Friday, September 24, 2021
No menu items!
Home Karnataka ಚಿಕ್ಕಪೇಟೆಯಲ್ಲಿ ಹಗಲೇ ದರೋಡೆ ಮಾಡುತ್ತಿದ್ದವರ ಬಂಧನ..!

ಚಿಕ್ಕಪೇಟೆಯಲ್ಲಿ ಹಗಲೇ ದರೋಡೆ ಮಾಡುತ್ತಿದ್ದವರ ಬಂಧನ..!

ಬೆಂಗಳೂರು : ಚಿಕ್ಕಪೇಟೆಯಲ್ಲಿ ಹಾಡ ಹಗಲೇ ಚಾಕು ಹಿಡಿದು ರಾಬರಿ ಮಾಡುತ್ತಿದ್ದ ಕಳ್ಳರನ್ನ ಪೊಲೀಸರು ಬಂಧಿಸಿದ್ದಾರೆ. ರಾಬರಿ ಮಾಡುತ್ತಿದ್ದ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ವೈರಲ್ ಆಗಿತ್ತು. ಆ ವಿಡಿಯೋವನ್ನು ಪೊಲೀಸರಿಗೆ ಟ್ಯಾಗ್ ಕೂಡ ಮಾಡಲಾಗಿತ್ತು. ಇದಾದ ಕೆಲವೇ ದಿನಗಳಲ್ಲಿ ವಿಡಿಯೋವನ್ನು ಆಧರಿಸಿ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ರೂಪಾ, ಬೆಂಗಳೂರು ಪೊಲೀಸ್, ಚಿಕ್ಕಪೇಟೆ ಪೊಲೀಸ್, ಪಶ್ಚಿಮ ವಲಯ ಡಿಸಿಪಿ, ನಗರ ಪೊಲೀಸ್ ಆಯುಕ್ತರಿಗೆ ಕರ್ನಾಟಕದ ಗೃಹ ಕಾರ್ಯದರ್ಶಿ ಐಜಿಪಿ ಡಿ ರೂಪಾ ಅವರು ಧನ್ಯವಾದ ಅರ್ಪಿಸಿದ್ದಾರೆ.

ಬಂಧಿತನನ್ನು ಆಜಾದ್ ನಗರದ ನಿವಾಸಿ ಜಾನಿ ಎಂದು ಗುರುತಿಸಲಾಗಿದೆ. 22 ವರ್ಷ ವಯಸ್ಸಿನ ಜಾನಿ ಇತ್ತೀಚೆಗೆ ಮಾರ್ಚ್ ತಿಂಗಳಿನಲ್ಲಿ ಇದೇ ರೀತಿ ಕೃತ್ಯ ಎಸಗಿ ಬಂಧಿತನಾಗಿದ್ದ, ಜೈಲಿನಿಂದ ಬಿಡುಗಡೆಯಾದ ಬಳಿಕ ಕೂಡಾ ತನ್ನ ಹಳೆ ಚಾಳಿ ಮುಂದುವರೆಸಿದ್ದ ಎಂದು ತಿಳಿದು ಬಂದಿದೆ.

ಚಿಕ್ಕಪೇಟೆ ಮೆಟ್ರೋ ರೈಲು ನಿಲ್ದಾಣದ ಬಳಿ ಓಡಾಡುತ್ತಿದ್ದ ವ್ಯಕ್ತಿಯನ್ನು ಅಡ್ಡಗಟ್ಟಿದ, ಇಬ್ಬರು ಚಾಕು ತೋರಿಸಿ ಹಣ ದೋಚುವ ವಿಡಿಯೋ ವೈರಲ್ ಆಗಿತ್ತು. ಈ ಬಗ್ಗೆ ಕ್ರಮ ಜರುಗಿಸುವಂತೆ ರೂಪಾ ಅವರು ಸಂಬಂಧಪಟ್ಟ ಪೊಲೀಸರಿಗೆ ಟ್ಯಾಗ್ ಮಾಡಿದ್ದರು. ಡಿಸಿಪಿ ಪಶ್ಚಿಮ ವಲಯ ಡಾ ಸಂಜೀವ್ ಪಾಟೀಲ್ ಅವರ ಸೂಚನೆಯಂತೆ ಚಿಕ್ಕಪೇಟೆ ಪೊಲೀಸರು ಒಬ್ಬ ಆರೋಪಿಯನ್ನು ಬಂಧಿಸಿದ್ದಾರೆ. ಮತ್ತೊಬ್ಬ ಆರೋಪಿ ನಾಪತ್ತೆಯಾಗಿದ್ದಾನೆ. ಇಬ್ಬರು ಒಂದೇ ರೀತಿ ಹುಡ್ ಮಾದರಿ ಡ್ರೆಸ್ ಧರಿಸಿ ಚಾಕು ಹಿಡಿದು ಬೆದರಿಸುವ ದೃಶ್ಯವನ್ನು ಅಲ್ಲಿ ಪಾರ್ಕ್ ಮಾಡಿದ್ದ ವಾಹನದಲ್ಲಿದವರು ವಿಡಿಯೋ ಮಾಡಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments