Friday, May 14, 2021
No menu items!
Home Karnataka ನವೆಂಬರ್ 5 ರಿಂದ ಶಿಕ್ಷಕರ ವರ್ಗಾವಣೆ

ನವೆಂಬರ್ 5 ರಿಂದ ಶಿಕ್ಷಕರ ವರ್ಗಾವಣೆ

ಶಿಕ್ಷಣ ಇಲಾಖೆಯ ಶಿಕ್ಷಕರು ಮತ್ತು ಉಪನ್ಯಾಸಕರ ವರ್ಗಾವಣೆ ಪ್ರಕ್ರಿಯೆಯನ್ನು ಕೂಡಲೇ ಪ್ರಾರಂಭಿಸಬೇಕೆಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಇಂದು ಆದೇಶಿಸಿದ್ದಾರೆ. ಒಂದು ವಾರದ ಒಳಗಾಗಿ ಶಿಕ್ಷಣ ಇಲಾಖೆಯ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿ ವರ್ಗಾವಣೆ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಿಎಂ ಸೂಚಿಸಿದ್ದಾರೆ.

ರಾಜ್ಯ ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ಶಿಕ್ಷಕರು, ಉಪನ್ಯಾಸಕರಿಗೆ ವರ್ಗಾವಣೆ ಸೌಲಭ್ಯವಿಲ್ಲದೆ ಆತಂಕಕ್ಕೆ ಒಳಗಾಗಿದ್ದಾರೆ. ಅವರ ಆತಂಕವನ್ನು ದೂರಮಾಡಲು ಕೂಡಲೇ ಕ್ರಮಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಗೆ ಸಿಎಂ ಸೂಚನೆ ನೀಡಿದ್ದಾರೆ.

ವರ್ಗಾವಣೆ ಮಾರ್ಗಸೂಚಿ ಹೊರಡಿಸಿ 5 ತಿಂಗಳು ಕಳೆದಿದ್ದರೂ, ವರ್ಗಾವಣೆ ವೇಳಾಪಟ್ಟಿ ಹೊರಡಿಸಿಲ್ಲ. ಬೇರೆ ಬೇರೆ ಇಲಾಖೆಗಳಲ್ಲಿ ವರ್ಗಾವಣೆ ಪ್ರಕ್ರಿಯೆಗಳು ಕಾಲಕಾಲಕ್ಕೆ ನಡೆಯುತ್ತಿವೆ. ಆದರೆ, ಶಿಕ್ಷಣ ಇಲಾಖೆಯಲ್ಲಿ ವರ್ಗಾವಣೆ ಪ್ರಕ್ರಿಯೆ ಆಗದಿರುವ ಬಗ್ಗೆ ಅನೇಕ ಮನವಿಗಳು ಬಂದಿವೆ. ಈ ಹಿನ್ನೆಲೆಯಲ್ಲಿ ಕೂಡಲೇ ವರ್ಗಾವಣೆ ಪ್ರಕ್ರಿಯೆಗೆ ಮುಂದಾಗಬೇಕು ಎಂದು ಸಿಎಂ ಹೇಳಿದ್ದಾರೆ.

ಈ ಬೆನ್ನಲ್ಲೇ ಟ್ವೀಟ್ ಮಾಡಿರುವ ಶಿಕ್ಷಣ ಸಚಿವ ಸುರೇಶ್ ಕುಮಾರ್, ನವೆಂಬರ್ 5 ರಿಂದ ಶಿಕ್ಷಕರ ವರ್ಗಾವಣಾ ಪ್ರಕ್ರಿಯೆ ಪ್ರಾರಂಭವಾಗಲಿದೆ ಎಂದಿದ್ದಾರೆ. ಈಗಾಗಲೇ ಭರವಸೆ ನೀಡಿರುವಂತೆ ಕಳೆದ ಸಾಲಿನಲ್ಲಿ ಕಡ್ಡಾಯ ಹಾಗೂ ಹೆಚ್ಚುವರಿ ವರ್ಗಾವಣಾ ಶಿಕ್ಷೆಗೆ ಒಳಗಾದ ಶಿಕ್ಷಕರಿಗೆ ಮೊದಲು ಆದ್ಯತೆ ಸಿಗಲಿದೆ ಎಂದು ತಿಳಿಸಿದ್ದಾರೆ.

ಈ ನಿಟ್ಟಿನಲ್ಲಿ ಕೂಡಲೇ ಅಧಿಸೂಚನೆ ಹಾಗೂ ವೇಳಾಪಟ್ಟಿಯನ್ನು ಹೊರಡಿಸಲು ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತರಿಗೆ ಸೂಚಿಸಿದ್ದು, ನಾಳೆ ವೇಳಾಪಟ್ಟಿ ಪ್ರಕಟಗೊಳ್ಳಲಿದೆಯೆಂದೂ ಅವರು ಸುರೇಶ್ ಕುಮಾರ್ ಮಾಹಿತಿ ನೀಡಿದ್ದಾರೆ..

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments