Wednesday, October 27, 2021
No menu items!
Home Special ಸ್ಟಾರ್ ಡೈರೆಕ್ಟರ್ ರಾಜಮೌಳಿ ಗಿಂದು ಹುಟ್ಟು ಹಬ್ಬದ ಸಂಭ್ರಮ

ಸ್ಟಾರ್ ಡೈರೆಕ್ಟರ್ ರಾಜಮೌಳಿ ಗಿಂದು ಹುಟ್ಟು ಹಬ್ಬದ ಸಂಭ್ರಮ

ಬಾಹುಬಲಿ ಸಿನಿಮಾ ಮೂಲಕ  ಭಾರತೀಯ ಸಿನಿಮಾರಂಗದಲ್ಲಿ ಸಂಚಲನ ಸೃಷ್ಟಿ ಮಾಡಿದ್ದ ಸ್ಟಾರ್ ಡೈರೆಕ್ಟರ್  ಎಸ್ ಎಸ್‌  ರಾಜಮೌಳಿ ಅವರಿಗೆ ಇಂದು 47 ನೇ ವರ್ಷದ ಹುಟ್ಟುಹಬ್ಬದ ಸಂಭ್ರಮ.
ದಕ್ಷಿಣ ಭಾರತೀಯ ಸಿನಿಮಾರಂಗದಲ್ಲಿ ತನ್ನದೇ ಛಾಪು ಮೂಡಿಸಿರುವ ರಾಜಮೌಳಿ ಅವರ ಹುಟ್ಟುಹಬ್ಬವನ್ನು  ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಹಬ್ಬದಂತೆ ಸಂಭ್ರಮಿಸುತ್ತಿದ್ದಾರೆ.ಅವರು 47ನೇ ವಸಂತಕ್ಕೆ ಕಾಲಿಟ್ಟಿರುವ ರಾಜಮೌಳಿ ಅವರಿಗೆ ಅಭಿಮಾನಿಗಳಿಂದ ಶುಭಾಶಯಗಳ ಮಹಾಪೂರವೆ ಹರಿದು ಬರುತ್ತಿದೆ.
ಬಾಹುಬಲಿ ಸಿನಿಮಾ ಬಳಿಕ ರಾಜಮೌಳಿ ಖ್ಯಾತಿ ಮತ್ತಷ್ಟು ಎತ್ತರಕ್ಕೆ ಏರಿದೆ. ರಾಜಮೌಳಿ ಜೊತೆ ಸಿನಿಮಾ ಮಾಡಲು ಭಾರತೀಯ ಸ್ಟಾರ್ ಸಿನಿ ತಾರೆಯರು ಕೂಡಾ ಕಾತುರದಿಂದ ಕಾಯುತ್ತಿದ್ದಾರೆ.
ಸ್ಟೂಡೆಂಟ್ ನಂ.1 ಸಿನಿಮಾ ಮೂಲಕ ನಿರ್ದೇಶಕನಾಗಿ ಚಿತ್ರರಂಗಕ್ಕೆ ಕಾಲಿಟ್ಟ ರಾಜಮೌಳಿ 10ಕ್ಕು ಹೆಚ್ಚು ಸಿನಿಮಾಗಳಿಗೆ ಆಕ್ಷನ್ ಕಟ್ ಹೇಳಿದ್ದಾರೆ. ರಾಜಮೌಳಿ ನಿರ್ದೇಶನದ ಸಿನಿಮಾಗಳಲ್ಲಿ ಸೈ, ಮಗಧೀರ, ಮರ್ಯಾದ ರಾಮಣ್ಣ, ಚತ್ರಪತಿ, ವಿಕ್ರಮಾರ್ಕುಡು, ಈಗ ಮತ್ತು ಬಾಹುಬಲಿ ಸಿನಿಮಾಗಳು ತೆಲುಗು ಸಿನಿಮಾರಂಗದಲ್ಲಿ ದೊಡ್ಡ ಮಟ್ಟಕ್ಕೆ ಸಕ್ಸಸ್ ಕಂಡಿವೆ.
ಅನೇಕ ಅದ್ಭುತ ಸಿನಿಮಾಗಳನ್ನು ನೀಡಿರುವ ರೌಜಮೌಳಿ ಸದ್ಯ ಆರ್ ಆರ್ ಆರ್ ಸಿನಿಮಾಗಳಲ್ಲಿ ಬ್ಯುಸಿಯಾಗಿದ್ದಾರೆ. ರಾಮ್ ಚರಣ್ ಮತ್ತು ಜೂ.ಎನ್ ಟಿ ಆರ್ ಇಬ್ಬರು ನಾಯಕರಾಗಿ ಕಾಣಿಸಿಕೊಳ್ಳುತ್ತಿದ್ದಾರೆ. ಈಗಾಗಲೇ ಬಹುತೇಕ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಲಾಕ್ ಡೌನ್ ಬಳಿಕ ಮತ್ತೆ ಚಿತ್ರೀಕರಣದಲ್ಲಿ ನಿರತರಾಗಿದ್ದಾರೆ. ಈ ಸಿನಿಮಾ ಮುಂದಿನ ವರ್ಷ ತೆರೆಗೆ ಬರುತ್ತಿದೆ. ರೌಜಮೌಳಿ ಮತ್ತಷ್ಟು ಉತ್ತಮ ಸಿನಿಮಾಗಳ ಮೂಲಕ ಅಭಿಮಾನಿಗಳನ್ನು ರಂಜಿಸುತ್ತಿರಲಿ ಎಂಬುದೇ ನಮ್ಮ ಬಯಕೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments