Tuesday, October 26, 2021
No menu items!
Home Latest ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ; ನಾಳೆ ರಸ್ತೆಗಿಳಿಯಲ್ಲ ಆಟೋ, ಟ್ಯಾಕ್ಸಿ

ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ಮುಷ್ಕರ ; ನಾಳೆ ರಸ್ತೆಗಿಳಿಯಲ್ಲ ಆಟೋ, ಟ್ಯಾಕ್ಸಿ

ಬೆಂಗಳೂರು: ಕೊರೋನಾ ಹಾವಳಿಯಿಂದ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ಅಟೋ , ಟ್ಯಾಕ್ಸಿ ಚಾಲಕರಿಗೆ ಸರ್ಕಾರ ನೆರವು ನೀಡುವ ಬಗ್ಗೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ ಸುಮಾರು 20 ಸಂಘಟನೆಗಳು ಮುಷ್ಕರಕ್ಕೆ ಕರೆ ನೀಡಿವೆ. ಈ ಹಿನ್ನೆಲೆಯಲ್ಲಿ ನಾಳೆ ಓಲಾ, ಉಬರ್ ಸೇರಿದಂತೆ ಆಟೋ, ಟ್ಯಾಕ್ಸಿ ಚಾಲಕರು ನಾಳೆ ರಸ್ತೆಗಿಳಿಯದಿರಲು ನಿರ್ಧರಿಸಿದ್ದಾರೆ.

ಹೊಸ ಆಟೋ ಮಾರಾಟ ತೆರಿಗೆ ಶೇ.17ರಿಂದ ಶೇ.5ಕ್ಕೆ ಇಳಿಕೆ, ಹಳೇ ವಾಹನಗಳಿಗೂ ಎಫ್‌ಸಿ, ಪ್ರಯಾಣ ದರ ಹೆಚ್ಚಳ, ಖಾಸಗಿ ಬ್ಯಾಂಕುಗಳು ಚಾಲಕರಿಂದ ಹೆಚ್ಚು ಬಡ್ಡಿ ವಸೂಲಿ ಮಾಡೋದನ್ನ ನಿಲ್ಲಿಸಬೇಕು ಎಂಬೆಲ್ಲಾ ಬೇಡಿಕೆಗಳಿಗೆ ಆಗ್ರಹಿಸಿ ನಾಳೆ ಮುಷ್ಕರಕ್ಕೆ ಕರೆ ನೀಡಲಾಗಿದೆ.

ಇನ್ನುಳಿದಂತೆ ಚಾಲಕರು ಹಲವು ಬೇಡಿಕೆಗಳನ್ನು ಸರ್ಕಾರದ ಮುಂದಿಡುತ್ತಿದ್ದು ಅದರಲ್ಲಿ ಆಯ್ದ ಕೆಲವು ಬೇಡಿಕೆಗಳು ಇಂತಿವೆ

*ನಕಲಿ ಆಟೋ ಪರ್ಮಿಟ್‍ಗಳನ್ನು ತಡೆಗಟ್ಟಲು, ಹೊಸದಾಗಿ ತಂದಿರುವ ಇ-ಪರ್ಮಿಟ್‍ಗೆ ಆಧಾರ್ ಲಿಂಕ್ ಹಾಗೂ ಮಾಲೀಕನೇ ಖುದ್ದು ಹೆಬ್ಬೆಟ್ಟು ಗುರುತು ನೀಡುವುದನ್ನು ಕಡ್ಡಾಯಗೊಳಿಸಬೇಕು.

* ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಜಾತಿವಾರು ನಿಗಮಗಳಿಂದ ನೇರ ಸಾಲ ಯೋಜನೆ ಅಡಿಯಲ್ಲಿ ಆಟೋ ಚಾಲಕರಿಗೆ 1,00 ಲಕ್ಷ ರೂ ಮತ್ತು ಟ್ಯಾಕ್ಸಿ ಚಾಲಕರುಗಳಿಗೆ 2,00 ಲಕ್ಷ ಸಾಲವನ್ನು ನೀಡಬೇಕು.

* ಅಸಂಘಟಿತ ಚಾಲಕರ ನಿಗಮ ಸ್ಥಪನೆಯಾಗಬೇಕು.

* ಆಟೋ ಮತ್ತು ಟ್ಯಾಕ್ಸಿ ಚಾಲಕರಿಗೆ ಬಿಡಿಎ ಅಥವಾ ಗೃಹ ಮಂಡಳಿಯಿಂದ ಮನೆಗಳನ್ನು ಕಟ್ಟಿಸಿಕೊಡಬೇಕು.

ಅಲ್ಲದೇ ಕೊರೋನಾ ಹಾಗೂ ಇತರ ಕಾಯಿಲೆಯಿಂದ ಸೂಕ್ತ ಚಿಕಿತ್ಸೆ ಸಿಗದೆ ಮರಣಹೊಂದಿದ ಚಾಲಕರ ಕುಟುಂಬಗಳಿಗೆ ಪರಿಹಾರ ನೀಡಬೇಕು ಎಂದು ಆಗ್ರಹಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments