ನವದೆಹಲಿ: ಕೋವಿಡ್ 19 ಕುರಿತಂತೆ ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ಬಿಡುಗಡೆ ಮಾಡಿದ್ದು ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ 46, 232 ಮಂದಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರೊಂದಿಗೆ ದೇಶದಲ್ಲಿ ಒಟ್ಟಾರೆ ಕೊರೋನಾ ಸೋಂಕಿತರ ಸಂಖ್ಯೆ 90,50,598 ಕ್ಕೆ ಏರಿಕೆಯಾಗಿದೆ.
ಕಳೆದ ಕೆಲ ದಿನಗಳಿಗೆ ಹೋಲಿಸಿದರೆ ಕಳೆದ 24 ಗಂಟೆಗಳಲ್ಲಿ ಕೊರೋನಾ ಸೋಂಕಿತರ ಸಂಖ್ಯೆಯಲ್ಲಿ ಕೊಂಚ ಏರಿಕೆಯಾಗಿದೆ. ಇನ್ನು ಆರೋಗ್ಯ ಇಲಾಖೆಯ ಬುಲೆಟಿನ್ ಪ್ರಕಾರ ಕಳೆದ 24 ಗಂಟೆಗಳಲ್ಲಿ 564 ಮಂದಿ ಮೃತಪಟ್ಟಿದ್ದಾರೆ. ಇದರೊಂದಿಗೆ ದೇಶದಲ್ಲಿ ಕೊರೋನಾದಿಂದಾಗಿ ಮರಣಿಸಿದವರ ಸಂಖ್ಯೆ 1,32,726ಕ್ಕೆ ಏರಿಕೆಯಾಗಿದೆ.
ಇನ್ನು ನಿನ್ನೆ ಒಂದೇ ದಿನದಲ್ಲಿ 49,715 ಮಂದಿ ಕೊರೋನಾ ಸೋಂಕಿನಿಂದ ಚೇತರಿಸಿಕೊಂಡಿದ್ದು, ಸೋಂಕಿನಿಂದ ಗುಣಮುಖರಾದವರ ಸಂಖ್ಯೆ 84,78,124ಕ್ಕೆ ಏರಿಕೆಯಾಗಿದೆ. ದೇಶದಲ್ಲಿ ಸದ್ಯ ಒಟ್ಟು 4,39,747 ಸಕ್ರಿಯ ಪ್ರಕರಣಗಳಿದ್ದು ಸೋಂಕಿತರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ದೇಶದಲ್ಲಿ ನಿನ್ನೆ ಒಂದೇ ದಿನದಲ್ಲಿ 10,66,022 ಜನರಿಗೆ ಕೋವಿಡ್ ಸ್ಯಾಂಪಲ್ ಟೆಸ್ಟ್ ಮಾಡಲಾಗಿದ್ದು, ದೇಶದಲ್ಲಿ ಈವರೆಗೆ 13,06,57,808 ಜನರನ್ನು ಸ್ಯಾಂಪಲ್ ಟೆಸ್ಟ್ ಗೆ ಒಳಪಡಿಸಲಾಗಿದೆ ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ (ಐಸಿಎಂಆರ್ )ತಿಳಿಸಿದೆ.