Saturday, May 15, 2021
No menu items!
Home Karnataka ಹೊಸವರ್ಷದಿಂದ ಶಾಲೆ ಪುನಾರಂಭ; ಇದು ಸದುದ್ದೇಶದ ನಿರ್ಣಯ-ಸುರೇಶ್ ಕುಮಾರ್

ಹೊಸವರ್ಷದಿಂದ ಶಾಲೆ ಪುನಾರಂಭ; ಇದು ಸದುದ್ದೇಶದ ನಿರ್ಣಯ-ಸುರೇಶ್ ಕುಮಾರ್

ಬೆಂಗಳೂರು: ಕೋವಿಡ್ 19 ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ಶಾಲೆಗಳನ್ನು ಮತ್ತೆ ಜನವರಿ 1ರಿಂದ ಪುನಃ ಆರಂಭಿಸಲಾಗುತ್ತಿದ್ದು ವಿದ್ಯಾಗಮಕ್ಕೂ ಮತ್ತೆ ಚಾಲನೆ ನೀಡಲಾಗುತ್ತಿದೆ. ಈ ಕುರಿತು ಸರ್ಕಾರ ಮಹತ್ವದ ನಿರ್ಣಯ ತೆಗೆದುಕೊಂಡಿದ್ದು ಹೊಸವರ್ಷದಿಂದ ಎಸ್ಎಸ್ಎಲ್ಸಿ ಮತ್ತು ಪಿಯುಸಿ ತರಗತಿಗಳು ಪುನಾರಂಭವಾಗಲಿವೆ.

ಈ ನಿರ್ಣಯ ಸದ್ದುದ್ದೇಶದಿಂದ ಕೂಡಿದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ತಮ್ಮ ಫೇಸ್​ಬುಕ್ ಪೋಸ್ಟ್​ನಲ್ಲಿ ಬರೆದುಕೊಂಡಿದ್ದಾರೆ.ಕೋವಿಡ್-19ರ ಕಾರಣದಿಂದಾಗಿ ಶೈಕ್ಷಣಿಕ ಕ್ಷೇತ್ರದಲ್ಲೂ ಸಮಸ್ಯೆ ಉಂಟಾಗಿತ್ತು. ಇದನ್ನ ಗಮನದಲ್ಲಿರಿಸಿಕೊಂಡೇ ಕೇಂದ್ರ ಸರ್ಕಾರವು ವಿದ್ಯಾಗಮ ನಿರಂತರ ಕಲಿಕಾ ಯೋಜನೆಯನ್ನು ಈ ಹಿಂದೆ ಜಾರಿಗೆ ತಂದಿತ್ತು ಎಂದು ಸುರೇಶ್ ನೆನಪಿಸಿಕೊಂಡಿದ್ದಾರೆ.

ಅದೇ ರೀತಿ 2020ರ ಎಸ್ ಎಸ್‌ಎಲ್ ಸಿ ಪರೀಕ್ಷೆಯ ಪರೀಕ್ಷಾ ಕೇಂದ್ರಗಳಿಂದ ಹೇಗೆ ಸೋಂಕು ಹರಡದಂತೆ ನೋಡಿಕೊಂಡಿದ್ದೆವೋ, ಅದೇ ರೀತಿ ಈಗ ಶಾಲೆಗಳಿಂದ ಸೋಂಕು ಬರದಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತದೆ ಎಂದು ಕೂಡಾ ಶಿಕ್ಷಣ ಸಚಿವರು ಭರವಸೆ ನೀಡಿದ್ದಾರೆ.

ಪೋಷಕರು ತಮ್ಮ ಮಕ್ಕಳ ಮುಂದಿನ ಭವಿಷ್ಯವನ್ನು ಯೋಚಿಸಿ ಶಾಲೆಗಳಿಗೆ ಮಕ್ಕಳನ್ನು ಶಾಲೆಗೆ ಕಳುಹಿಸಿ.ಈ ಕಾರ್ಯ ಯಶಸ್ವಿಯಾಗಬೇಕೆಂದರೆ ಪೋಷಕರ, ಶಾಲಾ ಅಭಿವೃದ್ಧಿ ಸಮಿತಿ ಗಳ ಮತ್ತು ಶಿಕ್ಷಕರ ಸಮನ್ವಯ ಮತ್ತು ಪೂರ್ಣ ಸಹಕಾರ ಅಗತ್ಯ ಎಂದು ಸಚಿವರಾದ ಸುರೇಶ್ ಕುಮಾರ್ ಮನವಿ ಮಾಡಿಕೊಂಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments