ಪಾಟ್ನಾ: ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಅವರ ನಿಧನದ ಹಿನ್ನೆಲೆಯಲ್ಲಿ, ಬಿಹಾರದ ಹಿರಿಯ ಬಿಜೆಪಿ ಮುಖಂಡ ಸುಶೀಲ್ ಕುಮಾರ್ ಮೋದಿ ಅವರನ್ನು ರಾಜ್ಯಸಭೆಗೆ ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಲೋಕ ಜನಶಕ್ತಿ ಪಕ್ಷದ ಸಂಸ್ಥಾಪಕ, ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಮಾಜಿ ಡಿಸಿಎಂ ಶ್ಯಾಮ್ ನಂದನ್ ಪ್ರಸಾದ್ ಮತ್ತು ಸುಶೀಲ್ ಕುಮಾರ್ ಮೋದಿ ಅವರು ನಾಮಪತ್ರ ಸಲ್ಲಿಸಿದ್ದರು.
ಆದರೆ 243 ಮಂದಿ ವಿಧಾನಸಭೆಯ ಸದಸ್ಯರ ಪೈಕಿ ಶ್ಯಾಮ್ ನಂದನ್ ಪ್ರಸಾದ್ ಅವರಿಗೆ 10ಕ್ಕಿಂತಲೂ ಕಡಿಮೆ ಬೆಂಬಲ ಸಿಕ್ಕಿದ್ದ ಹಿನ್ನೆಲೆಯಲ್ಲಿ ಅದನ್ನು ತಿರಸ್ಕರಿಸಲಾಗಿತ್ತು.
ಇಂದು ನಾಮಪತ್ರ ಹಿಂಪಡೆಯಲು ಕೊನೆ ದಿನವಾಗಿದ್ದರಿಂದ ಮತ್ತು ಸುಶೀಲ್ ಕುಮಾರ್ ಅವರ ನಾಮಪತ್ರವೊಂದೇ ಇದ್ದುದರಿಂದ ಅವರನ್ನು ಅವಿರೋಧವಾಗಿ ಆಯ್ಕೆ ಮಾಡಲಾಗಿದೆ.
ಸುಶೀಲ್ ಮೋದಿ ಅವರಿಗೆ ಮುಖ್ಯಮಂತ್ರಿ ನಿತೀಶ್ ಕುಮಾರ್ ಸೇರಿದಂತೆ ಹಲವು ಗಣ್ಯರ ಸಮ್ಮುಖದಲ್ಲಿ ಪ್ರಮಾಣ ಪತ್ರ ವನ್ನು ನೀಡಲಾಯಿತು. ಟಾರ್ ಕಿಶೋರ್ ಪ್ರಸಾದ್ ಮತ್ತು ರೇಣು ದೇವಿ ಮತ್ತು ರಾಜ್ಯ ಬಿಜೆಪಿ ಅಧ್ಯಕ್ಷ ಸಂಜಯ್ ಜೈಸ್ವಾಲ್ ಹಾಜರಿದ್ದರು.