ಹೈದರಾಬಾದ್: ರಕ್ತದೊತ್ತಡ ಸಮಸ್ಯೆ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದ ನಟ ಸೂಪರ್ ಸ್ಟಾರ್ ರಜನೀಕಾಂತ್ ಇದೀಗ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.
ಈ ಕುರಿತಂತೆ ಹೈದರಾಬಾದ್ ನ ಅಪೋಲೋ ಆಸ್ಪತ್ರೆ ಆಡಳಿತ ಮಂಡಳಿ ಮಾಹಿತಿ ನೀಡಿದ್ದು, ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಆಸ್ಪತ್ರೆಗೆ ದಾಖಲಾಗಿದ್ದಂತ ಸೂಪರ್ ಸ್ಟಾರ್ ರಜನಿಕಾಂತ್ ಆರೋಗ್ಯವಾಗಿದ್ದು, ಎಲ್ಲಾ ಪರೀಕ್ಷೆಗಳ ಬಳಿಕ ಅವರನ್ನು ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ ಎಂಬುದಾಗಿ ತಿಳಿಸಿದೆ.
ತಜ್ಞ ವೈದ್ಯರ ತಂಡದಿಂದ ರಜನೀಕಾಂತ್ ಅವರ ಆರೋಗ್ಯ ಸ್ಥಿತಿ ನೋಡಿಕೊಳ್ಳಲಾಗಿತ್ತು. ಸದ್ಯ ರಜನೀಕಾಂತ್ ಅವರ ಆರೋಗ್ಯ ಸ್ಥಿರವಾಗಿದ್ದು, ಅಭಿಮಾನಿಗಳು ಯಾವುದೇ ರೀತಿಯ ಆತಂಕ ಪಡುವ ಅಗತ್ಯ ಇಲ್ಲ. ಸದ್ಯಕ್ಕೆ ನಾಯಕ ನಟನಿಗೆ ವಿಶ್ರಾಂತಿಯ ಅಗತ್ಯವಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ರಕ್ತದೊತ್ತಡ ಹೊರತುಪಡಿಸಿ ರಜನಿಕಾಂತ್ ಅವರಿಗೆ ಬೇರೆ ಯಾವ ಸಮಸ್ಯೆಯೂ ಇಲ್ಲದ ಕಾರಣ ಇಂದು ರಜನೀಕಾಂತ್ ಅವರನ್ನು ಡಿಸ್ಚಾರ್ಜ್ ಮಾಡಿದ್ದೇವೆ ಎಂದು ಆಸ್ಪತ್ರೆ ಮಂಡಳಿ ತಿಳಿಸಿದೆ.