Wednesday, October 27, 2021
No menu items!
Home Latest ನಾಳೆ ಹೊರಬೀಳಲಿದೆ ಉಪಚುನಾವಣಾ ಫಲಿತಾಂಶ, ಆದ್ರೆ ಯಾರೇ ಗೆದ್ರು ಸಂಭ್ರಮಿಸುವ ಹಾಗಿಲ್ಲ..!

ನಾಳೆ ಹೊರಬೀಳಲಿದೆ ಉಪಚುನಾವಣಾ ಫಲಿತಾಂಶ, ಆದ್ರೆ ಯಾರೇ ಗೆದ್ರು ಸಂಭ್ರಮಿಸುವ ಹಾಗಿಲ್ಲ..!

ಬೆಂಗಳೂರು: ನವೆಂಬರ್ 10, ನಾಳೆ ಆರ್ ಆರ್ ನಗರ ಹಾಗೂ ತುಮಕೂರಿನ ಶಿರಾ ಉಪಚುನಾವಣೆಯ ಫಲಿತಾಂಶ ಹೊರ ಬೀಳಲಿದೆ. ಕೋವಿಡ್ ಹಿನ್ನೆಲೆ ಮತಎಣಿಕೆಗೆ ಮುನ್ನೆಚ್ಚರಿಕೆ ವಹಿಸಲಾಗಿದ್ದು, ಈ ಬಗ್ಗೆ ಬಿಬಿಎಂಪಿ ಆಯುಕ್ತ ಮತ್ತು ಚುನಾವಣಾಧಿಕಾರಿ ಮಂಜುನಾಥ ಪ್ರಸಾದ ಮತ್ತು ಮತ ಎಣಿಕೆ ಆಯುಕ್ತ ಹಾಗೂ ನಗರ ಪೊಲೀಸ್ ಆಯುಕ್ತ ಕಮಲಪಂಥ್ ಸುದ್ದಿಗೋಷ್ಠಿ ನಡೆಸಿದ್ದಾರೆ.

ಕ್ಷೇತ್ರದ ಹಲಗೇವಡೇರಹಳ್ಳಿಯಲ್ಲಿರುವ ಜ್ಞಾನಾಕ್ಷಿ ವಿದ್ಯಾನಿಕೇತನ ಶಾಲೆಯಲ್ಲಿ ಮತ ಎಣಿಕೆ ಕ್ರಿಯೆ ನಡೆಲಿದೆ. ಕೋವಿಡ್ ನಿಯಮಗಳನ್ನ ಪಾಲನೆ ಮಾಡಲು ಸೂಚನೆ ನೀಡಲಾಗಿದೆ. ಮತ ಎಣಿಕೆ ಕೇಂದ್ರಕ್ಕೆ ಬರುವವರಿಗೆ ಸ್ಯಾನಿಟೈಸ್, ಥರ್ಮಲ್ ಸ್ಕ್ರೀನಿಂಗ್, ಮಾಸ್ಕ್, ಸಾಮಾಜಿಕ ಅಂತರ ಕಡ್ಡಾಯವಾಗಿದೆ. ನಾಳೆ ಬೆಳಗ್ಗೆ 8 ಗಂಟೆಗೆ ಮತ ಏಣಿಕೆ ಆರಂಭವಾಗಲಿದೆ. ಮಧ್ಯಾಹ್ನ 12.30 ರಿಂದ 1 ಗಂಟೆಗೆ ಎಣಿಕೆ ಮುಗಿಯಲಿದೆ ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ ಪ್ರಸಾದ್ ತಿಳಿಸಿದರು.

ಮತ ಎಣಿಕೆ ವೇಳೇ 1 ಟೇಬಲ್ಗೆ ಮೂರು ಜನ ಸಿಬ್ಬಂದಿ ಮತ ಎಣಿಕೆ ನಡೆಸಲಿದ್ದಾರೆ. ಒಟ್ಟು ನಾಲ್ಕು ಕೊಠಡಿಗಳಲ್ಲಿ ಮತ ಎಣಿಕೆ ಕಾರ್ಯ ನಡೆಯಲಿದೆ. ಇದಕ್ಕಾಗಿ ಒಟ್ಟು 28 ಟೇಬಲ್ ಹಾಕಲಾಗಿದೆ. ಮತ ಎಣಿಕೆ ಮೇಲುಸ್ತುವಾರಿಗಾಗಿ ಒಬ್ಬ ಕೆಎಎಸ್ ಅಧಿಕಾರಿ ನೇಮಿಸಲಾಗಿದೆ. ಒಟ್ಟು 250 ಸಿಬ್ಬಂದಿ ಮತ ಎಣಿಕೆಯಲ್ಲಿ ಭಾಗಿಯಾಗಲಿದ್ದಾರೆ. ಆರ್ಆರ್ನಗರದಲ್ಲಿ ಈ ಬಾರಿ ಶೇ 54.48ರಷ್ಟು ಮತದಾನವಾಗಿದೆ ಎಂದು ತಿಳಿಸಿದ್ದಾರೆ.

ಮತ ಎಣಿಕೆ ಬಳಿಕೆ ಗೆದ್ದ ಅಭ್ಯರ್ಥಿಗಳ ಪರ ಮತಗಟ್ಟೆ ಸಮೀಪ ಯಾವುದೇ ಸಂಭ್ರಮಾಚರಣೆ ಹಾಗೂ ಪಟಾಕಿ ಸಿಡಿಸಲು ಅವಕಾಶ ಇಲ್ಲ. ಮತ ಎಣಿಕೆ ಕೇಂದ್ರದ ಮುಂದಿನ ರಸ್ತೆಯಲ್ಲಿ ಸಂಚಾರ ನಿಷೇಧ ಮಾಡಲಾಗಿದ್ದು, ವಾಹನ ಸಂಚಾರಕ್ಕೆ ಪರ್ಯಾಯ ವ್ಯವಸ್ಥೆ ಕಲ್ಪಿಸಲಾಗಿದೆ. ರಾಜ್ಯದಲ್ಲಿ ಪಟಾಕಿ ನಿಷೇಧವಿದ್ದು, ಪಟಾಕಿ ಹೊಡೆದರೆ ಕಾನೂನು ರೀತಿಯಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು.

ಚುನಾವಣೆಗಳಲ್ಲಿ ಫಲಿತಾಂಶದ ದಿನ ಹೆಚ್ಚು ಸಂಭ್ರಮಾಚರಣೆ ಇರಲಿದೆ. ಸದ್ಯ ಕೊರೊನಾದಿಂದ ಪರಿಸ್ಥಿತಿ ಕೆಟ್ಟದಾಗಿದ್ದು, ಪಟಾಕಿ ಹೊಡೆಯುವುದಾಗಲಿ, ಸಾಮಾಜಿಕ ಅಂತರ ಮರೆತು ನಡೆದುಕೊಳ್ಳುವುದಾಗಲಿ ಮಾಡಬಾರದು ಎಂದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments