Wednesday, October 27, 2021
No menu items!
Home Karnataka ಹಸಿದವರಿಗೆ ಅನ್ನ ಹಾಕಲು ಆಗಾದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? : ಸಿದ್ದರಾಮಯ್ಯ

ಹಸಿದವರಿಗೆ ಅನ್ನ ಹಾಕಲು ಆಗಾದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? : ಸಿದ್ದರಾಮಯ್ಯ

ಬೆಂಗಳೂರು : ಉತ್ತರ ಕರ್ನಾಟಕ ಭಾಗದಲ್ಲಿ ಮಳೆ ಜೋರಾಗಿದ್ದು, ಪ್ರವಾಹ ಉಂಟಾಗಿದೆ. ಎಷ್ಟೋ ಜನ ಮನೆ_ಮಠ ಕಳೆದುಕೊಂಡು ಅನ್ನಕ್ಕಾಗಿ ಪರದಾಡುವಂತ ಪರಿಸ್ಥಿತಿ ನಿರ್ಮಾಣವಾಗಿದೆ. ಮನೆಗಳಿಗೆ ಅರ್ಧದಷ್ಟು ನೀರು ನಿಂತು ಮನೆಯಲ್ಲಿದ್ದ ದವಸ ಧಾನ್ಯವೆಲ್ಲಾ ನೀರು ಪಾಲಾಗಿದೆ. ಪ್ರವಾಹದ ಸ್ಥಿತಿಯಲ್ಲಿರುವ ಜನರ ಸಂಕಷ್ಟಗಳಿಗೆ ಸ್ಪಂದಿಸುವ ಬಗ್ಗೆ ಮಾಜಿ ಸಿಎಂ ಸಿದ್ದರಾಮಯ್ಯ ರಾಜ್ಯ ಸರ್ಕಾರಕ್ಕೆ ಒತ್ತಾಯಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಬಡವರು, ವಲಸೆ ಕಾರ್ಮಿಕರಿಗೆ ಅನುಕೂಲವಾಗಲಿ ಅಂತ ನಾನು ಜಾರಿಗೆ ತಂದಿದ್ದ ಇಂದಿರಾ ಕ್ಯಾಂಟೀನ್ ಅನ್ನು ಬಿಜೆಪಿ ಸರ್ಕಾರ ಮುಚ್ಚಲು ಹೊರಟಿದೆ. ದುಡ್ಡಿಲ್ಲ, ಕೊರೊನಾ ಇದೆ ಅಂತ ಜನರ ಎದುರು ಅಸಹಾಯಕತೆ ತೋರುವ ಬದಲು ಅಧಿಕಾರ ಬಿಟ್ಟು ತೊಲಗಲಿ. ಹಸಿದವರಿಗೆ ಅನ್ನ ಹಾಕಲು ಆಗದ ಸರ್ಕಾರ ಇದ್ದರೆಷ್ಟು, ಹೋದರೆಷ್ಟು? ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತಂತೆ ಸರಣಿ ಟ್ವಿಟ್ ಮಾಡಿರುವ ಅವರು, ರಾಜ್ಯದ ಹಲವು ಜಿಲ್ಲೆಗಳು ನೆರೆ ಹಾವಳಿಯಿಂದ ನಲುಗಿ ಹೋಗಿವೆ. ಜನರು ಆಸ್ತಿ ಪಾಸ್ತಿ ಕಳೆದುಕೊಂಡು ಜೀವ ಉಳಿದರೆ ಸಾಕು ಎನ್ನುವಂತಹ ಸ್ಥಿತಿಗೆ ತಲುಪಿದ್ದಾರೆ. ನೊಂದ ಜನರಿಗೆ ಸಾಂತ್ವನ ಹೇಳಬೇಕಿದ್ದ ಗೋವಿಂದ ಕಾರಜೋಳ ಹಾಗೂ ಇತರ ಜಿಲ್ಲೆಗಳ ಉಸ್ತುವಾರಿ ಸಚಿವರು ಎಲ್ಲಿದ್ದಾರೆ? ಇವರಿಗೆ ಜನರ ಪ್ರಾಣಕ್ಕಿಂತ ಚುನಾವಣೆ ಮುಖ್ಯವೇ? ಎಂದು ಪ್ರಶ್ನಿಸಿದ್ದಾರೆ.

ಮತ್ತೊಂದು ಟ್ವೀಟ್ ನಲ್ಲಿ ಚುನಾವಣೆ ಬಗ್ಗೆ ಮಾತನಾಡಿರುವ ಅವರು, ಶಿರಾದಲ್ಲಿ ಬಿಜೆಪಿಯವರು ಸಾವಿರಾರು ಜನರನ್ನು ಸೇರಿಸಿ ಮೆರವಣಿಗೆ ಮಾಡಿರುವುದು ಕೋವಿಡ್ ನಿಯಮಗಳಿಗೆ ವಿರುದ್ಧವಲ್ಲವೇ? ತಾವು ಜಾರಿಗೆ ತಂದಿರುವ ನಿಯಮಗಳನ್ನು ತಾವೇ ಧಿಕ್ಕರಿಸಿದ್ದಾರೆ, ಇನ್ನು ಬೇರೆಯವರಿಗೆ ಉಪದೇಶ ನೀಡಲು ಯಾವ ನೈತಿಕತೆ ಇದೆ? ಆರೋಗ್ಯ ಸಚಿವರು ಆಗಾಗ ತಮ್ಮ ಪಕ್ಷದ ಸಭೆ ಸಮಾರಂಭಗಳನ್ನೂ ಗಮನಿಸಲಿ ಎಂದು ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಗೆ ತಿರುಗೇಟು ನೀಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments