Saturday, June 19, 2021
No menu items!
Home Karnataka ದೆಹಲಿಗೆ ಹೋಗಿದ್ದು ಕುದುರೆ ಖರೀದಿಗೆ, ಬಿಜೆಪಿ ಸೇರುವ ವಿಚಾರ ಸುಳ್ಳು : ವಿನಯ್ ಕುಲಕರ್ಣಿ

ದೆಹಲಿಗೆ ಹೋಗಿದ್ದು ಕುದುರೆ ಖರೀದಿಗೆ, ಬಿಜೆಪಿ ಸೇರುವ ವಿಚಾರ ಸುಳ್ಳು : ವಿನಯ್ ಕುಲಕರ್ಣಿ

ಧಾರವಾಡ : ಕೆಲವು ದಿನಗಳಿಂದ ಕಾಂಗ್ರೆಸ್ ಬಿಟ್ಟು ವಿನಯ್ ಕುಲಕರ್ಣಿ ಬಿಜೆಪಿ ಸೇರ್ತಾರ ಎಂಬ ಚರ್ಚೆಗಳು ಶುರುವಾಗಿದ್ದವು. ಇದೀಗ ಆ ಪ್ರಶ್ನೆಗಳಿಗೆಲ್ಲ ವಿನಯ್ ಕುಲಕರ್ಣಿ ಅವರೇ ಉತ್ತರ ಕೊಟ್ಟಿದ್ದಾರೆ.
ನಾನು ಕಾರ್ಯಕರ್ತರ ಬೆಂಬಲದಿಂದ ಬೆಳದವನು. ಕಾಂಗ್ರೆಸ್ ಪಕ್ಷವನ್ನು ಬಿಟ್ಟು ಬಿಜೆಪಿ ಸೇರುತ್ತೇನೆ ಎಂಬುದು ಬರೀ ಊಹಾಪೋಹದ ಸುದ್ದಿಯಾಗಿದೆ ಎಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಗೊಂದಲಕ್ಕೆ ತೆರೆ ಎಳೆದಿದ್ದಾರೆ
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನನ್ನನ್ನು ಯಾವುದೇ ಬಿಜೆಪಿ ನಾಯಕರು ಭೇಟಿ ಆಗಿಲ್ಲ. ರಾಜಸ್ಥಾನಕ್ಕೆ ನಾನು ಕುದುರೆ ಖರೀದಿಗೆ ಹೋಗಿದ್ದೆ. ಅಲ್ಲಿಂದ ಆರು ಕುದುರೆ ಖರೀದಿಸಿ ತಂದಿದ್ದೇನೆ. ಆದರೆ ನಾನು ಬಿಜೆಪಿ ಗೆ ಸೇರಲು ದೆಹಲಿ ಹಾಗೂ ರಾಜಸ್ಥಾನಕ್ಕೆ ಹೋಗಿದ್ದೇನೆ ಎಂಬ ಸುದ್ದಿ ಹರಿದಾಡುತ್ತಿದೆ. ಮಾಧ್ಯಮಗಳು ನನ್ನ ತೇಜೋವಧೆ ಮಾಡುವ ಕೆಲಸ ಮಾಡಬಾರದು. ರಾಜಕೀಯವಾಗಿ ಬೆಳೆಯಲು ಸಾಕಷ್ಟು ಪರಿಶ್ರಮ ಪಟ್ಟಿದ್ದೇನೆ ಎಂದರು.
ಅಲ್ಲದೆ ನಾನು ಕಾರ್ಯಕರ್ತರ ಬೆಂಬಲಿದಿಂದ ಬೆಳೆದವನು. ಹಾಗಾಗಿ ಅವರನ್ನು ಕೈ ಬಿಟ್ಟು ಪ್ರಶ್ನೆಯೇ ಇಲ್ಲ. ಏನೆ ನಿರ್ಧಾರ ತೆಗೆದುಕೊಂಡು ಕಾರ್ಯಕರ್ತರ ಅಭಿಪ್ರಾಯ ಪಡೆದು ಮುಂದೆ ಸಾಗುತ್ತೇನೆ. ಜೊತೆಗೆ ನಾನು ಪಕ್ಷ ಬಿಟ್ಟು ಹೋಗಲ್ಲ. ಒಂದು ವೇಳೆ ಹೋಗುವುದಾದರೆ ಹೇಳಿ ಹೋಗುತ್ತೇನೆ. ಕದ್ದುಮುಚ್ಚಿ ಹೋಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments