Saturday, May 15, 2021
No menu items!
Home Latest ಇಂದು ಇಂಡೋ-ಆಸೀಸ್ ಮೊದಲ ಟೆಸ್ಟ್ ಕದನ

ಇಂದು ಇಂಡೋ-ಆಸೀಸ್ ಮೊದಲ ಟೆಸ್ಟ್ ಕದನ

ಅಡಿಲೇಡ್: ಇಂದು ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ನಡುವೆ ಮೊದಲ ಪಿಂಕ್ ಬಾಲ್ ಟೆಸ್ಟ್ ಕದನ ನಡೆಯಲಿದ್ದು, ಹಗಲು – ರಾತ್ರಿ ಪಂದ್ಯಕ್ಕೆ ಅಡಿಲೇಡ್ ಕ್ರೀಡಾಂಗಣ ಸಜ್ಜಾಗಿದೆ. ಒಂಬತ್ತು ತಿಂಗಳ ಬಳಿಕ ಟೀಂ ಇಂಡಿಯಾ ಪ್ರತಿಷ್ಠಿತ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಆಡಲು ಸಜ್ಜಾಗಿದ್ದು ಕ್ರಿಕೆಟ್ ಪ್ರೇಮಿಗಳಲ್ಲಿ ಇಂದಿನ ಪಂದ್ಯ ಭಾರೀ ಕುತೂಹಲ ಮೂಡಿಸಿದೆ.

ಕಳೆದ ವರ್ಷ ಇದೇ ಟೆಸ್ಟ್ ಸರಣಿಯನ್ನು ವಿರಾಟ್ ಕೊಹ್ಲಿ ಬಳಗ ಗೆದ್ದು ದಾಖಲೆ ನಿರ್ಮಿಸಿತ್ತು. ಈ ಬಾರಿ ಸರಣಿ ಗೆಲುವು ಸುಲಭವಾಗಿಲ್ಲ. ಎರಡೂ ತಂಡಗಳಲ್ಲೂ ಪ್ರಮುಖ ಆಟಗಾರರು (ಭಾರತದಲ್ಲಿ ರೋಹಿತ್ ಶರ್ಮಾ, ಆಸ್ಟ್ರೇಲಿಯಾದಲ್ಲಿ ಡೇವಿಡ್ ವಾರ್ನರ್) ಹೊರಗಿದ್ದಾರೆ.

ಹೊನಲು-ಬೆಳಕಿನಲ್ಲಿ ನಡೆಯಲಿರುವ ಮೊದಲ ಟೆಸ್ಟ್​ ಪಂದ್ಯವನ್ನು ವೀಕ್ಷಿಸಲು ಇಡೀ ವಿಶ್ವ ಕ್ರಿಕೆಟ್ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಅಡಿಲೇಡ್​ನ ಓವಲ್ ಮೈದಾನದಲ್ಲಿ ನಡೆಯಲಿರುವ ಈ ಪಂದ್ಯವು ಬೆಳಗ್ಗೆ 9:30ಕ್ಕೆ ಆರಂಭವಾಗಲಿದೆ.

ಇನ್ನೂ ಎರಡನೇ ಟೆಸ್ಟ್ ಡಿಸೆಂಬರ್ 26 ರಿಂದ 30ರವರೆಗೆ ಮೆಲ್ಬೋರ್ನ್​ನಲ್ಲಿ, 3ನೇ ಟೆಸ್ಟ್ ಪಂದ್ಯ ಜನವರಿ 7 ರಿಂದ 11 ರವರೆಗೆ ಸಿಡ್ನಿ ಮೈದಾನದಲ್ಲಿ ಹಾಗೂ ಅಂತಿಮ ಟೆಸ್ಟ್​ ಬ್ರಿಸ್ಬೇನ್​ನಲ್ಲಿ ಜನವರಿ 15 ರಿಂದ 19 ರವರೆಗೆ ನಡೆಯಲಿದೆ.

ತಂಡಗಳು;

ಭಾರತ (ಅಂತಿಮ 11): ಮಯಾಂಕ್‌ ಅಗರ್‌ವಾಲ್‌, ಪೃಥ್ವಿ ಶಾ, ಚೇತೇಶ್ವರ್‌ ಪೂಜಾರ, ವಿರಾಟ್‌ ಕೊಹ್ಲಿ(ನಾಯಕ), ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್‌ ಸಾಹ, ಆರ್‌.ಅಶ್ವಿನ್‌, ಉಮೇಶ್‌ ಯಾದವ್‌, ಮೊಹಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ.

ಆಸ್ಪ್ರೇಲಿಯಾ(ಸಂಭವನೀಯರು): ಜೋ ಬರ್ನ್ಸ್‍, ಮ್ಯಾಥ್ಯೂ ವೇಡ್‌, ಮಾರ್ನಸ್‌ ಲಬುಶೇನ್‌, ಸ್ಟೀವ್‌ ಸ್ಮಿತ್‌, ಟಿಮ್‌ ಪೈನ್‌, ಟ್ರ್ಯಾವಿಸ್‌ ಹೆಡ್‌, ಕೆಮರೂನ್‌ ಗ್ರೀನ್‌, ಪ್ಯಾಟ್‌ ಕಮಿನ್ಸ್‌, ಮಿಚೆಲ್‌ ಸ್ಟಾರ್ಕ್, ನೇಥನ್‌ ಲಯನ್‌, ಜೋಶ್‌ ಹೇಜಲ್‌ವುಡ್‌.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments