Wednesday, June 16, 2021
No menu items!
Home Karnataka ಪ್ರತಾಪ್ ಸಿಂಹರನ್ನು ಪೇಟೆ ರೌಡಿಗೆ ಹೋಲಿಸಿದ ಸುಮಲತಾ..!

ಪ್ರತಾಪ್ ಸಿಂಹರನ್ನು ಪೇಟೆ ರೌಡಿಗೆ ಹೋಲಿಸಿದ ಸುಮಲತಾ..!

ಬೆಂಗಳೂರು: ಮೊನ್ನೆ ಮೊನ್ನೆ ಸುಮಲತಾ ವಿರುದ್ಧ ಮಾತನಾಡಿದ್ದ ಸಂಸದ ಪ್ರತಾಪ್ ಸಿಂಹ ಅವರಿಗೆ ಸುಮಲತಾ ಇಂದು ತಿರುಗೇಟು ನೀಡಿದ್ದಾರೆ. ಪ್ರತಾಪ್ ಸಿಂಹ ಅವರು ಪಕ್ಕದ ಕ್ಷೇತ್ರದವರು. ಎರಡು ಬಾರಿ ಸಂಸದರಾದವರು, ಸ್ವಲ್ಪ ಅರಿತು ಮಾತನಾಡಬೇಕು. ಪೇಟೆ ರೌಡಿಯ ತರಹ ಮಾತನಾಡಬಾರದು ಎಂದಿದ್ದಾರೆ.

ಸಿಎಂ ನಿವಾಸದ ಬಳಿ ಪ್ರತಾಪ್ ಸಿಂಹ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಮೈಸೂರು ಭಾಗದಲ್ಲಿ ಏನೆಲ್ಲಾ ಅಭಿವೃದ್ಧಿ ಆಗಿದೆ ಎಂಬುದು ನನಗೂ ಗೊತ್ತಿದೆ. ಕೊಡಗು ಜಿಲ್ಲೆಯಲ್ಲಿ ರಸ್ತೆಗಳು ಕೊಚ್ಚಿ ಹೋಗಿರುವ ಬಗ್ಗೆ ನಮಗೂ ದೂರು ಬಂದಿದೆ‌. ನಮ್ಮ ಕ್ಷೇತ್ರದ ಬಗ್ಗೆ ಅವರು ಮಾತನಾಡವುದು ಸರಿಯಲ್ಲ. ಒಬ್ಬ ಸಂಸದರು ಇನ್ನೊಬ್ಬ ಸಂಸದರ ಬಗ್ಗೆ ಮಾತನಾಡಲು ಹಕ್ಕಿಲ್ಲ. ಅವರಿಗೆ ಈಗಾಗಲೇ ಸಾಮಾಜಿಕ ಜಾಲತಾಣದಲ್ಲೇ ನಮ್ಮ ಜಿಲ್ಲೆಯ ಜನ ಉತ್ತರ ಕೊಟ್ಟಿದ್ದಾರೆ ಎಂದಿದ್ದಾರೆ.

ಇನ್ನು ಇದೇ ವೇಳೆ ಅಂಬರೀಶ್ ಅವರನ್ನು ನೆನೆದಿರುವ ಸುಮಲತಾ, ಅಂಬರೀಶ್ ಇದ್ದಾಗ ಯಾರಿಗೂ ಧೈರ್ಯ ಇರಲಿಲ್ಲ. ಇಂಥಹ ಮಾತುಗಳನ್ನು ಯಾರೂ ಆಡುತ್ತಿರಲಿಲ್ಲ. ಇಂದು ಅವರಿಲ್ಲ ಅಂತ ಎಲ್ಲಾ ಈ ರೀತಿ ಮಾತುಗಳನ್ನ ಆಡುತ್ತಿದ್ದಾರೆ ಎಂದಿದ್ದಾರೆ.

ಸಂಸದ ಪ್ರತಾಪ್ ಸಿಂಹ ಫೋನ್ ನಲ್ಲಿ‌ಮಾತನಾಡುವಾಗ ಸಂಸದೆ ಸುಮಲತಾ ವಿರುದ್ಧ ಮಾತನಾಡಿದ್ದರು. ಆ ಯಮ್ಮ ಏನು ಕೆಲಸ ಮಾಡಲ್ಲ. ಮಂಡ್ಯ ಭಾಗದಲ್ಲಿ ಏನೇ ಕೆಲಸ ಇದ್ದರು ನನಗೆ ಹೇಳಿ ಎಂದಿದ್ದರು. ಆ ವಿಡಿಯೋ ಎಲ್ಲೆಡೆ ವೈರಲ್ ಆಗಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments