Friday, June 25, 2021
No menu items!
Home Karavali ಆರ್.ಎನ್.ಎಸ್ ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್ ಶೆಟ್ಟಿ ಇನ್ನಿಲ್ಲ

ಆರ್.ಎನ್.ಎಸ್ ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್ ಶೆಟ್ಟಿ ಇನ್ನಿಲ್ಲ

ಬೆಂಗಳೂರು: ಸಮಾಜಮುಖಿ ಚಿಂತಕ, ಶ್ರೇಷ್ಠ ಉದ್ಯಮಿ ಆರ್.ಎನ್.ಎಸ್.ಶಿಕ್ಷಣ ಮತ್ತು ಉದ್ಯಮ ಸಮೂಹಗಳ ಸ್ಥಾಪಕ ಆರ್.ಎನ್. ಶೆಟ್ಟಿ (92) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ರಾಜ್ಯದ ಮತ್ತು ದೇಶದ ಪ್ರಗತಿಗೆ ತಮ್ಮದೇ ಕೊಡುಗೆ ನೀಡಿದ್ದ ಹೆಸರಾಂತ ಉದ್ಯಮಿ ಆರ್.ಎನ್ ಶೆಟ್ಟಿ ಉತ್ತರ ಕನ್ನಡ ಜಿಲ್ಲೆಯ ಮುರುಡೇಶ್ವರದಲ್ಲಿ 1928ರ ಆಗಸ್ಟ್ 15ರಂದು ಜನಿಸಿದರು. ಆರ್.ಎನ್. ಶೆಟ್ಟಿ ಧಾರ್ಮಿಕ, ಸಾಂಸ್ಕೃತಿಕ, ಆಧ್ಯಾತ್ಮಿಕ, ವೈದ್ಯಕೀಯ, ಆತಿಥ್ಯ, ವಸತಿ, ಔದ್ಯಮಿಕ, ಔದ್ಯೋಗಿಕ, ವಾಣಿಜ್ಯ, ಶೈಕ್ಷಣಿಕ, ಮೂಲಸೌಕರ್ಯ, ವಿದ್ಯುತ್ ಹಾಗೂ ನೀರಾವರಿ ಕ್ಷೇತ್ರ ಸೇರಿದಂತೆ ವಿವಿಧ ರಂಗಗಳಲ್ಲಿ ತೊಡಗಿಸಿಕೊಂಡಿದ್ದರು.

1961ರಲ್ಲಿ ಮೂಲಸೌಕರ್ಯ ಕಂಪನಿ ಹುಟ್ಟು ಹಾಕಿದ ಆರ್.ಎನ್. ಶೆಟ್ಟಿ ಅವರು, ಹಿಡಕಲ್ ಜಲಾಶಯ, ತಟ್ಟಿಹಳ್ಳ ಜಲಾಶಯ, ಸೂಪ ಜಲಾಶಯ, ಗೇರುಸೊಪ್ಪ ಜಲಾಶಯ, ಮಾಣಿ ಅಣೆಕಟ್ಟೆ, ವಾರಾಹಿ ಜಲ ವಿದ್ಯುತ್ ಯೋಜನೆ, ಕೆ.ಎಲ್.ಇ. ಆಸ್ಪತ್ರೆ ಮತ್ತು ವೈದ್ಯಕೀಯ ಸಂಶೋಧನಾ ಕೇಂದ್ರ, ಕೊಂಕಣ ರೈಲು ಸುರಂಗ, ರಾಷ್ಟ್ರೀಯ ಹೆದ್ದಾರಿಗಳ ನಿರ್ಮಾಣವೇ ಮೊದಲಾದ ಹತ್ತು ಹಲವು ಮಹತ್ವದ ಜನೋಪಯೋಗಿ ಯೋಜನೆಗಳನ್ನು ಯಶಸ್ವಿಯಾಗಿ ನಿರ್ವಹಿಸಿ ಮೈಲುಗಲ್ಲಿನ ಸಾಧನೆ ಮಾಡಿದ್ದಾರೆ.

ಇಂತಹ ಅಸಾಧಾರಣ ವ್ಯಕ್ತಿತ್ವ ಹೊಂದಿದ್ದ ಆರ್.ಎನ್.ಶೆಟ್ಟಿ ಇಂದು ಮರಣಿಸಿದ್ದು ,ಮೃತರ ಪಾರ್ಥಿವ ಶರೀರವನ್ನು ಸಾರ್ವಜನಿಕರ ದರ್ಶನಕ್ಕಾಗಿ ಉತ್ತರ ಹಳ್ಳಿಯ ಆರ್.ಎನ್. ಎಸ್. ತಾಂತ್ರಿಕ ವಿದ್ಯಾಲಯ ಕಾಲೇಜು ಆವರಣದಲ್ಲಿ ಮಧ್ಯಾಹ್ನ 2 ಗಂಟೆಯ ನಂತರ ಇಡಲಾಗುವುದು. ಬಳಿಕ ಅಂತ್ಯಸಂಸ್ಕಾರವನ್ನು ಸಂಜೆ ನೆರವೇರಿಸಲಾಗುವುದು ಎಂದು ಅವರ ಕುಟುಂಬದ ಮೂಲಗಳು ತಿಳಿಸಿವೆ

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments