ಸ್ಯಾಂಡಲ್ ವುಡ್ ನಲ್ಲಿ ಡ್ರಗ್ಸ್ ಕೇಸ್ ಗೆ ಸಂಬಂಧಸಿದಂತೆ ಈಗಾಗಲೇ ಪೊಲೀಸರು ನಟಿ ಸಂಜನಾ ಗಲ್ರಾನಿ, ನಟಿ ರಾಗಿನಿ ದ್ವಿವೇದಿ ಸೇರಿದಂತೆ ಅನೇಕರನ್ನು ಜೈಲಿಗೆ ಕಳುಹಿಸಿದ್ದಾರೆ. ಇಂದು ಈ ಇಬ್ಬರು ನಟಿಯರ ನ್ಯಾಯಾಂಗ ಬಂಧನ ಮತ್ತೆ ವಿಸ್ತರಣೆಯಾಗಿದೆ.

ಅಕ್ಟೋಬರ್ 23 ರವರೆಗೆ ಇಬ್ಬರು ನಟಿಯರಿಗೆ ನ್ಯಾಯಾಂಗ ಬಂಧನ ವಿಸ್ತರಣೆಯಾಗಿದೆ. ಡಿಪಿಎಸ್ ವಿಶೇಷ ಕೋರ್ಟ್ ಆದೇಶ ಹೊರಡಿಸಿದೆ.

ಸಂಜನಾ ಗಲ್ರಾನಿಯ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವ ಹಿನ್ನೆಲೆಯಲ್ಲಿ ನಟಿ ಪರ ವಕೀಲ ಜಾಮೀನು ಕೋರಿ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದಾರೆ.

ಸದ್ಯ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿಮಣಿಯರ ದಿನನಿತ್ಯದ ಜಡೆಜಗಳದಿಂದ ಅಲ್ಲಿನ ಸಿಬ್ಬಂದಿ ಹಾಗೂ ಇತರೆ ಕೈದಿಗಳು ರೋಸಿಹೋಗಿದ್ದಾರೆ ಎಂದು ತಿಳಿದುಬಂದಿದೆ. ಇದೀಗ, ಇವರ ನ್ಯಾಯಾಂಗ ಬಂಧನದ ಅವಧಿ ವಿಸ್ತರಣೆಯಾಗಿರುವುದು ಜೈಲಿನಲ್ಲಿರುವವರಿಗೆ ಮತ್ತಷ್ಟು ತಲೆನೋವು ತಂದುಕೊಡಬಹುದು.