Saturday, June 19, 2021
No menu items!
Home Karnataka ಆಡಳಿತ ನಡೆಸುವವರಿಗೆ ಸಂವಿಧಾನದ ಬಗ್ಗೆ ತಿಳಿದಿರಬೇಕು, ಅವರಿಗೆ ನಾನೇ ಪಾಠ ಮಾಡ್ತೇನೆ : ಸಿದ್ದರಾಮಯ್ಯ

ಆಡಳಿತ ನಡೆಸುವವರಿಗೆ ಸಂವಿಧಾನದ ಬಗ್ಗೆ ತಿಳಿದಿರಬೇಕು, ಅವರಿಗೆ ನಾನೇ ಪಾಠ ಮಾಡ್ತೇನೆ : ಸಿದ್ದರಾಮಯ್ಯ

ಬೆಂಗಳೂರು: ರಾಜ್ಯ ಬಿಜೆಪಿ ಸರ್ಕಾರ ಆಡಳಿತದ ವೈಫಲ್ಯಗಳನ್ನು ಮರೆಮಾಚಲು, ಜನರ ಗಮನವನ್ನು ಬೇರೆಡೆ ಸೆಳೆಯಲು ಲವ್ ಜಿಹಾದ್, ಗೋಹತ್ಯೆ ನಿಷೇಧ ಕಾನೂನು ಎಂದು ಬಡಬಡಿಸುತ್ತಿದೆ. ಇದು ಬಿಜೆಪಿ ನಾಯಕರ ಹತಾಶ ಪ್ರಯತ್ನ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ಗೋಹತ್ಯೆ ನಿಷೇಧದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಗೋಹತ್ಯೆ ನಿಷೇಧ ಕಾಯ್ದೆಯ ಬಗ್ಗೆ ನಮ್ಮ ನಿಲುವಿನಲ್ಲಿ ಬದಲಾವಣೆಯಿಲ್ಲ. ಹಿಂದಿನ ಬಿಜೆಪಿ ಸರ್ಕಾರ 1964ರ ಗೋಹತ್ಯೆ ನಿಷೇಧ ಕಾಯ್ದೆಗೆ ತಂದಿದ್ದ ತಿದ್ದುಪಡಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಿ ಮೂಲ ಕಾಯ್ದೆಯನ್ನು ಉಳಿಸಿಕೊಂಡಿದೆ. ಈ ನಿಲುವಿಗೆ ನಾವು ಬದ್ಧರಾಗಿದ್ದೇವೆ. ಈ ಲವ್ ಜಿಹಾದ್, ಗೋಹತ್ಯೆ ನಿಷೇಧದ ಮಾತುಗಳೆಲ್ಲ ತಮ್ಮ ಆಡಳಿತ ವೈಫಲ್ಯದಿಂದ ಜನಮನವನ್ನು ಬೇರೆಡೆ ಸೆಳೆಯುವ ಹತಾಶ ಪ್ರಯತ್ನ. ಅವರಿಗೆ ಸಾಧನೆಯ ಬಲದಿಂದ ಚುನಾವಣೆ ಗೆಲ್ಲುವ ಆತ್ಮವಿಶ್ವಾಸ ಇಲ್ಲ. ಇದಕ್ಕಾಗಿ ಕೋಮುದ್ವೇಷ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ ಎಂದಿದ್ದಾರೆ.

ಮದುವೆಗೆ ಜಾತಿ-ಧರ್ಮಗಳ ನಿರ್ಬಂಧ ಕಾನೂನಿನಲ್ಲಿ ಇಲ್ಲ. ದೇಶದ ಯಾವ ಕಾನೂನು ಕೂಡಾ ಲವ್ ಜೆಹಾದ್ ಎಂದರೆ ಏನು ಎಂದು ವ್ಯಾಖ್ಯಾನಿಸಿಲ್ಲ ಎಂದು ಕೇಂದ್ರ ಗೃಹಸಚಿವರೇ ಸಂಸತ್ ನಲ್ಲಿ ಹೇಳಿದ್ದಾರೆ. ಸಿ.ಟಿ.ರವಿಯವರು ಗೃಹಸಚಿವರನ್ನು ಕೇಳಿಕೊಂಡು ಬಂದು ಮಾತನಾಡಲಿ.

ಅಲಹಾಬಾದ್ ಹೈಕೋರ್ಟ್ ತನ್ನ ತೀರ್ಪಿನಲ್ಲಿ ಅಂತರಧರ್ಮೀಯ ಮದುವೆ ಅಕ್ರಮ ಎಂದು ಹೇಳಿಲ್ಲ. ಆ ತೀರ್ಪನ್ನು ಉಲ್ಲೇಖಿಸುವವರು ಮೊದಲು ಅದನ್ನು ಓದಿಕೊಳ್ಳಲಿ. ಗೂಂಡಾರಾಜ್ಯವಾದ ಉತ್ತರಪ್ರದೇಶ ನಮಗೆ ಮಾದರಿ ಅಲ್ಲ.


ಆರ್ ಎಸ್ ಎಸ್ ಶಾಖೆಗೆ ಹೋಗಿ ನಾನು ಕಲಿಯಬೇಕಾಗಿಲ್ಲ, ಅದರ ಬಗ್ಗೆ ತಿಳಿದುಕೊಂಡೇ ವಿರೋಧಿಸುತ್ತಿದ್ದೇನೆ, ಆಡಳಿತ ನಡೆಸುವವರಿಗೆ ಸಂವಿಧಾನ ಗೊತ್ತಿರಬೇಕು, ಆರ್ ಎಸ್ ಎಸ್ ಅಲ್ಲ. ಬಿಜೆಪಿ ನಾಯಕರು ಮೊದಲು ಸಂವಿಧಾನವನ್ನು ಓದಲಿ. ಬೇಕಾದರೆ ನಾನೇ ಸಂವಿಧಾನದ ಪಾಠ ಮಾಡ್ತೇನೆ. ಬಿಜೆಪಿ ಮತ್ತು ಆರ್ ಎಸ್ ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿ ವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು ಎಂದು ಹೇಳಿದರು.

ಮತ್ತು ಆರ್ ಎಸ್ ಎಸ್ ಮೂಲಭೂತವಾಗಿ ಸಂವಿಧಾನ ವಿರೋಧಿ. ಅದು ಮೀಸಲಾತಿ, ಸಾಮಾಜಿಕ ನ್ಯಾಯ, ಆರ್ಥಿಕ ಸಮಾನತೆ ಎಲ್ಲವನ್ನೂ ವಿರೋಧಿಸುತ್ತದೆ. ಅವರು ಮಿಲ್ಲರ್ ವರದಿಯಿಂದ ಮಂಡಲ್ ವರದಿ ವರಗೆ ಮೀಸಲಾತಿಯನ್ನು ವಿರೋಧಿಸುತ್ತಾ ಬಂದವರು, ಮನುಸ್ಮೃತಿಗೆ ಬದ್ಧರಾಗಿರುವವರು” ಎಂದು ಆಕ್ರೋಶ ವ್ಯಕ್ತಪಡಿಸಿ ಸರಣಿ ಟ್ವೀಟ್ ಮಾಡಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments