ಅಮೇರಿಕಾ: ಕೊರೊನಾ ಸೋಂಕಿಗೆ ಒಳಗಾಗಿರುವ ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನು ಹೆಚ್ಚಿನ ಚಿಕಿತ್ಸೆ ಗಾಗಿ ವಾಲ್ಟರ್ ರೀಡ್ ಸೇನಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.
ಶ್ವೇತಭವನದಿಂದ ಹೆಲಿಕಾಪ್ಟರ್ ಮೂಲಕ ಡೊನಾಲ್ಡ್ ಟ್ರಂಪ್ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಉಸಿರಾಟದ ಸಮಸ್ಯೆಯಿಂದ ಬಳಲುತ್ತಿರುವ ಅವರನ್ನು ಐಸಿಯು ನಲ್ಲಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಟ್ರಂಪ್ ಆರೋಗ್ಯದಲ್ಲಿ ಮುಂದಿನ 48 ಗಂಟೆಗಳು ಅತಿ ನಿರ್ಣಾಯಕ ಎಂದು ಆಸ್ಪತ್ರೆ ಮೂಲಗಳು ಮಾಹಿತಿ ನೀಡಿವೆ.
ಮುಂಬರುವ ದಿನಗಳಲ್ಲಿ ಅಮೆರಿಕಾ ಅಧ್ಯಕ್ಷ ಚುನಾವಣೆ ಹತ್ತಿರದಲ್ಲಿದ್ದು ಟ್ರಂಪ್ ಈ ಬಾರಿಯೂ ಅಭ್ಯರ್ಥಿಯಾಗಿದ್ದಾರೆ. ಆದರೆ ಇದೀಗ ಅವರಿಗೆ ಕೊರೋನಾ ಹಿನ್ನೆಲೆಯಲ್ಲಿ ಪ್ರಚಾರ ಕಾರ್ಯಕ್ಕೆ ಹಿನ್ನಡೆಯಾಗಲಿದೆ ಎನ್ನಲಾಗುತ್ತಿದೆ.