Tuesday, August 3, 2021
No menu items!
Home Karnataka ʼಡಿಕೆಶಿ ಎಂಬ ಬಂಡೆಯನ್ನು ಡೈನಾಮೆಟ್ ಇಟ್ಟು ಪುಡಿ ಪುಡಿ ಮಾಡಿದ್ದೇವೆʼ

ʼಡಿಕೆಶಿ ಎಂಬ ಬಂಡೆಯನ್ನು ಡೈನಾಮೆಟ್ ಇಟ್ಟು ಪುಡಿ ಪುಡಿ ಮಾಡಿದ್ದೇವೆʼ

ಬೆಂಗಳೂರು: ಆರ್ ಆರ್ ನಗರ ಹಾಗೂ ತುಮಕೂರಿನ ಶಿರಾ ಉಪಚುನಾವಣೆಯಲ್ಲಿ ಬಿಜೆಪಿ ಬಹುತೇಕ ಗೆಲುವನ್ನು ಸಾಧಿಸಿದೆ. ಘೋಷಣೆಯೊಂದೆ ಬಾಕಿ ಇದೆ. ಈಗಾಗಲೇ ಗೆಲುವಿನ ಸಂಭ್ರಮವನ್ನು ಸಚಿವ ಆರ್ ಅಶೋಕ್ ಸಿಹಿ ಹಂಚಿ ಸಂಭ್ರಮಿಸಿದ್ದಾರೆ. ತಮ್ಮ ಗೆಲುವಿನ ಸಂಭ್ರಮದಲ್ಲಿ ಕಾಂಗ್ರೆಸ್ ನವರಿಗೆ ಸಚಿವ ಅಶೋಕ್ ಕುಟುಕಿದ್ದಾರೆ.

ಸಿದ್ದರಾಮಯ್ಯ ಅವರ ಬುಡ ಅಲ್ಲಾಡುತ್ತಿದೆ. ಅವರ ಭವಿಷ್ಯದ ಅಂಗಡಿ ಮುಚ್ಚಿದೆ. ಡಿ.ಕೆ. ಶಿವಕುಮಾರ್ ಬಂಡೆಯಂತೆ ಬಂದ್ರು, ಆದರೆ ನಾವು ಆ ಬಂಡೆಯನ್ನು ಡೈನಾಮೆಟ್ ಇಟ್ಟು ಉಡಾಯಿಸಿ ಪುಡಿ ಮಾಡಿದ್ದೇವೆ ಎಂದು ಸಚಿವ ಆರ್. ಅಶೋಕ್ ಕಾಂಗ್ರೆಸ್ ನಾಯಕರನ್ನು ಅಪಹಾಸ್ಯ ಮಾಡಿದ್ದಾರೆ.

ಡಿ.ಕೆ. ಶಿವಕುಮಾರ್ ಈ ಚುನಾವಣೆಯಲ್ಲಿ ಜಾತಿ ಆಟವಾಡಲು ಹೋದರು. ಆದರೆ, ಬೆಂಗಳೂರಿನ ಒಕ್ಕಲಿಗರು ಬಿಜೆಪಿ ಹಾಗೂ ಅಶೋಕ್ ಜೊತೆಗೆ ಇದ್ದಾರೆ ಎಂಬುದು ಈ ಫಲಿತಾಂಶದ ಮೂಲಕ ಖಚಿತ ಪಡಿಸಿದ್ದಾರೆ. ಈ ಉಪ ಚುನಾವಣೆ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಸ್ಥಾನವನ್ನು ಮತ್ತಷ್ಟು ಗಟ್ಟಿ ಮಾಡಿದೆ. ಬಿಎಸ್ವೈ ನಾಯಕತ್ವ ಬದಲಾವಣೆ ಇಲ್ಲ. ಕರ್ನಾಟಕ ದ ಜನ ಯಡಿಯೂರಪ್ಪ ನೇತೃತ್ವದ ಸರ್ಕಾರಕ್ಕೆ ಶಬ್ಬಾಶ್ ಗಿರಿ ಕೊಟ್ಟಿದ್ದಾರೆ. ಬಿಎಸ್ ವೈ ಇನ್ನು ಎರಡು ವರ್ಷ ಬಿಎಸ್ವೈ ಮುಖ್ಯಮಂತ್ರಿ ಆಗಿರಲಿ ಎಂದು ಆಶಿಸಿದ್ದಾರೆ.

ಉಪ ಚುನಾವಣೆ ಮುಗಿದ ಬಳಿಕ ಸಿಎಂ ಸ್ಥಾನ ಬದಲಾಗುತ್ತದೆ, ಯಡಿಯೂರಪ್ಪ ತಮ್ಮ ಸ್ಥಾನದಿಂದ ಕೆಳಗಿಳಿಯುತ್ತಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments