Friday, May 14, 2021
No menu items!
Home Bharata ದೇಶದಲ್ಲಿ ಚಿರತೆ ಸಂಖ್ಯೆ ಏರಿಕೆ; ಮಧ್ಯಪ್ರದೇಶ ಫಸ್ಟ್, ಕರ್ನಾಟಕಕ್ಕೆ ಎರಡನೇ ಸ್ಥಾನ

ದೇಶದಲ್ಲಿ ಚಿರತೆ ಸಂಖ್ಯೆ ಏರಿಕೆ; ಮಧ್ಯಪ್ರದೇಶ ಫಸ್ಟ್, ಕರ್ನಾಟಕಕ್ಕೆ ಎರಡನೇ ಸ್ಥಾನ

ನವದೆಹಲಿ: “ಚಿರತೆಗಳ ಸ್ಥಿತಿ ಭಾರತ-2018″ವರದಿಯನ್ನು ಇಂದು ಬಿಡುಗಡೆ ಮಾಡಿದ ಕೇಂದ್ರ ಪರಿಸರ ಸಚಿವ,ಪ್ರಕಾಶ್ ಜಾವಡೇಕರ್ ದೇಶದಲ್ಲಿ ಚಿರತೆಗಳ ಸಂಖ್ಯೆಯಲ್ಲಿ ಗಣನೀಯ ಏರಿಕೆಯಾಗಿದೆ ಎಂದು ತಿಳಿಸಿದ್ದಾರೆ.

ಚಿರತೆಗಳ ಜನಸಂಖ್ಯೆಯನ್ನು ಕ್ಯಾಮೆರಾ ಟ್ರ್ಯಾಪಿಂಗ್ ವಿಧಾನವನ್ನು ಬಳಸಿಕೊಂಡು ಅಂದಾಜಿಸಲಾಗಿದ್ದು, 2014 ರಲ್ಲಿ ಸುಮಾರು 8,000ದಲ್ಲಿದ್ದ ಭಾರತದ ಚಿರತೆಗಳ ಸಂಖ್ಯೆಯು, 2018 ರಲ್ಲಿ 12,000 ಕ್ಕಿಂತ ಹೆಚ್ಚಾಗಿದೆ ಎಂದು ಪರಿಸರ ಸಚಿವರು ತಿಳಿಸಿದ್ದಾರೆ.

ಸಂಖ್ಯೆಯು 12,852 ಎಂದು ಅಂದಾಜಿಸಲಾಗಿದ್ದು, ಮಧ್ಯಪ್ರದೇಶದಲ್ಲಿ ಗರಿಷ್ಠ 3,421, ಮತ್ತು ಕರ್ನಾಟಕದಲ್ಲಿ 1,783 ಮತ್ತು ಮಹಾರಾಷ್ಟ್ರದಲ್ಲಿ 1,690 ಚಿರತೆಗಳಿವೆ.ಪ್ರದೇಶವಾರು ಹಂಚಿಕೆಗೆ ಸಂಬಂಧಿಸಿದಂತೆ, ಮಧ್ಯ ಭಾರತ ಮತ್ತು ಪೂರ್ವ ಘಟ್ಟಗಳಲ್ಲಿ ಅತಿ ಹೆಚ್ಚು ಅಂದರೆ 8,071 ಚಿರತೆಗಳು ಕಂಡುಬಂದಿವೆ.

ಕಾಡು ಪ್ರಾಣಿಗಳ ರಕ್ಷಣೆಗೆ ಕೇಂದ್ರ ಸರ್ಕಾರ ಸಾಕಷ್ಟು ಕ್ರಮಗಳನ್ನು ಕೈಗೊಳ್ಳುತ್ತಾ ಬರುತ್ತಿದೆ.ಈ ಹಿನ್ನೆಲೆಯಲ್ಲಿ ಚಿರತೆ ಸಂಖ್ಯೆ ಹೆಚ್ಚಿದೆ ಎಂದು ಕೇಂದ್ರ ಸರ್ಕಾರ ಅಭಿಪ್ರಾಯಪಟ್ಟಿದೆ.ಅಲ್ಲದೇ ಒಂದೇ ವರ್ಷದಲ್ಲಿ ಶೇ 60ರಷ್ಟು ಹೆಚ್ಚಳ ದಾಖಲಿಸಿರುವ ವರದಿ ಅಚ್ಚರಿ ಮೂಡಿಸಿದೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments