Friday, September 24, 2021
No menu items!
Home Karnataka ಒಂದು ಜಾತಿಯಿಂದ ಎಷ್ಟೇ ಪ್ರಭಾವಿಯಾಗಿದ್ದರು ಕರ್ನಾಟಕದಲ್ಲಿ ಗೆಲುವು ಅಸಾಧ್ಯ : ಎಚ್‌ ಡಿ ದೇವೇಗೌಡ

ಒಂದು ಜಾತಿಯಿಂದ ಎಷ್ಟೇ ಪ್ರಭಾವಿಯಾಗಿದ್ದರು ಕರ್ನಾಟಕದಲ್ಲಿ ಗೆಲುವು ಅಸಾಧ್ಯ : ಎಚ್‌ ಡಿ ದೇವೇಗೌಡ

ಬೆಂಗಳೂರು : ಆರ್‌ ಆರ್‌ ನಗರದಲ್ಲಿ ಡಿ ಕೆ ಶಿವಕುಮಾರ್‌ ಜಾತಿ ರಾಜಕಾರಣ ಮಾಡುತ್ತಿದ್ದಾರೆಂಬ ಆರೋಪಕ್ಕೆ ಜೆಡಿಎಸ್‌ ವರಿಷ್ಠ ದೇವೇಗೌಡ ಅವರು ಪ್ರತಿಕ್ರಿಯೆ ನೀಡಿದ್ದಾರೆ. ಇಂದು ಜೆ ಪಿ ಭವನದಲ್ಲಿ ಮಾತನಾಡಿದ ಅವರು, ಒಂದು ಜಾತಿಯಿಂದ ಎಷ್ಟೇ ಪ್ರಭಾವಿಯಾಗಿದ್ದರು ಕರ್ನಾಟಕದಲ್ಲಿ ಗೆಲುವು ಅಸಾಧ್ಯ ನನಗೂ ಸಾಕಷ್ಟು ಅನುಭವ ಇದೆ. ಆದರೆ, ನಾನು ಮಾತಾಡೋಕೆ ಹೋಗುವುದಿಲ್ಲ. ಅವರು ಹೇಳಲಿ, ಅವರಿಗೆ ಅಧಿಕಾರ ಇದೆ. ಆದರೆ, ಅಂತಿಮವಾಗಿ ಮತದಾರರು ತೀರ್ಮಾನ ಮಾಡ್ತಾರೆ ಎಂದಿದ್ದಾರೆ.

ನಮ್ಮ ಪಕ್ಷವನ್ನ ಯಾರಾದರೂ ಒಡೆಯುತ್ತಾರೆ ಎಂದರೆ ಅದು ಅವರ ಭ್ರಮೆ. ಯಾವುದೇ ಕಾರಣಕ್ಕೂ ನಮ್ಮ ಪಕ್ಷವನ್ನು ಒಡೆಯಲು ಸಾಧ್ಯವಿಲ್ಲ. ಜೆಡಿಎಸ್ ಪಕ್ಷವನ್ನು ಯಾರೇ ಬಂದರೂ ತುಳಿಯಲು ಆಗುವುದಿಲ್ಲ. ಯಾರು ಏನು ಬೇಕಾದರೂ ಹೇಳಲಿ. ನಮ್ಮ ‌ಪಕ್ಷ ಯಾರಿಂದಲೂ ಮುಗಿಸಲು ಸಾಧ್ಯವಿಲ್ಲ. ನಾನು ಕಾಂಗ್ರೆಸ್ ಮತ್ತು ಬಿಜೆಪಿ ವಿರುದ್ಧ ಹೋರಾಟ ಮಾಡುತ್ತಲೇ ಬಂದಿದ್ದೇನೆ ಎಂದು ಕಾಂಗ್ರೆಸ್-ಬಿಜೆಪಿಗೆ ದೇವೇಗೌಡ ತಿರುಗೇಟು ನೀಡಿದ್ದಾರೆ.

ದೇಶದಲ್ಲಿ ಮುಸ್ಲಿಂ ಮೀಸಲಾತಿ, ಮಹಿಳೆಯರಿಗೆ ಮೀಸಲಾತಿ ಕೊಟ್ಟಿದ್ದು ನಮ್ಮ ಸರ್ಕಾರ. ಸಾಮಾಜಿಕ ನ್ಯಾಯ ಅನುಷ್ಠಾನ ಮಾಡಿದ್ದು ನಮ್ಮ ಸರ್ಕಾರ. ನನ್ನ ಹೆಸರಲ್ಲಿ ಗೌಡ ಅಂತ ಸೇರಿಕೊಂಡಿದೆ. ಹಾಗಂತ ನಿಂದನೆ ಮಾಡೋದು ಸರಿಯಾ?  ನಿಂದಕರಿರಬೇಕಯ್ಯ ಅಂತ ಬಸವಣ್ಣನವರು ಹೇಳಿದ್ದಾರೆ. ನಿಂದನೆ ಮಾಡಿದ್ದಕ್ಕೆ ಅವರೇ ಅನುಭವಿಸುತ್ತಾರೆ ಬಿಡಿ. ಅವರು ಚುನಾವಣೆಯಲ್ಲಿ ಗೆಲ್ಲೋಕೆ, ಅವರ ಅಭ್ಯರ್ಥಿ ಗೆಲ್ಲಿಸೋಕೆ ಯಾವ ಪ್ರಯೋಗ ಮಾಡ್ತಾರೋ ಮಾಡಲಿ. ಅದಕ್ಕೆ ಅವರು ಸ್ವತಂತ್ರರು ಎಂದು ಡಿ.ಕೆ. ಶಿವಕುಮಾರ್ ವಿರುದ್ದ ದೇವೇಗೌಡ ಆಕ್ರೋಶ ಹೊರಹಾಕಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments