ಬೆಂಗಳೂರು : ಆರ್ ಆರ್ ನಗರ ಉಪಚುನಾವಣೆಗೆ ಇನ್ನೆನು ಕೆಲವೇ ದಿನಗಳು ಬಾಕಿ ಇವೆ. ಹೀಗಿರುವಾಗ ಅಬ್ಬರದ ಪ್ರಚಾರವು ನಡೆಯುತ್ತಿದೆ. ಈ ಬೆನ್ನಲ್ಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ದಿವಂಗತ ಟೈಗರ್ ಪ್ರಭಾಕರ್ ಅವರ ಮಗ ವಿನೋದ್ ಪ್ರಭಾಕರ್ ಮನೆಗೆ ಭೇಟಿ ನೀಡಿದ್ದಾರೆ. ಈ ಬಗ್ಗೆ ಡಿ ಕೆ ಶಿವಕುಮಾರ್ ತಮ್ಮ ಫೇಸ್ ಬುಕ್ ಪೇಜ್ ನಲ್ಲಿ ಫೋಟೋಗಳನ್ನು ಹಂಚಿಕೊಂಡಿದ್ದಾರೆ.

ಆರ್ ಆರ್ ನಗರದಲ್ಲಿರುವ ವಿನೋದ್ ಪ್ರಭಾಕರ್ ಅವರ ಮನೆಗೆ ಭೇಟಿ ನೀಡಿ, ಚುನಾವಣಾ ಪ್ರಚಾರಕ್ಕೆ ಬರುವಂತೆ ಆಹ್ವಾನ ಮಾಡಿದ್ದಾರೆ ಎನ್ನಲಾಗಿದೆ. ಇದೇ ವೇಳೆ ಮುಂದೆ ಕಾಂಗ್ರೆಸ್ ಪಕ್ಷದಲ್ಲೂ ಸ್ಥಾನಮಾನ ನೀಡುವುದಾಗಿ ಚರ್ಚೆ ನಡೆದಿದೆ ಎನ್ನಲಾಗುತ್ತಿದೆ.
ಸುಮಾರು 45 ನಿಮಿಷಗಳ ಕಾಲ ವಿನೋದ್ ಪ್ರಭಾಕರ್ ಜೊತೆ ಡಿ ಕೆ ಶಿವಕುಮಾರ್ ಮಾತುಕತೆ ನಡೆಸಿದ್ದಾರೆ. ಬಳಿಕ ಅವರ ಮನೆಯಲ್ಲೇ ಭೋಜನ ಸವಿದಿದ್ದಾರೆ. ಒಟ್ಟಾರೆ ಡಿ ಕೆ ಶಿವಕುಮಾರ್ ಆಹ್ವಾನ ಮೇರೆಗೆ ವಿನೋದ್ ಪ್ರಭಾಕರ್ ಆರ್ ಆರ್ ನಗರ ಉಪಚುನಾವಣೆ ಪ್ರಚಾರಕ್ಕೆ ಬರಲಿದ್ದಾರೆ ಎಂಬ ಸುದ್ದಿ ಇದೆ. ಕಾಂಗ್ರೆಸ್ ಅಭ್ಯರ್ಥಿ ಡಿ ಕೆ ರವಿ ಪತ್ನಿ ಕುಸುಮಾ ಪರ ಮರಿ ಟೈಗರ್ ಪ್ರಚಾರ ನಡೆಸ್ತಾರಾ ನೋಡಬೇಕು.