Wednesday, June 16, 2021
No menu items!
Home Karavali ಕಟೀಲು ಒಬ್ಬ ಕಾಡು ಮನುಷ್ಯನಿದ್ದಂತೆ : ಸಿದ್ದರಾಮಯ್ಯ..!

ಕಟೀಲು ಒಬ್ಬ ಕಾಡು ಮನುಷ್ಯನಿದ್ದಂತೆ : ಸಿದ್ದರಾಮಯ್ಯ..!

ಬೆಂಗಳೂರು : ನಿನ್ನೆ ಬಿಜೆಪಿ ಕಾರ್ಯಕ್ರಮವೊಂದರಲ್ಲಿ ಸಿದ್ದರಾಮಯ್ಯ ಹಾಗೂ ಡಿಕೆಶಿ ವಿರುದ್ಧ ನಳೀನ್ ಕುಮಾರ್ ಕಟೀಲು ವ್ಯಂಗ್ಯವಾಡಿದ್ದರು. ಇದಕ್ಕೆ ಇಂದು ಸಿದ್ದರಾಮಯ್ಯ ಸರಣಿ ಟ್ವಿಟ್ಟರ್ ನಲ್ಲಿ ತಿರುಗೇಟು ನೀಡಿದ್ದಾರೆ.

“ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ಮಾತೆತ್ತಿದರೆ ಸಂಸ್ಕಾರ, ಸಂಸ್ಕೃತಿ ಎಂದು ಬೋಧನೆ ಮಾಡುವ ಸಂಘ ಪರಿವಾರದಲ್ಲಿ ಯಾರಾದರೂ ಹಿರಿಯರು, ಮಾನವಂತರು ಉಳಿದಿದ್ದರೆ ಮೊದಲು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಸ್ವಲ್ಪ ಬುದ್ದಿ ಹೇಳಿ ನಾಲಿಗೆ ಬಿಗಿಹಿಡಿದು ಮಾತನಾಡಲು ಕಲಿಸಿ. ಇಲ್ಲದೆ ಇದ್ದರೆ ಇವರೊಬ್ಬರೇ ಸಾಕು ಎಲ್ಲರ ಮಾನ ಕಳೆಯಲು” ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನೊಂದು ಟ್ವೀಟ್ ನಲ್ಲಿ “ಕಾಡಿಗೆ ಹುಲಿ ಓಡಿಸುತ್ತೇನೆ, ಬಂಡೆ ಒಡೆಯುತ್ತೇನೆ ಎಂದು ಹೇಳಿಕೊಂಡು ತಿರುಗಾಡುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಬ್ಬ ಕಾಡು ಮನುಷ್ಯ. ನಾಗರಿಕ ಜಗತ್ತಲ್ಲಿ ಇರಲು ನಾಲಾಯಕ್ ಆಗಿರುವ ಈ ವ್ಯಕ್ತಿಯನ್ನು ನಾಡಿನ ಜನರ ಹಿತದೃಷ್ಟಿಯಿಂದ ಬಿಜೆಪಿಯವರು ತಕ್ಷಣ ಕಾಡಿಗೆ ಕೊಂಡುಹೋಗಿ ಬಿಟ್ಟುಬರಲಿ ಎಂದಿದ್ದಾರೆ.

ಅಲ್ಲದೆ, “ಮಂಗಳೂರಿನಲ್ಲಿ ಎಲ್ಲಿಯೋ ಬೀದಿ ಅಲೆಯುತ್ತಿದ್ದ ಈ ನಳಿನ್ ಕುಮಾರ್ ಕಟೀಲ್ ಎಂಬ ಪೋಕರಿಯನ್ನು ಯಾರೋ ತಮ್ಮ ‘ಸಂತೋಷ’ಕ್ಕಾಗಿ ತಂದು ಪಕ್ಷದ ಅಧ್ಯಕ್ಷರನ್ನಾಗಿ ಮಾಡಿದ್ದರು. ಇವರಿಗೆ ಕೊಟ್ಟಿರುವ ಕೆಲಸ ಪಕ್ಷ ಕಟ್ಟುವುದಲ್ಲ, ಬಿ.ಎಸ್.ಯಡಿಯೂರಪ್ಪನವರನ್ನು ಕೆಡವುದು, ಅದನ್ನೇ ಮಾಡುತ್ತಾ ಇದ್ದಾರೆ ಎಂದು ಸರಣಿ ಟ್ವೀಟ್ ಮಾಡಿದ್ದಾರೆ.

ಆರ್ ಆರ್ ನಗರ ಹಾಗೂ ತುಮಕೂರಿನ ಶಿರಾ ಉಪ ಚುನಾವಣೆ ಕಾವು ರಂಗೇರಿದೆ. ಈ ಹಿನ್ನೆಲೆಯಲ್ಲಿ ನಿನ್ನೆ ಆರ್ಆರ್ ನಗರದಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಪರ ಚುನಾವಣಾ ಪ್ರಚಾರ ನಡೆಸಿದ್ದ ನಳಿನ್ ಕುಮಾರ್ ಕಟೀಲ್ ಕಾಂಗ್ರೆಸ್ ನಾಯಕರ ವಿರುದ್ಧ ಟೀಕಾಸ್ತ್ರ ಪ್ರಯೋಗಿಸಿದ್ದರು. ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಉಲ್ಲೇಖಿಸಿ “ಹುಲಿಯಾ ಕಾಡಿಗೆ, ಬಂಡೆ ಛಿದ್ರ” ಎಂದು ಹೇಳಿಕೆ ನೀಡಿದ್ದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments