Monday, September 27, 2021
No menu items!
Home Karnataka ಅಕ್ರಮ ಅವ್ಯವಹಾರಗಳ ಬಗ್ಗೆ ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕರ ವಿರುದ್ಧ ತನಿಖೆಗೆ ಆದೇಶ

ಅಕ್ರಮ ಅವ್ಯವಹಾರಗಳ ಬಗ್ಗೆ ಅರಮನೆ ಆಡಳಿತ ಮಂಡಳಿ ಉಪನಿರ್ದೇಶಕರ ವಿರುದ್ಧ ತನಿಖೆಗೆ ಆದೇಶ

ಮೈಸೂರು : ಅರಮನೆ ಮಂಡಳಿ ಉಪನಿರ್ದೇಶಕರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ನಡೆಸುತ್ತಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಗೆ ಮೈಸೂರು ಜಿಲ್ಲಾಡಳಿತ ಮಣಿದಿದೆ.

ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್.ಸುಬ್ರಹ್ಮಣ್ಯ ವಿರುದ್ಧ ತನಿಖೆ ನಡೆಸಲು ಮೈಸೂರು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶ ಹೊರಡಿಸಿದ್ದಾರೆ. ಮೈಸೂರು ಅರಮನೆ ಮಂಡಳಿ ಉಪನಿರ್ದೇಶಕ ಟಿ.ಎಸ್ ಸುಬ್ರಹ್ಮಣ್ಯ ಅವರ ಸೇವೆಯಲ್ಲಿ ನಡೆದಿರುವ ಅಕ್ರಮ ವ್ಯವಹಾರಗಳ ಬಗ್ಗೆ ತನಿಖೆ ನಡೆಸುವಂತೆ ಆಗ್ರಹಿಸಿ ಕಳೆದ 9 ದಿನಗಳಿಂದ ದಲಿತ ಸಂಘರ್ಷ ಸಮಿತಿ ಮುಖಂಡ ಚೋರನಹಳ್ಳಿ ಶಿವಣ್ಣ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಗುತ್ತಿತ್ತು.

ಕಳೆದ 9 ದಿನಗಳಿಂದ ಜಿಲ್ಲಾಧಿಕಾರಿ ಕಛೇರಿ ಬಳಿ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸುತ್ತಿದ್ದ ಪ್ರತಿಭಟನಾಕಾರರು ತಮ್ಮ ಮನವಿಗೆ ಸ್ಪಂದಿಸದಿದ್ದರೆ ಅರೆಬೆತ್ತಲೆಯಾಗಿ ಪ್ರತಿಭಟನೆ ನಡೆಸುವುದಾಗಿ ಜಿಲ್ಲಾಡಳಿತಕ್ಕೆ ಎಚ್ಚರಿಕೆ ನೀಡಿದ್ದರು.

ಇದೀಗ ಪ್ರತಿಭಟನಾಕಾರರ ಹೋರಾಟಕ್ಕೆ ಮಣಿದಿರುವ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ, 9 ದಿನಗಳ ಪ್ರತಿಭಟನೆಯ ಬಳಿಕ ಟಿ.ಎಸ್ ಸುಬ್ರಹ್ಮಣ್ಯ ವಿರುದ್ದ ತನಿಖೆಗೆ ಆದೇಶಿಸಿದ್ದಾರೆ. ತನಿಖಾ ಆದೇಶ ಪ್ರತಿ ನೀಡಿದ ನಂತರ ಪ್ರತಿಭಟನಾಕಾರರು ಪ್ರತಿಭಟನೆ ಹಿಂಪಡೆದಿದ್ದಾರೆ. ತಮ್ಮ ಮನವಿಗೆ ಜಿಲ್ಲಾಡಳಿತ ಸ್ಪಂದಿಸಿದ ಹಿನ್ನೆಲೆಯಲ್ಲಿ ಚೋರನಹಳ್ಳಿ ಶಿವಣ್ಣ ಪ್ರತಿಭಟನಾ ಸ್ಥಳ ತೆರವು ಮಾಡಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments