Saturday, June 19, 2021
No menu items!
Home Karnataka ಪಕ್ಷಾಂತರ ಪರ್ವ ;ಶರತ್ ಬಚ್ಚೇಗೌಡ ಜೊತೆ ಕಾಂಗ್ರೆಸ್ಸಿಗೆ ಸೇರುತ್ತಾರಾ ಮತ್ತೊಬ್ಬ ಬಿಜೆಪಿಯ ಪ್ರಭಾವಿ ನಾಯಕ …???

ಪಕ್ಷಾಂತರ ಪರ್ವ ;ಶರತ್ ಬಚ್ಚೇಗೌಡ ಜೊತೆ ಕಾಂಗ್ರೆಸ್ಸಿಗೆ ಸೇರುತ್ತಾರಾ ಮತ್ತೊಬ್ಬ ಬಿಜೆಪಿಯ ಪ್ರಭಾವಿ ನಾಯಕ …???

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಮತ್ತೊಂದು ಪಕ್ಷಾಂತರ ಪರ್ವ ಶುರುವಾಗುವ ಲಕ್ಷಣಗಳು ಕಂಡುಬರುತ್ತಿವೆ. ಇತ್ತ ಹೊಸಕೋಟೆ ಕ್ಷೇತ್ರದ ಯುವ ಶಾಸಕ ಶರತ್ ಬಚ್ಚೇಗೌಡ, ಕಾಂಗ್ರೆಸ್ಸಿಗೆ ಸೇರುವ ಸುದ್ದಿ ಖಚಿತವಾಗುತ್ತಿದ್ದಂತೆಯೇ, ಬಿಜೆಪಿಗೆ ಇನ್ನೊಂದು ಆಘಾತ ಎದುರಾಗಿದೆ. ಬಿಜೆಪಿಯ ಮತ್ತೊಬ್ಬ ಪ್ರಭಾವಿ ಮುಖಂಡರೊಬ್ಬರು ಕಾಂಗ್ರೆಸ್ ಕದ ತಟ್ಟುತ್ತಿದ್ದಾರೆಂಬ ವದಂತಿ ದಟ್ಟವಾಗಿದೆ.

ವಿಧಾನ ಪರಿಷತ್ ಸದಸ್ಯರಾಗಿರುವ ಸೋಮಣ್ಣ ಬೇವಿನಮರದ ಕಾಂಗ್ರೆಸ್ ಕಡೆ ವಾಲುತ್ತಿದ್ದಾರೆಂಬುದು ಸದ್ಯ ಬಿಜೆಪಿ ವಲಯದಲ್ಲಿ ತೀವ್ರ ಸಂಚಲನ ಸೃಷ್ಟಿಸಿದೆ . ದಿನದ ಹಿಂದೆ, ಮಾಜಿ ಸ್ಪೀಕರ್ ಕೆ.ಬಿ.ಕೋಳಿವಾಡ ,ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ಸೋಮಣ್ಣ ಬೇವಿನಮರದ ಭೇಟಿಯಾಗಿ, ಪಕ್ಷ ಸೇರುವ ಇಂಗಿತ ವ್ಯಕ್ತ ಪಡಿಸಿದ್ದರು ಎನ್ನಲಾಗಿದೆ.

ಕಳೆದ ಅಸೆಂಬ್ಲಿ ಚುನಾವಣೆಯಲ್ಲಿ ಶಿಗ್ಗಾಂವ್ -ಸವಣೂರು ಕ್ಷೇತ್ರದ ಬಿಜೆಪಿ ಟಿಕೆಟ್ ಬಯಸಿದ್ದ ಸೋಮಣ್ಣ ಟಿಕೆಟ್ ಸಿಗದೆ ಬೇಸರಗೊಂಡಿದ್ದರು. ಆ ಸಮಯದಲ್ಲಿ ಯಡಿಯೂರಪ್ಪ ಅವರು ತಮ್ಮ ಆಪ್ತರಲ್ಲಿ ಒಬ್ಬರಾದ ಬಸವರಾಜ ಬೊಮ್ಮಾಯಿಗೆ ಅಲ್ಲಿಂದ ಟಿಕೆಟ್ ನೀಡಿದ್ದರು.ಇದರಿಂದ ಸಹಜವಾಗಿಯೇ ಸೋಮಣ್ಣ ಬೇವಿನಮರದ ನಿರಾಶರಾಗಿದ್ದರು. ಇದೀಗ ಇವರು ಕೆಪಿಸಿಸಿ ಮುಖಂಡರನ್ನು ಭೇಟಿ ಮಾಡಿರುವುದು ತೀವ್ರ ಕುತೂಹಲ ಕೆರಳಿಸಿದೆ.

ಅಲ್ಲಿಂದ, ಬಿಜೆಪಿ ವಿರುದ್ದ ಮುನಿಸಿಕೊಂಡಿದ್ದ ಸೋಮಣ್ಣ, ಮತ್ತೆ ರಾಜಕೀಯ ನೆಲೆ ಕಾಣಲು ಮತ್ತು ಮುಂಬರುವ ಚುನಾವಣೆಗೆ ಶಿಗ್ಗಾಂವ್ ನಿಂದ ಟಿಕೆಟ್ ಬಯಸಿ, ಕಾಂಗ್ರೆಸ್ ಸೇರಲು ಉತ್ಸುಕರಾಗಿದ್ದಾರೆಂದು ಹೇಳಲಾಗುತ್ತಿದೆ.

“ಹಿರಿಯ ಮುಖಂಡರಾದ ಸಿದ್ದರಾಮಯ್ಯ ಮತ್ತು ಡಿ.ಕೆ.ಶಿವಕುಮಾರ್ ಅವರ ಕರೆಯ ಮೇರೆಗೆ, ಕೋಳಿವಾಡ ಅವರ ಜೊತೆಗೆ ಬಂದು ಮಾತುಕತೆ ನಡೆಸಿದ್ದೇನೆ. ನಾನಿನ್ನೂ ಕಾಂಗ್ರೆಸ್ಸಿಗೆ ಸೇರಿಲ್ಲ. ಕ್ಷೇತ್ರದ ಮುಖಂಡರು ಮತ್ತು ಕಾರ್ಯಕರ್ತರು ಏನು ಬಯಸುತ್ತಾರೋ ಅದನ್ನು ಮಾಡುತ್ತೇನೆ”ಎಂದು ಸೋಮಣ್ಣ ಬೇವಿನಮರದ ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments