Thursday, May 13, 2021
No menu items!
Home Karnataka ವಿಸ್ಟ್ರನ್‌ ಕಂಪನಿ ಗಲಾಟೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಜಗದೀಶ್ ಶೆಟ್ಟರ್

ವಿಸ್ಟ್ರನ್‌ ಕಂಪನಿ ಗಲಾಟೆ, ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ : ಜಗದೀಶ್ ಶೆಟ್ಟರ್

ಬೆಂಗಳೂರು: ವೇತನ ಸರಿಯಾಗಿ ಪಾವತಿ ಮಾಡದ ಹಿನ್ನೆಲೆಯಲ್ಲಿ ಇಂದು ಮುಂಜಾನೆ ಕೋಲಾರ ಜಿಲ್ಲೆಯ ವಿಸ್ಟ್ರನ್‌ ಕಂಪನಿಯಲ್ಲಿ ಆಗಿರುವ ಅಹಿತಕರ ಘಟನೆಯ ಬಗ್ಗೆ ಸರ್ಕಾರ ಮಧ್ಯಪ್ರವೇಶಿಸಿದ್ದು ಇಂತಹ ಘಟನೆಗಳು ಮುಂದೆ ನಡೆಯದಂತೆ ಮುಂಜಾಗ್ರತೆ ವಹಿಸಲಾಗುವುದು ಮತ್ತು ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌ ಎಚ್ಚರಿಕೆ ನೀಡಿದ್ದಾರೆ.

ಈ ರೀತಿಯ ಅಹಿತಕರ ಘಟನೆ ಆಗಿರುವುದು ವಿಷಾದನೀಯ. ಯಾವುದೇ ರೀತಿಯ ಸಮಸ್ಯೆಗಳಿದ್ದರೂ ಕೂಡಾ ಕಾನೂನಿನ ವಿರುದ್ದವಾಗಿ ಹೋಗುವುದು ಸರಿಯಲ್ಲ ತಮಗೆ ಆಗಿರುವ ತೊಂದರೆಯನ್ನು ಕಾನೂನಿನ ಅಡಿಯಲ್ಲಿ ಸಮರ್ಪಕವಾಗಿ ತಿಳಿಸಿದ್ದಲ್ಲಿ ಪರಿಹಾರ ಕಂಡುಕೊಳ್ಳಬಹುದಾಗಿತ್ತು.ಇಂತಹ ಅಹಿತಕರ ಘಟನೆಗಳು ಮರುಕಳಿಸದಂತೆ ನಾವು ಬಿಗಿಯಾದ ಕ್ರಮ ಕೈಗೊಳ್ಳುತ್ತೇವೆ ಎಂದು ಜಗದೀಶ್ ಶೆಟ್ಟರ್ ಹೇಳಿದ್ದಾರೆ

ಐ-ಫೋನ್ ಬಿಡಿ ಭಾಗಗಳ ತಯಾರಿಕಾ ಕಂಪನಿಯಾದ ವಿಸ್ತ್ರಾನ್ ಕಂಪನಿ ಗುತ್ತಿಗೆ ಹಾಗೂ ಒಪ್ಪಂದದ ಆಧಾರದಲ್ಲಿ ಕಾರ್ಮಿಕರನ್ನು ನೇಮಿಸಿಕೊಂಡಿತ್ತು.ಆದರೆ ಕಳೆದ ಕೆಲ ತಿಂಗಳುಗಳಿಂದ ಕಂಪನಿ ವೇತನ ನೀಡಿಲ್ಲ. ಇದರಿಂದ ರೊಚ್ಚಿಗೆದ್ದ ಸುಮಾರು 1,000ಕ್ಕೂ ಹೆಚ್ಚು ಕಾರ್ಮಿಕರು ಕಂಪನಿ ಆಡಳಿತ ಮಂಡಳಿ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಪ್ರತಿಭಟನೆ ಆರಂಭಿಸಿದ್ದಾರೆ. ಇದೇ ವೇಳೆ ಉದ್ರಿಕ್ತಗೊಂಡ ಕಾರ್ಮಿಕರು ಕಚೇರಿಯ ಗಾಜಿನ ಕಿಟಕಿ, ಬೋರ್ಡ್ ಗಳನ್ನ ಒಡೆದು ಹಾಕಿ ಅಲ್ಲಿ ನಿಂತಿದ್ದ ವಾಹನಕ್ಕೆ ಬೆಂಕಿ ಹಚ್ಚಿದ್ದಾರೆ.

ಘಟನೆ ಕುರಿತು ಸುಮಾರು 80 ಕಾರ್ಮಿಕರನ್ನು ಪೊಲೀಸರು ಬಂಧಿಸಿದ್ದಾರೆ. ನೌಕರರ ಆರೋಪದ ಕುರಿತು ವಿಸ್ಟ್ರನ್ ಕಾರ್ಪ್ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಕಂಪನಿ ಗುತ್ತಿಗೆ ಹಾಗೂ ಒಪ್ಪಂದದ ಆಧಾರದಲ್ಲಿ ಹೆಚ್ಚಿನ ಕಾರ್ಮಿಕರನ್ನು ನೇಮಿಸಿಕೊಂಡಿದೆ. ಇವರಿಗೆ ಸರಿಯಾಗಿ ವೇತನ ನೀಡುತ್ತಿಲ್ಲ. ತಕ್ಷಣವೇ ವೇತನ ನೀಡಬೇಕು ಎಂದು ಟ್ರೇಡ್ ಯೂನಿಯನ್ ಮುಖಂಡರು ಎಚ್ಚರಿಸಿದ್ದಾರೆ

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments