ಮೈಸೂರು: ವಿಶ್ವವಿಖ್ಯಾತ ದಸರಾ ಮಹೋತ್ಸವಕ್ಕೆ ಕ್ಷಣಗಣನೆ ಆರಂಭವಾಗಿದೆ ಇನ್ನೇನು ದಸರಾಕ್ಕೆ ಚಾಲನೆ ದೊರೆಯಲು ಕೇವಲ ಇನ್ನೆರಡೇ ದಿನ ಬಾಕಿ ಇದೆ. ಆದರೆ ಕೋರೋನಾ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆ
ಕ್ರಮವಾಗಿ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ವಿಧಿಸಿ ಮೈಸೂರು ಜಿಲ್ಲಾಧಿಕಾರಿ ರೋಹಿಣಿ
ಸಿಂಧೂರಿ ಆದೇಶ ಹೊರಡಿಸಿದ್ದಾರೆ.
ದಸರಾ ಉದ್ಘಾಟನೆಗೆ ಆಹ್ವಾನಿತರಿಗೆ ಮಾತ್ರ ಚಾಮುಂಡಿಬೆಟ್ಟಕ್ಕೆ ಪ್ರವೇಶ ಕಲ್ಪಿಸಲಾಗಿದೆ.ಅ.15 ರಿಂದ ದಸರಾ ಉದ್ಘಾಟನೆಗೆ ಜಿಲ್ಲಾಡಳಿತ ವತಿಯಿಂದ ಪೂರ್ವ ಸಿದ್ಧತೆ ನಡೆಸಲಾಗುತ್ತಿದ್ದು, ಪೂರ್ವ ಸಿದ್ಧತೆ ವೇಳೆ, ಸಿದ್ಧತೆಯಲ್ಲಿ ತೊಡಗಿಸಿಕೊಂಡ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಮಾತ್ರ ಪ್ರವೇಶಕ್ಕೆ ಅವಕಾಶ ಕಲ್ಪಿಸಲಾಗಿದೆ. ಗ್ರಾಮಸ್ಥರು ಹೊರತುಪಡಿಸಿ, ಖಾಸಗಿ ವಾಹನಗಳಿಗೆ ಚಾಮುಂಡಿ ಬೆಟ್ಟಕ್ಕೆ ನಿರ್ಬಂಧ ವಿಧಿಸಿ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಆದೇಶಿಸಿದ್ದಾರೆ.
ಇದೀಗಾಗಲೇ ರಾಜ್ಯ ಸರ್ಕಾರ ಕೂಡಾ ಮಾರ್ಗಸೂಚಿ ಹೊರಡಿಸಿದ್ದು, ಮಾರ್ಗಸೂಚಿ ಪ್ರಕಾರ ಜಿಲ್ಲಾಡಾಳಿತ ಸಕಲ ಸಿದ್ದತೆ ಕೈಗೊಂಡಿದೆ .ಇದೇ 17ರಂದು ಮೈಸೂರು ದಸರಾ ಉದ್ಘಾಟನೆಯಾಗಲಿದ್ದು ,ಈ ಬಾರಿ ಜಯದೇವ ಹೃದ್ರೋಗ ಆಸ್ಪತ್ರೆ ನಿರ್ದೇಶಕ ಡಾ. ಮಂಜುನಾಥ್ ದಸರಾ ಉದ್ಘಾಟನೆ ಮಾಡಲಿದ್ದಾರೆ.

ದಸರಾ ಮುಗಿಯುವವರೆಗೂ 2 ಹಂತಗಳಲ್ಲಿ ಚಾಮುಂಡಿ ಬೆಟ್ಟಕ್ಕೆ ಪ್ರವೇಶ ನಿಷೇಧ ಮಾಡಿ ಆದೇಶ ಹೊರಡಿಸಲಾಗಿದೆ. ಅ.14ರಿಂದ 18ರವರೆಗೆ ಸಾರ್ವಜನಿಕರಿಗೆ ಚಾಮುಂಡಿಬೆಟ್ಟಕ್ಕೆ ಪ್ರವೇಶವಿರುವುದಿಲ್ಲ. 2ನೇ ಹಂತದಲ್ಲಿ ಅ.23 ರಿಂದ ನ.1ರವರೆಗೂ ಚಾಮುಂಡಿಬೆಟ್ಟಕ್ಕೆ ಸಾರ್ವಜನಿಕರಿಗೆ ಪ್ರವೇಶವಿಲ್ಲ.
ಚಾಮುಂಡಿ ಬೆಟ್ಟದಲ್ಲಿ ನಡೆಯಲಿರುವ ಉದ್ಘಾಟನೆಯಲ್ಲಿ 200 ಜನರಿಗೆ ಮಾತ್ರ ಅವಕಾಶ ನೀಡಲು ಸೂಚಿಸಲಾಗಿದೆ. ಕೊರೊನಾ ಭೀತಿಯಿಂದಾಗಿ ಈ ಬಾರಿ ದಸರಾದ ಕೊನೇ ದಿನ ನಡೆಯುವ ಜಂಬೂ ಸವಾರಿಯಲ್ಲಿ ಪಾಲ್ಗೊಳ್ಳಲು ಕೇವಲ 300 ಜನರಿಗೆ ಅವಕಾಶ ನೀಡಬೇಕೆಂದು ಶಿಫಾರಸು ಮಾಡಲಾಗಿದೆ. ಅ. 17ರಿಂದ ಅ. 26ರವರೆಗೆ ಮೈಸೂರುಅರಮನೆಯಲ್ಲಿ ದಸರಾಮಹೋತ್ಸವ ನಡೆಯಲಿದೆ.