Saturday, December 4, 2021
No menu items!
Home Karnataka ಆರ್ ಆರ್ ನಗರಕ್ಕೆ ಜೆಡಿಎಸ್ ಕ್ಯಾಂಡಿಡೇಟ್ ಫಿಕ್ಸ್..?!!

ಆರ್ ಆರ್ ನಗರಕ್ಕೆ ಜೆಡಿಎಸ್ ಕ್ಯಾಂಡಿಡೇಟ್ ಫಿಕ್ಸ್..?!!

ಬೆಂಗಳೂರು: ರಾಜರಾಜೇಶ್ವರಿ ನಗರ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಕಾವು ದಿನದಿಂದ ದಿನಕ್ಕೆ ಕಾವೇರುತ್ತಲೇ ಇದೆ. ಇತ್ತ  ಮುನಿರತ್ನ ಅವರು ಬಿಜೆಪಿ ಟಿಕೆಟ್ ಸಿಗದಿದ್ದರೆ  ಜೆಡಿಎಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರೆ ಎಂಬ ವದಂತಿ ದಟ್ಟವಾಗಿತ್ತು. ಆದರೆ ಇದೀಗ  ಜೆಡಿಎಸ್ ಅಭ್ಯರ್ಥಿ ಸೋಮವಾರ ನಾಮಪತ್ರ ಸಲ್ಲಿಸಲಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಎಚ್ಡಿಕೆ ಹೇಳಿರುವುದು ತೀವ್ರ ಕುತೂಹಲ ಕೆರಳಿಸಿದೆ.
ಆದರೆ ಅಭ್ಯರ್ಥಿ ಯಾರು? ಎಂಬುದನ್ನು ಪಕ್ಷ ಅಧಿಕೃತವಾಗಿ ಘೋಷಣೆ ಮಾಡಿಲ್ಲ.ಹಾಗಾಗಿ ಎಲ್ಲರ ಚಿತ್ತ ಜೆಡಿಎಸ್  ಘೋಷಣೆ  ಮಾಡುವ ಅಭ್ಯರ್ಥಿ ಯತ್ತ ನೆಟ್ಟಿದೆ.
ಈ ಕುರಿತು ಮಾಹಿತಿ ನೀಡಿರುವ ಜೆಡಿಎಸ್  ವರಿಷ್ಠ  ,ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ  “ಅಭ್ಯರ್ಥಿ ಯಾರೆಂದು ಭಾನುವಾರ ಅಂತಿಮಗೊಳಿಸಿ, ಸೋಮವಾರ ನಾಮಪತ್ರ ಸಲ್ಲಿಸಲಾಗುತ್ತದೆ” ಎಂದು ಹೇಳಿದ್ದಾರೆ. ಅಕ್ಟೋಬರ್ 17 ನಾಮಪತ್ರ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಆರ್. ಆರ್. ನಗರ ಕ್ಷೇತ್ರಕ್ಕೆ ಬೆಂಗಳೂರು ನಗರ ಘಟಕದ ಅಧ್ಯಕ್ಷ ಆರ್. ಪ್ರಕಾಶ್, ಆರ್. ಆರ್. ನಗರ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಬೆಟ್ಟಸ್ವಾಮಿ ಗೌಡ ಮತ್ತು ಜ್ಞಾನ ಭಾರತಿ ಕೃಷ್ಣಮೂರ್ತಿ ಅವರ ಹೆಸರು ಚಾಲ್ತಿಯಲ್ಲಿದೆ.
ರಾಜರಾಜೇಶ್ವರಿ ನಗರ ಮೊದಲಿನಿಂದಲೂ ಜೆಡಿಎಸ್ ಪ್ರಭಾವ ಇರುವ ಕ್ಷೇತ್ರ. ಕ್ಷೇತ್ರದಲ್ಲಿ ಗೆಲುವು ಸಾಧಿಸುವುದು ನಮ್ಮ ಗುರಿ”ರಾಜರಾಜೇಶ್ವರಿ ನಗರ ಕ್ಷೇತ್ರವನ್ನು ನಮ್ಮ ಪಕ್ಷ ಗಂಭೀರವಾಗಿ ಪರಿಗಣಿಸಿದೆ.ನಮಗೆ ಗೆಲ್ಲುವ ವಿಶ್ವಾಸವಿದೆ ಎಂದು ಎಚ್. ಡಿ. ಕುಮಾರಸ್ವಾಮಿ ಹೇಳಿದ್ದಾರೆ.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments