Wednesday, June 16, 2021
No menu items!
Home Latest ಭಾರತ- ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಗಳ ಟಿಕೆಟ್ ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್..!

ಭಾರತ- ಆಸ್ಟ್ರೇಲಿಯಾ ಕ್ರಿಕೆಟ್ ಪಂದ್ಯಗಳ ಟಿಕೆಟ್ ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್..!

ಸಿಡ್ನಿ: ಕೊರೋನಾ ಹಾವಳಿಯಿಂದಾಗಿ ಇಷ್ಟು ದಿನ ಪ್ರೇಕ್ಷಕರಿಗೆ ಕ್ರೀಡಾಂಗಣದ ಬಾಗಿಲುಗಳು ಮುಚ್ಚಿದ್ದವು. ಇದೀಗ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ನ. 27 ರಿಂದ ಶುರುವಾಗಲಿರುವ ಏಕದಿನ ಮತ್ತು ಟಿ-20 ಕ್ರಿಕೆಟ್ ಸರಣಿಗೆ ಪ್ರೇಕ್ಷಕರಿಗೆ ಕ್ರೀಡಾಂಗಣ ಮುಕ್ತವಾಗಲಿದ್ದು, ಎಲ್ಲಾ ಟಿಕೆಟ್ ಗಳು ಕೆಲವೇ ಗಂಟೆಗಳಲ್ಲಿ ಸೋಲ್ಡ್ ಔಟ್ ಆಗಿವೆ.

ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ 3 ಏಕದಿನ ಹಾಗೂ 3 ಟಿ20 ಪಂದ್ಯಗಳು ನಡೆಯಲಿವೆ. ನ. 27, 29 ಮತ್ತು ಡಿ. 2ರಂದು ಏಕದಿನ; ಡಿ. 4, 6 ಮತ್ತು 8ರಂದು ಟಿ20 ಪಂದ್ಯಗಳು ನಡೆಯಲಿವೆ.ಸಿಡ್ನಿ ಮತ್ತು ಕ್ಯಾನ್‌ಬೆರಾದಲ್ಲಿ ನಡೆಯಲಿರುವ ಈ ಕ್ರಿಕೆಟ್ ಹಬ್ಬಕ್ಕೆ ಕ್ರೀಡಾಭಿಮಾನಿಗಳು ಫುಲ್ ಜೋಶ್ ತುಂಬಿದ್ದು ಎಲ್ಲಾ ಟಿಕೆಟ್ ಬಿಕರಿ ಮಾಡಿ ಆಟಗಾರರಿಗೆ ಮತ್ತು ಆಯೋಜಕರಿಗೆ ಸಂತಸ ನೀಡಿದ್ದಾರೆ.

ಕೋವಿಡ್ 19 ವೈರಸ್ ಹಾವಳಿಯಿಂದ ಪ್ರೇಕ್ಷಕರಿಗೆ ನಿರ್ಭಂಧ ವಿಧಿಸಿದ್ದ ಕ್ರೀಡಾಂಗಣಗಳು ಇದೀಗ 117 ದಿನಗಳ ಬಳಿಕ ವೀಕ್ಷಕರಿಗೆ ಸ್ಟೇಡಿಯಂ ಬಾಗಿಲು ತೆರೆಯುತ್ತಿದೆ. ಕೊರೋನಾ ಶುರುವಾದ ಬಳಿಕ ಪ್ರೇಕ್ಷಕರಿಗೆ ಮೊದಲ ಬಾರಿಗೆ ಕ್ರೀಡಾಂಗಣ ಪ್ರವೇಶ ನೀಡುತ್ತಿರುವ ಹೆಗ್ಗಳಿಕೆ ಆಸ್ಟ್ರೇಲಿಯದ್ದಾಗಿದೆ. ಆದರೂ ಕೊರೋನಾ ಭೀತಿಯಿಂದಾಗಿ ಸಾಮಾಜಿಕ ಅಂತರ ಕಾಯ್ದುಕೊಂಡು, ಸ್ಟೇಡಿಯಂ ಸಾಮರ್ಥ್ಯದ ಅರ್ಧದಷ್ಟು ಮಂದಿಗೆ ಅವಕಾಶ ಕಲ್ಪಿಸಲು ಆಸ್ಟ್ರೇಲಿಯ ಕ್ರಿಕೆಟ್ ಮಂಡಳಿ ಮುಂದಾಗಿದೆ.

ಇನ್ನು ಭಾರತ ಕ್ರಿಕೆಟ್ ತಂಡ ಕೂಡಾ 8 ತಿಂಗಳ ಬಳಿಕ ಮೊದಲ ಕ್ರಿಕೆಟ್ ಸರಣಿಗೆ ಅಣಿಯಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅಭಿಮಾನಿಗಳು ಪಂದ್ಯ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದಾರೆ.ಮೊದಲ ಏಕದಿನ ಪಂದ್ಯದ ಸುಮಾರು 1,900 ಟಿಕೆಟ್‌ಗಳಷ್ಟೇ ಸದ್ಯ ಮಾರಾಟವಾಗದೆ ಬಾಕಿ ಉಳಿದಿದ್ದು, ಉಳಿದಂತೆ 2 ಏಕದಿನ ಮತ್ತು 3 ಟಿ20 ಪಂದ್ಯಗಳ ಟಿಕೆಟ್ ಸಂಪೂರ್ಣ ಮಾರಾಟವಾಗಿವೆ. ಶುಕ್ರವಾರ ಬೆಳಗ್ಗೆಯಷ್ಟೇ ಟಿಕೆಟ್ ಮಾರಾಟ ಪ್ರಕ್ರಿಯೆ ಶುರುವಾಗಿತ್ತು.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments