Thursday, September 16, 2021
No menu items!
Home Bharata RBI ಹೊಸ ಮೈಲುಗಲ್ಲು: ಮಿಲಿಯನ್ ಫಾಲೋವರ್ಸ್ ಕ್ಲಬ್ ಸೇರಿದ ಆರ್ ಬಿಐ ಟ್ವಿಟರ್ ಖಾತೆ

RBI ಹೊಸ ಮೈಲುಗಲ್ಲು: ಮಿಲಿಯನ್ ಫಾಲೋವರ್ಸ್ ಕ್ಲಬ್ ಸೇರಿದ ಆರ್ ಬಿಐ ಟ್ವಿಟರ್ ಖಾತೆ

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಜಾಗತಿಕ ಮಟ್ಟದಲ್ಲಿ ಹೊಸ ದಾಖಲೆಯನ್ನ ಬರೆದಿದೆ. ಆರ್ ಬಿಐ ತನ್ನ ಟ್ವಿಟರ್ ಖಾತೆಯಲ್ಲಿ 10 ಲಕ್ಷ ಫಾಲೋವರ್ಸ್ ಹೊಂದುವ ಮೂಲಕ ಹೊಸ ಮೈಲುಗಲ್ಲು ಸ್ಥಾಪಿಸಿದೆ.

ಇಂತಹ ಸಾಧನೆ ಮಾಡಿದ ಜಗತ್ತಿನ ಮೊದಲ ಕೇಂದ್ರಿಯ ಬ್ಯಾಂಕ್ ಎಂಬ ಖ್ಯಾತಿಗೆ ಭಾರತೀಯ ರಿಸರ್ವ್ ಬ್ಯಾಂಕ್ ಒಳಗಾಗಿದೆ. ಅಮೆರಿಕಾದ ಫೆಡರಲ್ ರಿಸರ್ವ್ ಮತ್ತು ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಗಳನ್ನು ಟ್ವಿಟರ್ ನಲ್ಲಿ ಹಿಂದಿಕ್ಕಿ, ಮೈಕ್ರೋಬ್ಲಾಗಿಂಗ್ ಸೈಟ್ ನಲ್ಲಿ ಒಂದು ಮಿಲಿಯನ್ ಫಾಲೋವರ್ಸ್ ಹೊಂದಿರುವ ಅತ್ಯಂತ ಜನಪ್ರಿಯ ಕೇಂದ್ರಿಯ ಬ್ಯಾಂಕಾಗಿ ಆರ್ ಬಿಐ ಹೊರಹೊಮ್ಮಿದೆ.

ಈ ಕುರಿತು ಟ್ವೀಟ್ ಮಾಡಿರುವ ಆರ್ ಬಿಐ ಗವರ್ನರ್ ಶಕ್ತಿಕಾಂತ ದಾಸ್ “ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾಗೆ ಟ್ವಿಟ್ಟರ್ ನಲ್ಲಿ ಇಂದು ಒಂದು ಮಿಲಿಯನ್ ಫಾಲೋವರ್ಸ್ ಆಗಿದ್ದಾರೆ. ಆರ್ ಬಿಐನಲ್ಲಿನ ನನ್ನ ಎಲ್ಲ ಸಹೋದ್ಯೋಗಿಗಳಿಗೆ ಅಭಿನಂದೆ ಹೇಳುತ್ತೇನೆ,” ಎಂದು ಬರೆದುಕೊಂಡಿದ್ದಾರೆ.

ಉಳಿದಂತೆ ಜಾಗತಿಕ ಮಟ್ಟದಲ್ಲಿ ಯುಎಸ್ ಫೆಡರಲ್ ರಿಸರ್ವ್ ಗೆ ಟ್ವಿಟ್ಟರ್ ನಲ್ಲಿ 6,77,000 ಅನುಯಾಯಿಗಳಿದ್ದಾರೆ. ಅದಕ್ಕೆ ಹೋಲಿಸಿದಲ್ಲಿ ಯುರೋಪಿಯನ್ ಸೆಂಟ್ರಲ್ ಬ್ಯಾಂಕ್ ಗೆ 5.9 ಲಕ್ಷ ಫಾಲೋವರ್ಸ್, ಬ್ರೆಜಿಲ್ ಕೇಂದ್ರ ಬ್ಯಾಂಕ್ 3.8 ಲಕ್ಷ ಹಾಗೂ ಬ್ಯಾಂಕ್ ಆಫ್ ಇಂಗ್ಲೆಂಡ್ ಗೆ 3.17ಲಕ್ಷ ಫಾಲೋವರ್ಸ್ ಇದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments