Saturday, July 24, 2021
No menu items!
Home Karnataka ಬಿಜೆಪಿ ಸರ್ಕಾರ ದುಪ್ಪಟ್ಟು ಸಾಲ ಮಾಡಿ ಹೋಳಿಗೆಯನ್ನು ಅವರೇ ತಿಂದಿದ್ದಾರೆ : ಸಿದ್ದರಾಮಯ್ಯ..!

ಬಿಜೆಪಿ ಸರ್ಕಾರ ದುಪ್ಪಟ್ಟು ಸಾಲ ಮಾಡಿ ಹೋಳಿಗೆಯನ್ನು ಅವರೇ ತಿಂದಿದ್ದಾರೆ : ಸಿದ್ದರಾಮಯ್ಯ..!

ತುಮಕೂರು : ಶಿರಾ ಉಪಚುನಾವಣೆಯ ಪ್ರಚಾರದಲ್ಲಿ ಇಂದು ಸಿದ್ದರಾಮಯ್ಯ ಅವರು ಭಾಗಿಯಾಗಿದ್ದು, ಬಿಜೆಪಿ ಸರ್ಕಾರದ ಮೇಲೆ ಹರಿಹಾಯ್ದಿದ್ದಾರೆ. ಪ್ರಧಾನಿ ನರೇಂದ್ರ ಮೋದಿಯವರು ಬಿಹಾರದ ಚುನಾವಣಾ ಭಾಷಣದಲ್ಲಿ ವಂಶಪಾರಂಪರ್ಯ ಭ್ರಷ್ಟಾಚಾರ ಗೆದ್ದಲು ಇದ್ದಂತೆ ಅಂದಿದ್ದಾರೆ. ಅವರ ಹೇಳಿಕೆ ಗಮನಿಸಿದರೆ ಬಹುಶಃ ಯಡಿಯೂರಪ್ಪನವರ ಆಡಳಿತವನ್ನು ನೋಡಿಯೇ ಈ ರೀತಿ ಹೇಳಿದ್ದಾರೆ ಅಂತ ನನಗನ್ನಿಸುತ್ತಿದೆ ಎಂದು ಟಾಂಗ್ ಕೊಟ್ಟಿದ್ದಾರೆ.

ಇನ್ನು ಸರ್ಕಾರ ಮಾಡಿದ ಸಾಲದ ಬಗ್ಗೆ ಮಾತನಾಡಿರುವ ಅವರು, ನಾನು ಮುಖ್ಯಮಂತ್ರಿಯಾಗಿದ್ದಾಗ ಸರ್ಕಾರ ಸಾಲ ಮಾಡಿ ಜನರಿಗೆ ಹೋಳಿಗೆ ತಿನ್ನಿಸುತ್ತಿದೆ ಎಂದು ಬಿಜೆಪಿಯವರು ವ್ಯಂಗ್ಯವಾಡುತ್ತಿದ್ದರು. ಈಗಿನ ಬಿಜೆಪಿ ಸರ್ಕಾರ ನಮಗಿಂತ ದುಪ್ಪಟ್ಟು ಸಾಲ ಮಾಡಿದೆ. ಹೋಗಲಿ ಅದನ್ನು ಜನರಿಗಾದ್ರೂ ಉಪಯೋಗಿಸ್ತಿದ್ದಾರಾ, ಅದೂ ಇಲ್ಲ. ಸಾಲ ಮಾಡಿ ತಾವೇ ಹೋಳಿಗೆ ತಿನ್ನುತ್ತಿದ್ದಾರೆ ಎಂದು ಸಿದ್ದರಾಮಯ್ಯ ಆರೋಪಿಸಿದ್ದಾರೆ.

ಭ್ರಷ್ಟಾಚಾರ ರಹಿತ ಹಾಗೂ ಪಾರದಾರ್ಶಕ ಆಡಳಿತವನ್ನು ರಾಜ್ಯದ ಜನ ನಿರೀಕ್ಷಿಸಿದ್ದರು, ಆದರೆ ಯಡಿಯೂರಪ್ಪನವರ ಸರ್ಕಾರ ಭ್ರಷ್ಟಾಚಾರವನ್ನೇ ಪಾರದರ್ಶಕವಾಗಿ ಮಾಡುತ್ತಿದೆ. ಯಡಿಯೂರಪ್ಪ ಕುಟುಂಬ ಜೆಸಿಬಿ ಮೂಲಕ ಹಣ ಗೋರುತ್ತಿದೆ ಎಂದು ಸ್ವತಃ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳಿದ್ದಾರೆ. ಇದಕ್ಕಿಂತ ಇನ್ನೇನು ಬೇಕು ಎಂದು ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದು, ಅದರಲ್ಲಿ ಉತ್ತರ ಕರ್ನಾಟಕದ ಪ್ರವಾಹ ಸಂತ್ರಸ್ತರಿಗೆ ತಕ್ಷಣ ನೆರವು ನೀಡಿ, ಹಾನಿಗೊಳಗಾಗಿರುವ ಎಲ್ಲಾ ಮೂಲಸೌಕರ್ಯಗಳನ್ನು ಮರು ನಿರ್ಮಿಸಬೇಕು ಎಂದು ಆಗ್ರಹಿಸಿ ಪತ್ರ ಬರೆದಿದ್ದಾರೆ.

ಬೀದರ್, ಕಲಬುರ್ಗಿ ಹಾಗೂ ಯಾದಗಿರಿ ಜಿಲ್ಲೆಯ ಪ್ರವಾಹಪೀಡಿತ ಪ್ರದೇಶಗಳಿಗೆ ಇತ್ತೀಚೆಗೆ ಭೇಟಿ ನೀಡಿದ್ದೇನೆ ಅಲ್ಲಿಯ ಪರಿಸ್ಥಿತಿ ಆಧರಿಸಿ ಈ ಪತ್ರ ಬರೆದಿದ್ದೇನೆ. ಸಂತ್ರಸ್ತ ಪ್ರದೇಶಗಳ ಜನಪ್ರತಿನಿಧಿಗಳು, ಮುಖಂಡರು ನನ್ನ ಜೊತೆಯಲ್ಲಿ ಭಾಗವಹಿಸಿದ್ದರು. ನನ್ನ ಅನುಭವದ ಪ್ರಕಾರ ಈ ವರ್ಷದ ಹಾನಿ ಹಿಂದೆಂದಿಗಿಂತಲೂ ದುಪ್ಪಟ್ಟು ಪ್ರಮಾಣದಲ್ಲಿದೆ ಎಂದು ಬರೆದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments