Friday, May 14, 2021
No menu items!
Home Bharata ಆ ಮೂರು ಕೃಷಿ ಕಾಯ್ದೆಯಲ್ಲಿ ಏನಿದೆ? ರೈತರ ಆತಂಕಕ್ಕೆ ಕಾರಣಗಳೇನು..? ಇಲ್ಲಿದೆ ಸಂಪೂರ್ಣ ಚಿತ್ರಣ

ಆ ಮೂರು ಕೃಷಿ ಕಾಯ್ದೆಯಲ್ಲಿ ಏನಿದೆ? ರೈತರ ಆತಂಕಕ್ಕೆ ಕಾರಣಗಳೇನು..? ಇಲ್ಲಿದೆ ಸಂಪೂರ್ಣ ಚಿತ್ರಣ

ನವದೆಹಲಿ: ಇಂದು ಭಾರತ್ ಬಂದ್ ಗೆ ಕರೆ ನೀಡಿರುವ ರೈತ ಸಂಘಟನೆಗಳು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾಯ್ದೆಯ ವಿರುದ್ಧ ತೀವ್ರ ಅಸಮಾಧಾನ ಹೊರಹಾಕುತ್ತಿದ್ದಾರೆ. ಇಷ್ಟಕ್ಕೂ ‘ರೈತರ ಮರಣ ಶಾಸನ’ವೆಂದೇ ಬಿಂಬಿತವಾಗಿರುವ ಆ ಕೃಷಿ ಕಾಯ್ದೆ ಯಾವುದು..? ರೈತರಿಗೇಕೆ ಇಷ್ಟೊಂದು ಆತಂಕ..? ಇಲ್ಲಿದೆ ಸಂಪೂರ್ಣ ಚಿತ್ರಣ

ಕೇಂದ್ರ ಸರ್ಕಾರ ರೈತರ ಉತ್ಪಾದನೆ ವ್ಯಾಪಾರ ಮತ್ತು ವಾಣಿಜ್ಯ ಕಾಯ್ದೆ-2020, ರೈತರ ಬೆಲೆ ಭರವಸೆ ಮತ್ತು ಕೃಷಿ ಸೇವೆಗಳ ಕಾಯ್ದೆ-2020, ಅಗತ್ಯ ಸರಕುಗಳ ತಿದ್ದುಪಡಿ ಕಾಯ್ದೆ-2020 ಎನ್ನುವ ಮೂರು ಕಾಯ್ದೆಗಳನ್ನು ಜಾರಿಗೆ ತಂದಿದೆ.

೧)ಕೃಷಿ ಮಾರುಕಟ್ಟೆ ಕಾಯ್ದೆ;

ಕೃಷಿ ಮಾರುಕಟ್ಟೆ ಕಾಯ್ದೆಯು ರೈತರು ತಾವು ಬೆಳೆದ ಬೆಳೆಯನ್ನ ಎಪಿಎಂಸಿಯ ಹೊರಗಡೆಯೂ ಮಾರಾಟ ಮಾಡಲು ಅನುವು ಮಾಡಿಕೊಡುತ್ತದೆ.

೨)ಒಪ್ಪಂದದ ಕೃಷಿ ಕಾಯ್ದೆ

ಒಪ್ಪಂದದ ಕೃಷಿ ಕಾಯ್ದೆಯು ರೈತರನ್ನ ಕೃಷಿ ಸಂಬಂಧಿತ ಉದ್ಯಮ ನಡೆಸುವ ಕಂಪನಿಗಳು ಅಥವಾ ಉತ್ಪನ್ನಕ್ಕೆ ಪೂರ್ವ ನಿಗದಿತ ಬೆಲೆಯಲ್ಲಿ ದೊಡ್ಡ ಪ್ರಮಾಣದ ಚಿಲ್ಲರೆ ವ್ಯಾಪಾರಿಗಳ ಜೊತೆ ಒಪ್ಪಂದ ಮಾಡಿಕೊಳ್ಳಲು ಅವಕಾಶ ಕಲ್ಪಿಸುತ್ತದೆ.

೩)ಅಗತ್ಯ ಸರಕುಗಳ(ತಿದ್ದುಪಡಿ) ಕಾಯ್ದೆ

ಅಗತ್ಯ ಸರಕುಗಳ ಪಟ್ಟಿಯಿಂದ ಧಾನ್ಯಗಳು, ಬೇಳೆಕಾಳುಗಳು, ಎಣ್ಣೆಬೀಜಗಳು, ಖಾದ್ಯ ತೈಲಗಳು, ಈರುಳ್ಳಿ ಮತ್ತು ಆಲೂಗಡ್ಡೆ ಮುಂತಾದ ಸರಕುಗಳನ್ನು ತೆಗೆದುಹಾಕಲು ಅಗತ್ಯ ಸರಕುಗಳ (ತಿದ್ದುಪಡಿ) ಕಾಯ್ದೆ 2020 ಅನುವು ಮಾಡಿಕೊಡುತ್ತದೆ.

ಆದರೆ ಅನ್ನದಾತರ ಅಳಲು ಬೇರೆಯದ್ದೇ ಆಗಿದ್ದು ಹೊಸ ಕೃಷಿ ಕಾಯ್ದೆಗಳು ಸದ್ಯ ಜಾರಿಯಲ್ಲಿ ಕನಿಷ್ಠ ಬೆಂಬಲ ಬೆಲೆ ವ್ಯವಸ್ಥೆಯನ್ನು ಕಿತ್ತು ಹಾಕುತ್ತವೆ ಅಲ್ಲದೇ ಈ ಕಾಯ್ದೆಗಳ ನಿಯಮಾವಳಿಗಳನ್ವಯ ಮುಂದೊಂದು ದಿನ ಕಾರ್ಪೋರೇಟ್ ಕಂಪನಿಗಳು ರೈತರ ಮೇಲೆ ಸರ್ವಾಧಿಕಾರಿಯಾಗುತ್ತವೆ ಎಂಬುದು ರೈತರ ಅಳಲಾಗಿದೆ. ಅಲ್ಲದೇ ಕಷ್ಟಕಾಲದಲ್ಲಿ ಅಲ್ಪಸ್ವಲ್ಪ ಬೆಳೆಯ ಮೇಲೆ ಆರ್ಥಿಕ ನೆರವು ನೀಡುತ್ತಿದ್ದ ಚಿಕ್ಕಪುಟ್ಟ ಕಮಿಷನ್ ಏಜೆಂಟ್ ಗಳು ಕೂಡಾ ಕಣ್ಮರೆಯಾಗುತ್ತಾರೆ ಎಂದು ಅನ್ನದಾತರು ಕೇಂದ್ರ ಸರ್ಕಾರದ ವಿರುದ್ಧ ಮುಗಿಬಿದ್ದಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments