Friday, May 14, 2021
No menu items!
Home Karnataka ಶಿರಾ, ಆರ್ ಆರ್ ನಗರ ಉಪಚುನಾವಣೆ: ಮತದೇವರುಗಳ ಮನೆಗೆ ಅಭ್ಯರ್ಥಿಗಳು

ಶಿರಾ, ಆರ್ ಆರ್ ನಗರ ಉಪಚುನಾವಣೆ: ಮತದೇವರುಗಳ ಮನೆಗೆ ಅಭ್ಯರ್ಥಿಗಳು

ಬೆಂಗಳೂರು: ರಾಜ್ಯದ ಎರಡು ವಿಧಾನಸಭಾ ಕ್ಷೇತ್ರಗಳಾದ ಶಿರಾ ಮತ್ತು ಆರ್ ಆರ್ ನಗರದಲ್ಲಿ ಉಪಚುನಾವಣೆಗೆ ಇನ್ನೊಂದೇ ಒಂದು ದಿನ ಬಾಕಿ ಇದೆ. ಬಹಿರಂಗ ಪ್ರಚಾರಕ್ಕೆ ನಿನ್ನೆಯೇ ತೆರೆಬಿದ್ದಿದ್ದು, ನಾಳೆ ಮತದಾನ ನಡೆಯಲಿದೆ. ಹಾಗಾಗಿ ಇಂದು ಎರಡೂ ಕ್ಷೇತ್ರಗಳಲ್ಲಿ ಮೂರೂ ಪಕ್ಷಗಳೂ ಮನೆ ಮನೆ ಪ್ರಚಾರ ಕೈಗೊಂಡಿವೆ.


ನಿನ್ನೆ ಸಂಜೆ 6 ಗಂಟೆಗೆ ಬಹಿರಂಗ ಪ್ರಚಾರಕ್ಕೆ ತೆರೆ ಎಳೆದಿದ್ದು, ಶಿರಾ ಮತ್ತು ಆರ್ ಆರ್ ನಗರದಲ್ಲಿ ಕಾಂಗ್ರೆಸ್, ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಮನೆ ಮನೆ ಪ್ರಚಾರದಲ್ಲಿ ಬ್ಯುಸಿಯಾಗಿದ್ದಾರೆ. ಆಯಾ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ನಾಯಕರು, ಕಾರ್ಯಕರ್ತರು ಅಂತಿಮ ಹಂತದ ಪ್ರಯತ್ನದಲ್ಲಿದ್ದಾರೆ. ರಡೂ ಕ್ಷೇತ್ರಗಳಲ್ಲಿ ಮೂರೂ ಪಕ್ಷದ ಅಭ್ಯರ್ಥಿಗಳು ಬಿರುಸಿನಿಂದ ಮನೆ ಮನೆಗೆ ತೆರಳಿ ಮತಯಾಚಿಸುತ್ತಿದ್ದಾರೆ.


ಆರ್ ಆರ್ ನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಹನುಮಂತರಾಯಪ್ಪ, ಬಿಜೆಪಿಯಿಂದ ಮುನಿರತ್ನ ಹಾಗೂ ಜೆಡಿಎಸ್ ನಿಂದ ಕೃಷ್ಣಮೂರ್ತಿ ಇಂದು ಮತದಾರರ ಮನೆ ಮನೆಗೆ ತೆರಳಿ ಪ್ರಚಾರ ನಡೆಸುತ್ತದ್ದಾರೆ. ಇನ್ನು ಶಿರಾದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಟಿಬಿ ಜಯಚಂದ್ರ, ಬಿಜೆಪಿಯಿಂದ ರಾಜೇಶ್ ಗೌಡ ಹಾಗೂ ಜೆಡಿಎಸ್ ನಿಂದ ಅಮ್ಮಜಮ್ಮ ಇಂದು ಮನೆ ಮನೆ ಪ್ರಚಾರದಲ್ಲಿ ತೊಡಗಿದ್ದಾರೆ. ಇಂದು ಸಂಜೆ ಮನೆ ಮನೆ ಪ್ರಚಾರಕ್ಕೂ ತೆರೆ ಬೀಳಲಿದೆ.


ಶಿರಾ ಹಾಗೂ ಆರ್ ಆರ್ ನಗರದ ವಿಧಾನಸಭಾ ಉಪ ಚುನಾವಣೆ ನಾಳೆ ನಡೆಯಲಿದ್ದು, ನವೆಂಬರ್ 9 ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಹೀಗಾಗಿ ಇಂದು ಸಂಜೆಯಿಂದ ಎರಡೂ ಕ್ಷೇತ್ರಗಳಲ್ಲಿ ಮದ್ಯ ಮಾರಾಟ ಬಂದ್ ಆಗಲಿದೆ. ನವೆಂಬರ್ 3ರ ಮಧ್ಯರಾತ್ರಿ 12ರ ವರೆಗೆ ಮದ್ಯ ಮಾರಾಟ ಬಂದ್ ಆಗಿರಲಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments