Monday, December 6, 2021
No menu items!
Home Karnataka ಮದುವೆಗಾಗಿ ಮತಾಂತರ ಸಹಿಸೆವು, ಲವ್ ಜಿಹಾದ್ ಬಗ್ಗೆ ಸಿಎಂ ಹೇಳಿದ್ದೇನು..?

ಮದುವೆಗಾಗಿ ಮತಾಂತರ ಸಹಿಸೆವು, ಲವ್ ಜಿಹಾದ್ ಬಗ್ಗೆ ಸಿಎಂ ಹೇಳಿದ್ದೇನು..?

ಮಂಗಳೂರು: ನಮ್ಮಲ್ಲಿ ಸಣ್ಣ ವಯಸ್ಸಿನ ಹೆಣ್ಣು ಮಕ್ಕಳನ್ನು ಹಣದ ಆಮೀಷವೊಡ್ಡಿ, ಪ್ರೇಮದ ನಾಟಕವಾಡಿ ಮತಾಂತರ ಮಾಡಿ ಮದುವೆಯಾಗುವ ಪ್ರಕರಣದ ಬಗ್ಗೆ ಅಧಿಕಾರಿಗಳ ಜೊತೆ ಚರ್ಚಿಸಲಾಗಿದೆ. ಮದುವೆಗಾಗಿ ಮತಾಂತರದ ಹುನ್ನಾರವನ್ನು ಸಹಿಸಲಾಗದು, ಅಂತಹ ಸಂಚನ್ನು ಹತ್ತಿಕ್ಕುವ ನಿಟ್ಟಿನಲ್ಲಿ ಬಿಗಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಸಿಎಂ ಬಿ ಎಸ್ ಯಡಿಯೂರಪ್ಪ ತಿಳಿಸಿದ್ದಾರೆ.

ಮಂಗಳೂರಿನಲ್ಲಿ ಮಾತನಾಡಿರುವ ಸಿಎಂ ಬಿ ಎಸ್ ವೈ, ರಾಜ್ಯದಲ್ಲಿ ಮತಾಂತರಕ್ಕೆ ಮುಕ್ತಿ ಹಾಡಲು ಕಠಿಣ ಕಾನೂನು ಜಾರಿ ಮಾಡಬೇಕಾದ ಅಗತ್ಯವಿದೆ ಎಂದು ಪರೋಕ್ಷವಾಗಿ ಸುಳಿವು ಕೊಟ್ಟರು.

ತಮ್ಮ ಭಾಷಣದಲ್ಲಿ ರಾಜ್ಯ ಸರ್ಕಾರ ತೆಗೆದುಕೊಂಡಿರುವ ಕ್ರಮಗಳ ಬಗ್ಗೆ ಉಲ್ಲೇಖಿಸಿದ ಬಿಎಸ್ವೈ, ಅನಿವಾರ್ಯ ಪರಿಸ್ಥಿತಿಯಲ್ಲಿ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದಿದೆ. 2023ಕ್ಕೆ ನಡೆಯಲಿರುವ ಚುನಾವಣೆಯಲ್ಲಿ ಗೆದ್ದು ನಾವು ಮತ್ತೆ ಅಧಿಕಾರ ಹಿಡಿಯಲಿದ್ದೇವೆ ಎಂದು ಅಚಲ ವಿಶ್ವಾಸ ವ್ಯಕ್ತಪಡಿಸಿದರು.

ಲವ್ ಜಿಹಾದ್ ಹೆಸರಿನಲ್ಲಿ ರಾಜ್ಯದ ಕೆಲವು ಕಡೆ ಮತಾಂತರ ನಡೆಯುತ್ತಿರುವ ಹಿನ್ನೆಲೆಯಲ್ಲಿ, ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿದ್ದು, ಇದಕ್ಕೆ ಅಂತ್ಯ ಹಾಡಲು ಕಠಿಣ ಕಾನೂನು ಜಾರಿ ಮಾಡುವ ಸುಳಿವನ್ನು ಮುಖ್ಯಮಂತ್ರಿ ಯಡಿಯೂರಪ್ಪ ನೀಡಿದ್ದಾರೆ. ಮತಾಂತರ ವಿಷಯವನ್ನು ನಮ್ಮ ಸರ್ಕಾರ ಗಂಭೀರವಾಗಿ ತೆಗೆದುಕೊಂಡಿದೆ ಎಂದು ಮುಖ್ಯಮಂತ್ರಿಗಳು ಹೇಳಿದ್ದಾರೆ.

Kinaarehttp://kinaare.in
ಕಿನಾರೆ

LEAVE A REPLY

Please enter your comment!
Please enter your name here

Most Popular

ಅಗತ್ಯದ ಸಾಮಾಗ್ರಿಗಳನ್ನು ಮನೆಗೆ ತಲಪಿಸಲಿದೆ ಸಪ್ಲೈ ಕೋ

ಕಾಸರಗೋಡು: ಲಾಕ್ ಡೌನ್ ಅವಧಿಯಲ್ಲಿ ಸಪ್ಲೈಕೋ ಕುಟುಂಬಶ್ರೀಯೊಂದಿಗೆ ಕೈ ಜೋಡಿಸಿ ಕಾಸರಗೋಡು ಜಿಲ್ಲೆಯ ಆಯ್ದ ಮಾರಾಟ ಮಳಿಗೆಗಳ ಮುಖಾಂತರ ಮನೆಗಳಿಗೇ ಅಗತ್ಯದ ಸಾಮಾಗ್ರಿ ವಿತರಣೆ ನಡೆಸಸುವ ಸೌಲಭ್ಯ ನೀಡಲಿದೆ. ವಾಟ್ಸ್ ಆಪ್ ನಂಬರ್...

ಕಾಸರಗೋಡು 919 ಮಂದಿಗೆ ಕೋವಿಡ್ ಪಾಸಿಟಿವ್, 825 ನೆಗೆಟಿವ್

ಕಾಸರಗೋಡು: ಕಾಸರಗೋಡು ಜಿಲ್ಲೆಯಲ್ಲಿ ಸೋಮವಾರ 919 ಮಂದಿಗೆ ಕೋವಿಡ್ ಪಾಸಿಟಿವ್ ಆಗಿದೆ. 825 ಮಂದಿಗೆ ಕೋವಿಡ್ ನೆಗೆಟಿವ್ ಆಗಿದೆ ಎಂದು ಜಿಲ್ಲಾ ವೈದ್ಯಾಧಿಕಾರಿ ಡಾ.ಎ.ವಿ.ರಾಮದಾಸ್ ತಿಳಿಸಿದರು. ನಿಗಾ: ಕಾಸರಗೋಡು ಜಿಲ್ಲೆಯಲ್ಲಿ 19388 ಮಂದಿ ನಿಗಾದಲ್ಲಿದ್ದಾರೆ....

ഓക്സിജൻ ശേഖരത്തിന്റെ മേൽനോട്ടം: ജില്ലാ തല സമിതി, വാർ റൂം രൂപീകരിച്ചു

കാസർഗോഡ്: ജില്ലയിലെ ഓക്സിജൻ ശേഖരം, അതിന്റെ ഉപയോഗം എന്നിവയുടെ മേൽനോട്ടത്തിനും നിരീക്ഷണത്തിനുമായി ജില്ലാ ദുരന്ത നിവാരണ അതോറിറ്റി ജില്ലാതല സമിതി രൂപീകരിച്ചു. ജില്ലയിലെ എല്ലാ ആരോഗ്യ സ്ഥാപനങ്ങൾക്കും ഓക്സിജൻ തടസ്സമില്ലാതെ ലഭ്യമാക്കാൻ ഓക്സിജൻ വാർ...

കേരളത്തിന് പുറത്തേക്ക് ഓക്സിജൻ കൊണ്ടു പോകാൻ കഴിയില്ല: പിണറായി വിജയൻ

തിരുവനന്തപുരം: ചൊവ്വാഴ്ച മുതൽ കേരളത്തിനു പുറത്തേക്ക് ഓക്സിജൻ കൊണ്ടുപോകാൻ കഴിയാത്ത സാഹചര്യമാണെന്നു പ്രധാനമന്ത്രി നരേന്ദ്ര മോദിയെ കത്തിലൂടെ അറിയിച്ചതായി മുഖ്യമന്ത്രി പിണറായി വിജയൻ (Pinarayi Vijayan) ആക്റ്റീവ് കേസുകൾ മേയ് 15 ഓടെ...

Recent Comments