Saturday, May 15, 2021
No menu items!
Home Latest ಹೇಡಿಗಳು ಯಾರು..? ರೈತರೋ..? ರಾತ್ರೋ ರಾತ್ರಿ ಮುಂಬೈಗೆವಹಾರಿದ ನೀವೋ.?; ರೈತರನ್ನು ಹೇಡಿಗಳೆಂದ ಬಿ ಸಿ...

ಹೇಡಿಗಳು ಯಾರು..? ರೈತರೋ..? ರಾತ್ರೋ ರಾತ್ರಿ ಮುಂಬೈಗೆವಹಾರಿದ ನೀವೋ.?; ರೈತರನ್ನು ಹೇಡಿಗಳೆಂದ ಬಿ ಸಿ ಪಾಟೀಲ್ ಗೆ ಕಾಂಗ್ರೆಸ್ ಪ್ರಶ್ನೆ

ಬೆಂಗಳೂರು: ಕೃಷಿ ಸಚಿವರು ಮಡಿಕೇರಿಯ ಪೊನ್ನಂಪೇಟೆಯಲ್ಲಿ ಏರ್ಪಡಿಸಿದ್ದ ಕಾರ್ಯಕ್ರಮವೊಂದಲ್ಲಿ ಆತ್ಮಹತ್ಯೆ ಮಾಡಿಕೊಳ್ಳುವ ರೈತರು ಹೇಡಿಗಳು ಎಂದು ಹೇಳಿದ್ದರು. ಈ ಹೇಳಿಕೆಗೆ ರೈತರು ಹಾಗು ಸಾರ್ವಜನಿಕರಿಂದ ವ್ಯಾಪಕ ಆಕ್ರೋಶ ವ್ಯಕ್ತವಾಗಿದೆ.

ಈ ಬಗ್ಗೆ ಟ್ವೀಟ್ ಮಾಡಿರುವ ಕಾಂಗ್ರೆಸ್, ಕೃಷಿ ಸಚಿವ ಬಿ ಸಿ ಪಾಟೀಲ್ ಅವರಿಗೆ ಒಂದಷ್ಟು ಪ್ರಶ್ನೆಗಳನ್ನು ಕೇಳಿದೆ. ಅರಣಿ ಟ್ವೀಟ್ ಮೂಲಕ ತರಾಟೆಗೆ ತೆಗೆದುಕೊಂಡಿದೆ.

ನಿಜವಾದ ಹೇಡಿಗಳು ಯಾರು , ಕೇಂದ್ರದಿಂದ ರಾಜ್ಯಕ್ಕೆ ಬರಬೇಕಾದ ಜಿಎಸ್ ಟಿ ಪಾಲು ಕೇಳದವರೋ? ನೆರೆ ಬಂದಾಗ ಸಂತ್ರಸ್ತರ ನೆರವಿಗೆ ನಿಲ್ಲದ ಬಿಜೆಪಿ ನಾಯಕರೋ? ಪರಿಹಾರ ಕೇಳಿದ್ದಕ್ಕೆ ರೈತರ ಮೇಲೆ ಸುಳ್ಳು ಪ್ರಕರಣ ದಾಖಲಿಸಿರುವವರೋ? ರಾಜ್ಯದ ಸಮಸ್ಯೆ ಬಗ್ಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹಾಕದ ಬಿಜೆಪಿ ಸಂಸದರೋ ಎಂದು ಕಾಂಗ್ರೆಸ್ ಪ್ರಶ್ನಿಸಿದೆ.

ಕೃಷಿ ಸಚಿವರಾಗಿ ರೈತರ ಸಂಕಷ್ಟಕ್ಕೆ ಸ್ಪಂದಿಸದ ಬಿ ಸಿ ಪಾಟೀಲ್ ಅವರೇ ರೈತರನ್ನು ಹೇಡಿ ಎಂದು ಕರೆಯುವ ನೈತಿಕತೆ ನಿಮಗೇನಿದೆ? ರೈತರ ಜೀವನ ಹಸನಾಗಿಸುವ ಒಂದೇ ಒಂದು ಯೋಜನೆಯನ್ನೂ ರೂಪಿಸದೆ ಇಂತಹ ಹೇಳಿಕೆ ನೀಡಿದ್ದಲ್ಲದೆ, ಅದನ್ನು ಸಮರ್ಥಿಸಿ ಅಹಂಕಾರವನ್ನು ತೋರುತ್ತಿದ್ದೀರಿ. ಕೃಷಿ ಸಚಿವ ಸ್ಥಾನಕ್ಕೆ ನೀವು ಅನರ್ಹರು. ಕೂಡಲೇ ರಾಜೀನಾಮೆ ಕೊಡಿ ಎಂದಿದ್ದಾರೆ.

ಬಿ ಸಿ ಪಾಟೀಲ್ ಅವರೆ, ನೆರೆಯಿಂದ ಬೆಳೆ ನೀರುಪಾಲಾದಾಗ, ಲಾಕ್ ಡೌನ್ ನಿಂದ ಜಮೀನಿನಲ್ಲೇ ಕೊಳೆತಾಗ, ಬೆಲೆ ಇಲ್ಲದಾದಾಗ, ಸಾಲಗಾರರು ಮನೆ ಬಾಗಿಲಿಗೆ ಬಂದಾಗ ನೀವೆಲ್ಲಿದ್ದಿರಿ? ರೈತರ ಮೇಲೆ ಗುಂಡು ಹಾರಿಸಿ, ಲಾಠಿ ಚಾರ್ಜ್ ಮಾಡಿ, ಕರಾಳ ಕಾಯ್ದೆಗಳ ಮೂಲಕ ಅವರು ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಸೃಷ್ಟಿಸಿರುವ ಬಿಜೆಪಿಗರು ದೊಡ್ಡ ಶೂರರೇ? ಎಂದು ಮತ್ತೊಂದು ಟ್ವೀಟ್ ನಲ್ಲಿ ಪ್ರಶ್ನಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments