಿರುವುದು ದುರಾದೃಷ್ಟಕರ ಎಂದು ಅವರು ವಿಷಾಧ ವ್ಯಕ್ತಪಡಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments