ಬೆಂಗಳೂರು : ಆರ್ ಆರ್ ನಗರ ಉಪಚುನಾವಣೆಯ ಕಣ ಬಿಸಿಯಾಗಿದೆ. ಪಕ್ಷಗಳು ತಮ್ಮ ತಮ್ಮ ಅಭ್ಯರ್ಥಿಗಳ ಪರ ಅಬ್ಬರದ ಪ್ರಚಾರ ನಡೆಸುತ್ತಿದ್ದು, ಈ ನಡುವೆ ವಿರೋಧ ಪಕ್ಷಗಳ ಮೇಲೆ ಟೀಕೆಯನ್ನು ಮಾಡುತ್ತಿದ್ದಾರೆ. ಇಂದು ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಪರ ಡಿ ಕೆ ಶಿವಕುಮಾರ್ ಪ್ರಚಾರ ನಡೆಸಿದ್ದು, ಈ ವೇಳೆ ಮುನಿರತ್ನ ವಿರುದ್ಧ ಗುಡುಗಿದ್ದಾರೆ.
ಉಪಚುನಾವಣೆಯಾದ ಬಳಿಕ ಬಿಜೆಪಿಯಲ್ಲಿ ಸಿಎಂ ಬದಲಾವಣೆ ವಿಚಾರ ಜೋರಾಗಿಯೇ ಚರ್ಚೆಯಾಗುತ್ತಿದೆ. ಈ ವಿಚಾರ ಇಟ್ಟಕೊಂಡು ಮುನಿರತ್ನಗೆ, ಡಿಕೆಶಿ ಟಾಂಗ್ ಕೊಟ್ಟಿದ್ದಾರೆ. ಈ ಚುನಾವಣೆ ಮುಗಿದ ಮೇಲೆ ಯಡಿಯೂರಪ್ಪನವರನ್ನು ಕೆಳಗಿಳಿಸುತ್ತಾರಂತೆ. ಯಡಿಯೂರಪ್ಪನವರು ಹೋದ್ರೆ ಮುನಿರತ್ನ ಕಥೆ ಏನು ಎಂದಿದ್ದಾರೆ.
ಕಳೆದ ಚುನಾವಣೆಯಲ್ಲಿ ನಿಮ್ಮ ಹಾಗೂ ನಮ್ಮ ಶ್ರಮವನ್ನ 50 ಕೋಟಿಗರ ಮಾರಿಕೊಂಡಿದ್ದಾರೆ. ಮಾತೃಪಕ್ಷಕ್ಕೆ ದ್ರೋಹ ಮಾಡುವುದು ಹೆತ್ತ ತಾಯಿಗೆ ದ್ರೋಹ ಮಾಡಿದಂತೆ. ಇದಕ್ಕೆ ಸರಿಯಾಗಿ ಬುದ್ಧಿ ಕಲಿಸಲು ಅವಕಾಶ ಸಿಕ್ಕಿದೆ. ಭವಿಷ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರುತ್ತದೆ. ಎಲ್ಲವೂ ಒಳ್ಳೆಯದಾಗುತ್ತದೆ ಎಂದಿದ್ದಾರೆ.