Saturday, May 15, 2021
No menu items!
Home Bharata ಹೈವೋಲ್ಟೇಜ್ ಅಖಾಡ ಹೈದರಾಬಾದ್ ನಗರ ಪಾಲಿಕೆ ಚುನಾವಣೆ; ಇಂದು ಫಲಿತಾಂಶ

ಹೈವೋಲ್ಟೇಜ್ ಅಖಾಡ ಹೈದರಾಬಾದ್ ನಗರ ಪಾಲಿಕೆ ಚುನಾವಣೆ; ಇಂದು ಫಲಿತಾಂಶ

ಹೈದ್ರಾಬಾದ್; ಹೈವೋಲ್ಟೇಜ್ ಅಖಾಡವಾಗಿ ಮಾರ್ಪಟ್ಟಿದ್ದ ಹೈದ್ರಾಬಾದ್ ನಗರ ಪಾಲಿಕೆ ಚುನಾವಣೆಯ ಫಲಿತಾಂಶ ಇಂದು ಹೊರಬೀಳಲಿದೆ. ಬೆಳಿಗ್ಗೆ 8 ಗಂಟೆಗೆ ಮತ ಎಣಿಕೆ ಕಾರ್ಯಶುರುವಾಗಿದೆ. ಸಾಯಂಕಾಲದ ವೇಳೆಗೆ ಫಲಿತಾಂಶ ಹೊರಬೀಳಲಿದ್ದು ಮಹಾನಗರ ಪಾಲಿಕೆಯ ಗದ್ದುಗೆ ಯಾರು ಏರಲಿದ್ದಾರೆ ಎಂಬುದು ತಿಳಿಯಲಿದೆ.

ಹೈದರಾಬಾದ್ ನಗರ ಪಾಲಿಕೆ ಕಣ ಬಿಜೆಪಿ-ಟಿಆರ್ ಎಸ್ ಗೆ ಪ್ರತಿಷ್ಠೆಯ ಕಣವಾಗಿದೆ. ಆದ್ದರಿಂದ ಘಟಾನುಘಟಿ ನಾಯಕರು ಹೈದ್ರಾಬಾದ್ ನಲ್ಲಿ ಚುನಾವಣಾ ಪ್ರಚಾರ ನಡೆಸಿದ್ದರು. ಬಿಜೆಪಿ ಚಾಣಾಕ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ, ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್, ರಾಜ್ಯದ ಸಚಿವರಾದ ಸುಧಾಕರ್, ಈಶ್ವರಪ್ಪ ಸೇರಿದಂತೆ ಹಲವರು ಹೈದರಾಬಾದ್ ನಗರ ಪಾಲಿಕೆಯ ಚುನಾವಣಾ ಪ್ರಚಾರ ಸಭೆಗಳಲ್ಲಿ ಭಾಗವಹಿಸಿದ್ದರು.

ಹೈದರಾಬಾದ್ ನ ಒಟ್ಟು 150 ವಾರ್ಡ್ ಗಳ ಚುನಾವಣೆಗೆ ಡಿಸೆಂಬರ್ 1 ರಂದು ಮತದಾನ ನಡೆದಿತ್ತು. ಕೋವಿಡ್ ಹಿನ್ನೆಲೆಯಲ್ಲಿ ಮತ ಪತ್ರಗಳನ್ನು ಬಳಸಿ ಚುನಾವಣೆ ನಡೆಸಲಾಗಿದೆ. ಒಟ್ಟು 1,122 ಅಭ್ಯರ್ಥಿಗಳು ಸ್ಪರ್ಧಿಸಿದ್ದರು.74.67 ಲಕ್ಷ ಮತದಾರರಲ್ಲಿ 34.50 ಲಕ್ಷ ಮತದಾರರು ಅಂದರೇ ಶೇಕಡಾ .46.55 ರಷ್ಟು ಮತದಾನ ಮಾಡಿದ್ದರು. ಇಂದು ಫಲಿತಾಂಶ ಹೊರಬೀಳಲಿದ್ದು ಸ್ಪರ್ಧಿಗಳ ಭವಿಷ್ಯ ನಿರ್ಧಾರವಾಗಲಿದೆ.

ಮತ ಎಣಿಕೆಗೆ ಅಗತ್ಯ ಭದ್ರತಾ ಕ್ರಮಗಳನ್ನು ಕೈಗೊಂಡಿರುವ ತೆಲಂಗಾಣ ರಾಜ್ಯ ಚುನಾವಣಾಧಿಕಾರಿಗಳು, ಮತ ಎಣಿಕಾ ಕೇಂದ್ರಗಳ ಸುತ್ತ ನಿಷೇದಾಜ್ಞೆ ಜಾರಿ ಮಾಡಿದ್ದಾರೆ.30 ಸ್ಥಳಗಳಲ್ಲಿ ಮತ ಏಣಿಕೆ ಪ್ರಕ್ರಿಯೆ ನಡೆಯಲಿದ್ದು, 8 ಸಾವಿರ ಮಂದಿ ಕಾರ್ಯನಿರ್ವಹಿಸಲಿದ್ದಾರೆ

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments