Friday, May 14, 2021
No menu items!
Home Karavali ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ: ಇಂಗುಗುಂಡಿ ನಿರ್ಮಾಣವೇ ದುರಂತಕ್ಕೆ ಕಾರಣ

ತಲಕಾವೇರಿ ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣ: ಇಂಗುಗುಂಡಿ ನಿರ್ಮಾಣವೇ ದುರಂತಕ್ಕೆ ಕಾರಣ

ಮಡಿಕೇರಿ: ಕಳೆದ ಆಗಸ್ಟ್ 5 ರಂದು ಮಧ್ಯರಾತ್ರಿ ಕೊಡಗು ಜಿಲ್ಲೆಯ ತಲಕಾವೇರಿಯ ಬ್ರಹ್ಮಗಿರಿ ಬೆಟ್ಟ ಕುಸಿದು ಬೆಟ್ಟದ ತಪ್ಪಲಿನಲ್ಲಿದ್ದ ಅರ್ಚಕರ ಕುಟುಂಬ ಜೀವಂತ ಸಮಾಧಿಯಾಗಿತ್ತು. ಬ್ರಹ್ಮಗಿರಿ ಬೆಟ್ಟ ಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರಕ್ಕೆ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ಇದೀಗ ವರದಿ ಸಲ್ಲಿಸಿದ್ದು ಇಂಗುಗುಂಡಿ ನಿರ್ಮಾಣವೇ ದುರಂತಕ್ಕೆ ಕಾರಣ ಎಂದು ಹೇಳಲಾಗಿದೆ.

ವರದಿಯ ಪ್ರಕಾರ, ಬೆಟ್ಟದಲ್ಲಿ ಇಂಗುಗುಂಡಿ ನಿರ್ಮಿಸಿದ್ದರಿಂದ ಮಣ್ಣು ಕುಸಿತವಾಗಿದೆ. ಹೆಚ್ಚು ಮಳೆ ಬೀಳುವ ಪ್ರದೇಶದಲ್ಲಿ ಇಂಗುಗುಂಡಿ ನಿರ್ಮಾಣ ಮಾಡಿದ್ದು ಅಂತರ್ಜಲ ಹೆಚ್ಚಾಗಿ ಅತಿಯಾದ ಮಳೆಯಿಂದ ದುರಂತ ಸಂಭವಿಸಿದೆ. ರಸ್ತೆ ಕಾಮಗಾರಿಯಿಂದ ಬೆಟ್ಟದ ಮೇಲೆ ಒತ್ತಡ ಹೆಚ್ಚಾಗಿದೆ ಎಂದು ಹೇಳಲಾಗಿದೆ.

ಆಗಸ್ಟ್ 5ರಂದು ಈ ದುರಂತ ಸಂಭವಿಸಿ, ತೀರ್ಥಕ್ಷೇತ್ರ ಕಾವೇರಿ ಉಗಮಸ್ಥಾನ ತಲಕಾವೇರಿಯ ಪ್ರಧಾನ ಅರ್ಚಕರ ಕುಟುಂಬದ 5ಮಂದಿ ಜೀವಂತ ಸಮಾಧಿಯಾಗಿದ್ದರು.ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಘಟನೆಗೆ ಕಾರಣ ಕುರಿತಂತೆ ನಿಖರ ಮಾಹಿತಿ ಪಡೆಯಲು ನುರಿತ ವಿಜ್ಞಾನಿಗಳ ತಂಡ ರಚಿಸಿ ವರದಿ ಕೇಳಿತ್ತು. ಈ ಹಿನ್ನೆಲೆಯಲ್ಲಿ

ಆಗಸ್ಟ್ 14 ಮತ್ತು 15 ರಂದು ವಿಜ್ಞಾನಿಗಳ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿತ್ತು

ಇದೀಗ ವರದಿ ನೀಡಿರುವ ಜಿಯಾಲಜಿಕಲ್ ಸರ್ವೆ ಆಫ್ ಇಂಡಿಯಾ ಅಧಿಕಾರಿಗಳು ಮಾನವನ ಹಸ್ತಕ್ಷೇಪ ಕಾರಣವನ್ನು ನೀಡಿದ್ದು, ಬಳಿಕ 16 ಪುಟಗಳ ವರದಿಯನ್ನು ಅಧಿಕಾರಿಗಳ ತಂಡ ಸರ್ಕಾರಕ್ಕೆ ಸಲ್ಲಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments