Saturday, May 15, 2021
No menu items!
Home Bharata ತ್ರಿಪುರಾದಲ್ಲಿ 90 ವರ್ಷದ ಅಜ್ಜಿಯ ಮೇಲೆ ಸಾಮೂಹಿಕ ಅತ್ಯಾಚಾರ….!

ತ್ರಿಪುರಾದಲ್ಲಿ 90 ವರ್ಷದ ಅಜ್ಜಿಯ ಮೇಲೆ ಸಾಮೂಹಿಕ ಅತ್ಯಾಚಾರ….!

ತ್ರಿಪುರಾ: ದೇಶದಲ್ಲಿ ರಕ್ಕಸ ಜಾತಿಯ ಕಟುಕ ನರಮನುಷ್ಯರು ಇನ್ನೂ ಜೀವಂತವಾಗಿದ್ದಾರೆ ಎನ್ನುವುದಕ್ಕೆ ಸಾಕ್ಷಿಯಂತಿದೆ ಈ ಘಟನೆ. ಇತ್ತೀಚೆಗಷ್ಟೇ ನಡೆದ ಹತ್ರಾಸ್ ಗ್ಯಾಂಗ್ ರೇಪ್ ಪ್ರಕರಣ ಇನ್ನೂ ಜೀವಂತವಾಗಿರುವಾಗಲೇ ಅಗರ್ತಲಾದ ತ್ರಿಪುರಾದಲ್ಲಿ ಇದಕ್ಕಿಂತಲೂ ಕ್ರೂರವಾದ ಇನ್ನೊಂದು ಪ್ರಕರಣ ದಾಖಲಾಗಿದೆ. 90 ವರ್ಷದ ವೃದ್ಧೆಯ ಮೇಲೆ ಇಬ್ಬರು ದುಷ್ಕರ್ಮಿಗಳು ಸಾಮೂಹಿಕ ಅತ್ಯಾಚಾರ ನಡೆಸಿದ್ದು , ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಉತ್ತರ ತ್ರಿಪುರಾ ಜಿಲ್ಲೆಯ ಕಾಂಚನಪುರ ಉಪ ವಿಭಾಗದ ಬರ್ಹಾಲ್ದಿ ಗ್ರಾಮದಲ್ಲಿ ಈ ಅಮಾನವೀಯ ಘಟನೆ ನಡೆದಿದೆ. ಅ.24 ರಂದೇ ಈ ಘಟನೆ ನಡೆದಿದ್ದು , ಸಂಬಂಧಿಕರು ಅಕ್ಟೋಬರ್ 29 ರಂದು ದೂರು ದಾಖಲಿಸಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

ವೃದ್ಧೆ ಏಕಾಂಗಿಯಾಗಿ ತನ್ನ ಮನೆಯಲ್ಲಿ ಜೀವಿಸುತ್ತಿದ್ದರು. ಅಕ್ಟೋಬರ್ 24 ರಂದು ವೃದ್ದೆಯ ಮನೆಗೆ ಬಾಗಿಲು ಒಡೆದು ಒಳ ಬಂದ ಇಬ್ಬರು ದುಷ್ಕರ್ಮಿಗಳು ವೃದ್ಧೆಯ ಮೇಲೆ ಸಾಮೂಹಿಕ ಅತ್ಯಾಚಾರವೆಸಗಿ ಪರಾರಿಯಾಗಿದ್ದಾರೆ. ಘಟನೆ ನಡೆದ 5 ದಿನಗಳ ಬಳಿಕ ಸಂಬಂಧಿಕರ ಅರಿವಿಗೆ ಬಂದಿದ್ದು ಅಕ್ಟೋಬರ್ 29 ರಂದು ದೂರು ದಾಖಲಿಸಿದ್ದಾರೆ.

ಸದ್ಯ ವೃದ್ಧೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.ಘಟನೆ ಬಳಿಕ ವೃದ್ಧೆಯು ತೀವ್ರ ಅಸ್ವಸ್ಥರಾಗಿದ್ದಾರೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ವೃದ್ದೆಯ ಹೇಳಿಕೆ ಪಡೆದುಕೊಂಡಿದ್ದಾರೆ. ಸದ್ಯ ಆರೋಪಿಗಳು ತಲೆಮರೆಸಿಕೊಂಡಿದ್ದು ಆರೋಪಿಗಳಿಗಾಗಿ ತೀವ್ರಗತಿಯ ತನಿಖೆಯನ್ನು ಪೊಲೀಸರು ಆರಂಭಿಸಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments