Thursday, August 5, 2021
No menu items!
Home Karnataka 2021 ರ ಆರಂಭದಲ್ಲೇ ಕೊರೊನಾ ಲಸಿಕೆ ಲಭ್ಯ : ಸಚಿವ ಸುಧಾಕರ್

2021 ರ ಆರಂಭದಲ್ಲೇ ಕೊರೊನಾ ಲಸಿಕೆ ಲಭ್ಯ : ಸಚಿವ ಸುಧಾಕರ್

ಬೆಂಗಳೂರು : ಕೊರೊನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಯಾವಾಗ ಇದಕ್ಕೆ ಲಸಿಕೆ ಸಿಗುತ್ತೆ..? ಯಾವಾಗ ವೈರಸ್ ನಿಂದ ಮುಕ್ತಿ ಸಿಗುತ್ತದೆ ಎಂಬ ಪ್ರಶ್ನೆ ಎಲ್ಲರನ್ನು ಕಾಡುತ್ತಿದೆ. ಈ ರೀತಿಯ ಪ್ರಶ್ನೆಗಳಿಗೆ ಸಚಿವ ಸುಧಾಕರ್ ಇಂದು ಸುದ್ದಿಗೋಷ್ಠಿಯಲ್ಲಿ ಉತ್ತರ ನೀಡಿದ್ದಾರೆ.

ರಾಜ್ಯದಲ್ಲಿ ಮುಂದಿನ ವರ್ಷದ ಆರಂಭದಲ್ಲೇ ಕೋವಿಡ್ -19 ಲಸಿಕೆ ಲಭ್ಯವಾಗಲಿದೆ ಅಂತ ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ ಸುಧಾಕರ್ ಹೇಳಿದ್ದಾರೆ. ಆಸ್ಟ್ರಾಜನಿಕಾ ಸಂಸ್ಥೆ ಎಂಡಿ ಗಗನ್ ದೀಪ್ ಸೇರಿದಂತೆ ಅಧಿಕಾರಿಗಳ ಜೊತೆ ಸಭೆ ನಡೆಸಿದ್ದು, ಆಕ್ಸಫರ್ಡ್ ವಿವಿ ಲಸಿಕೆ ಪ್ರಯೋಗ ಮೊದಲ ಹಂತ ಮುಕ್ತಾಯವಾಗಿದ್ದು, 2021 ಆರಂಭದಲ್ಲೇ ರಾಜ್ಯದ ಜನತೆಗೆ ಕೋವಿಡ್ ಲಸಿಕೆ ಸಿಗಲಿದೆ ಎಂದರು.

ಆಕ್ಸಫರ್ಡ್ ವಿವಿ ಅಸ್ಟ್ರಾಜನಿಕಾ ಸಂಸ್ಥೆಯೊಂದಿಗೆ ಒಪ್ಪಂದ ಮಾಡಿಕೊಂಡು ಸಂಶೋಧನೆ ಮಾಡುತ್ತಿದ್ದಾರೆ. ಇಂದು ಅವರ ಜೊತೆಗೆ ನಡೆಸಿದ ಸಮಾಲೋಚನೆ ತೃಪ್ತಿದಾಯಕವಾಗಿದೆ. ಆದಷ್ಟು ಬೇಗ ಈ ಲಸಿಕೆ ಬರುವ ವಿಶ್ವಾಸ ಇದೆ. 2021ರ ಆರಂಭದಲ್ಲಿಯೇ ಈ ರೋಗಕ್ಕೆ ಲಸಿಕೆ ಬರುವ ಸಾಧ್ಯತೆ ಇದೆ ಎಂದರು.

ಭಾರತದಲ್ಲಿ 1600 ಜನರಿಗೆ ಲಸಿಕೆ ನೀಡಿ ಪ್ರಯೋಗ ಮಾಡಲಾಗುತ್ತಿದೆ. ಐದು ವರ್ಷದವರಿಂದ ಹಿಡಿದು ವಯೋವೃದ್ದರವರೆಗೂ ಎಲ್ಲ ವಯೋಮಾನದವರಿಗೆ ಲಸಿಕೆ ನೀಡುವ ಪ್ರಯೋಗ ಮಾಡಲಾಗುತ್ತಿದೆ. ಲಸಿಕೆ ಕೊಟ್ಟ 28 ದಿನದಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಾಗುವ ಸಾಧ್ಯತೆ ಇದೆ. ಎರಡು ಮತ್ತು ಮೂರನೇ ಹಂತದಲ್ಲಿ ಮತ್ತೊಂದು ರೀತಿ ನೀಡಿ ಪ್ರಯೋಗ ಮಾಡಲಾಗುತ್ತಿದೆ ಎಂದರು.

ಯಾವುದೇ ರೋಗಕ್ಕೆ ಲಸಿಕೆ ಕಂಡು ಹಿಡಿಯಲು ಕನಿಷ್ಠ 5-6 ವರ್ಷ ಬೇಕಾಗುತ್ತದೆ. ಆದರೆ, ನಮ್ಮ ದೇಶದಲ್ಲಿಏಳೆಂಟು ತಿಂಗಳಲ್ಲಿ ಲಸಿಕೆ ಕಂಡು ಹಿಡಿಯುವ ಪ್ರಯತ್ನ ಮಾಡಲಾಗುತ್ತಿದೆ. ಹೈದರಾಬಾದ್ ಸಂಸ್ಥೆಯೂ ಪ್ರಯೋಗ ಮಾಡುತ್ತಿದೆ. ಅವರ ಜೊತೆಯೂ ಚರ್ಚೆ ಮಾಡುತ್ತೇವೆ ಎಂದರು.

ಲಸಿಕೆ ವಿಚಾರದಲ್ಲಿ ಮೊದಲ ಹಂತದ ಟ್ರಯಲ್ ಮುಗಿದಿದ್ದು, ಪ್ರಯೋಗ ಮೂರನೇ ಹಂತದಲ್ಲಿ ಇದೆ.ಸಂಶೋಧನೆ ಯಾವಾಗ ಪೂರ್ಣಗೊಳ್ಳುತ್ತದೆ, ಲಸಿಕೆ ಯಾವಾಗ ಬರಬಹುದು, ಲಸಿಕೆ ಸಿಕ್ಕರೆ ಹಂಚಿಕೆ ಹೇಗೆ ಎಂಬುದರ ಬಗ್ಗೆ ಸರ್ಕಾರದ ಮಟ್ಟದಲ್ಲಿ ಮಹತ್ವದ ಚರ್ಚೆ ಆಗಿದೆ ಎಂದು ಸುಧಾಕರ್ ಹೇಳಿದರು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments