Thursday, September 23, 2021
No menu items!
Home Karnataka ಮಗನನ್ನು ಸಿಂಗಾಪುರಕ್ಕೆ ಕರೆದೊಯ್ಯಲು ಅನುಮತಿ ಕೊಟ್ಟ ಸುಪ್ರೀಂಕೋರ್ಟ್

ಮಗನನ್ನು ಸಿಂಗಾಪುರಕ್ಕೆ ಕರೆದೊಯ್ಯಲು ಅನುಮತಿ ಕೊಟ್ಟ ಸುಪ್ರೀಂಕೋರ್ಟ್

ಬೆಂಗಳೂರು: ನಗರದಲ್ಲಿರುವ 7 ವರ್ಷದ ಮಗನನ್ನು ಸಿಂಗಾಪುರಕ್ಕೆ ಕರೆದೊಯ್ಯಲು, ದಾಂಪತ್ಯ ಕಲಹದಿಂದ ಪ್ರತ್ಯೇಕ ವಾಸಿಸುತ್ತಿರುವ ಮಹಿಳೆಗೆ ಸುಪ್ರೀಂ ಕೋರ್ಟ್ ಅನುಮತಿ ನೀಡಿದೆ.


ಮಗನ ತಾಯಿ ಸಿಂಗಾಪುರದಲ್ಲಿ ಉದ್ಯೋಗದಲ್ಲಿದ್ದು, ಮಗ ಬೆಂಗಳೂರಿನ ಅಜ್ಜಿಮನೆಯಲ್ಲಿ ವಾಸವಾಗಿದ್ದಾನೆ. ಮಗನನ್ನು ತನ್ನೊಂದಿಗೆ ಕರೆದೊಯ್ಯಬೇಕೆಂಬ ತಾಯಿಯ ಹಂಬಲಕ್ಕೆ, ಐರ್ಲೆಂಡ್ನಲ್ಲಿ ಪ್ರತ್ಯೇಕ ವಾಸವಿರುವ ಪತಿ ಆಕ್ಷೇಪ ತೆಗೆದಿದ್ದರು. ಈ ವಿವಾದ ಸುಪ್ರೀಂನ ಮೆಟ್ಟಿಲೇರಿತ್ತು. ವೀಡಿಯೋ ಕಾನ್ಫರೆನ್ಸ್ ನಲ್ಲಿ ನ್ಯಾಯಮೂರ್ತಿಗಳಾದ ಡಿ.ವೈ.ಚಂದ್ರಚೂಡ್, ಮಲ್ಹೋತ್ರಾ, ಇಂದಿರಾ ಬ್ಯಾನರ್ಜಿ ಒಳಗೊಂಡ ಪೀಠ ಈ ಆದೇಶ ನೀಡಿದೆ.

ನ್ಯಾಯಪೀಠ ವಿಡಿಯೋ ಕಾನ್ಫರೆನ್ಸ್ನಲ್ಲಿ ಮಗನ ಅಂತರಾಳಕ್ಕೆ ಕಿವಿಗೊಟ್ಟಿದೆ. ತಾನು ಅಪ್ಪನನ್ನು ಇಷ್ಟಪಡುತ್ತೇನಾದರೂ, ಅಮ್ಮನೊಂದಿಗೆ ಇರಲು ಬಯಸುತ್ತೇನೆ ಎಂದು ಬಾಲಕ ಅನಿಸಿಕೆ ವ್ಯಕ್ತಪಡಿಸಿದ್ದ. ಈ ಹಿನ್ನೆಲೆಯಲ್ಲಿ ನ್ಯಾಯಪೀಠ 142ನೇ ಅನುಚ್ಛೇದದಡಿ ಆದೇಶ ನೀಡಿದೆ.
ಇನ್ನು ತಂದೆಗೆ ನಿಯಮಿತ ಭೇಟಿಗೂ ಕೋರ್ಟ್ ಸಮ್ಮತಿಸಿದೆ. ರಜಾ ದಿನಗಳಲ್ಿ  ಭೇಟಿಯಾಗಲು, ಶನಿವಾರ- ಭಾನುವಾರ ವಿಡಿಯೊ ಕಾನ್ಫರೆನ್ಸ್ ಮೂಲಕ ಮಗನೊಂದಿಗೆ 10 ನಿಮಿಷ ಮಾತಾಡಲು ತಂದೆಗೆ ಅವಕಾಶ ನೀಡಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments